ರಾಜ್ಯ

ಡೆಂಗ್ಯೂಗೆ ಹಾವೇರಿಯಲ್ಲಿ ೧೩ ವರ್ಷದ ಬಾಲಕ ಸಾವು

ಹಾವೇರಿ : ರಾಜ್ಯದಲ್ಲಿ ಡೆಂಗ್ಯೂ ಅಟ್ಟಹಾಸ ಹೆಚ್ಚಾಗಿ ಹೋಗುತ್ತಿದೆ. ಪ್ರತಿದಿನ ಒಂದಲ್ಲ ಒಂದು ಸಾವಿನ ಪ್ರಕರಣಗಳು ವರದಿಯಾಗುತ್ತಿವೆ. ಜೊತೆಗೆ ಪ್ರಕರಣಗಳ ಸಂಖ್ಯೆ ಕೂಡ ಏರಿಕೆಯಾಗುತ್ತಿದೆ.  ಹಾವೇರಿಯಲ್ಲಿಯೂ ಕೂಡ ಡೆಂಗ್ಯೂಗೆ ೧೩ ವರ್ಷದ ಬಾಲಕ ಬಲಿಯಾಗಿದ್ದಾನೆ.

ಹಾವೇರಿ ಜಿಲ್ಲೆ ರಾಣೆ ಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ೧೩ ವರ್ಷದ ಪ್ರೇಮ್‌ ಕುಮಾರ್‌ ಎಂಬ ಬಾಲಕ ಸಾವನ್ನಪ್ಪಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಕಳೆದ ಒಂದು ವಾರದಿಂದ ಪ್ರೇಮ್‌ ಕುಮಾರ್‌ ಜ್ವರದಿಂದ ಬಳಲುತ್ತಿದ್ದ. ಆಸ್ಪತ್ರೆಯಲ್ಲಿ ಆತನಿಗೆ ಚಿಕಿತ್ಸೆ ಸಹ ನೀಡಲಾಗಿತ್ತು. ಆದರೆ ಇಂದು ಪ್ರೇಮ್‌ ಕುಮಾರ್‌ ಕೊನೆಯುಸಿರೆಳೆದಿದ್ದಾನೆ. ಇನ್ನು ಸ್ಥಳಕ್ಕೆ ರಾಣೆಬೆನ್ನೂರು ಟಿಹೆಚ್‌ ಒ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ನರಪೇತಲ ರೇಣುಕಾಸ್ವಾಮಿಗೆ ಮಾತಿಗೊಂದು ಏಟು

ನೆತ್ತಿ,ಕೈ ಬೆರಳುಗಳಿಂದ ಸೋರುತ್ತಿದ್ದ ರಕ್ತ, ಬೆಳಿಗ್ಗೆಯಿಂದ ಸಂಜೆಯವರೆಗೂ ಬಿದ್ದಿತ್ತು ಹೊಡೆತ ದರ್ಶನ್‌ಗಿದ್ದ ಸಿಟ್ಟನ್ನು ಸಾರಿ ಹೇಳುತ್ತಿದ್ದವು ರೇಣುಕಾಸ್ವಾಮಿಯ ಮೈಮೇಲಿನ ಬಾಸುಂಡೆ…

11 mins ago

ರೇಣುಕಾಸ್ವಾಮಿ ಕೊಲೆಯಾದ ದಿನ ನಡೆದಿದ್ದೇನು?

ಸಿನಿಮೀಯ ಮಾದರಿಯಲ್ಲೇ ದರ್ಶನ್ ಹೊಡೆತ; ರೇಣುಕಾಸ್ವಾಮಿಗೆ ಬಿದ್ದ ಪ್ರತಿ ಏಟಿನಲ್ಲೂ ಇತ್ತು ದರ್ಶನ್ ಸಿಟ್ಟು  ಮಾಫಿ ಸಾಕ್ಷಿಯಾದ 14ನೇ ಆರೋಪಿ:…

29 mins ago

ಓದುಗರ ಪತ್ರ: ಅರಿವು ಹೆಚ್ಚಿಸುವ ಚೆನ್ನಬಸವಣ್ಣ ಅವರ ಲೇಖನ

ವಿಐಪಿಗಳು ಬಂದಾಗ ಇಲ್ಲವೆ, ದೊಡ್ಡ ಸಮಾರಂಭಗಳು ಇಲ್ಲವೆ ಪ್ರತಿಭಟನೆಗಳನ್ನು ಹಮ್ಮಿಕೊಂಡಿದ್ದ ಸಂದರ್ಭದಲ್ಲಿ ಮಾಧ್ಯಮಗಳಲ್ಲಿ ಬಿಗಿ ಬಂದೋಬಸ್ತ್ ಪದ ಬಳಕೆಯ ಪರಿಚಯ…

4 hours ago

ಓದುಗರ ಪತ್ರ: ಹೊಸ ರಾಜ್ಯಪಾಲರು ರಾಜ್ಯದ ಪ್ರಗತಿಗೆ ಮಾರ್ಗದರ್ಶನ ನೀಡಲಿ

ರಾಜ್ಯದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ ಹೊರಡಿಸಿದ್ದು, ರಾಜ್ಯದ ರಾಜ್ಯಪಾಲರಾಗಿ…

5 hours ago

ಓದುಗರ ಪತ್ರ: ದರ ವ್ಯತ್ಯಾಸ: ಗ್ರಾಹಕರ ಹಿತವೇ ಮುಖ್ಯ

ಔಷಧಿಗಳ ನೈಜ ದರಕ್ಕೂ ಮತ್ತು ಮಾರಾಟ ದರಕ್ಕೂ ಅಜಗಜಾಂತರ ವ್ಯತ್ಯಾಸ ಇರುವುದನ್ನು ಇತ್ತೀಚೆಗೆ ದೇಶದ ಸರ್ವೋಚ್ಚ ನ್ಯಾಯಾಲಯ ಗಮನಿಸಿ ತೀವ್ರ…

5 hours ago

ದೇವಭೂಮಿ ದ್ವಾರಕಾದ ‘ಮೀಟಾಪುರ್ ಮದರ್ ಥೆರೇಸಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಡಪಾಯಿಗಳ ಸೇವೆ ಮಾಡಿ ಜನರ ಹೃದಯ ಗೆದ್ದ ಮಾತೆ  ಮದರ್ ಥೆರೇಸಾ ಈಗ ನಮ್ಮ…

5 hours ago