ರಾಜ್ಯ

ತಾಳಿ ಕಟ್ಟುವ ವೇಳೆಯೇ ವರ ಎಸ್ಕೇಪ್‌: ಕಾರಣ ಇಷ್ಟೇ

ಬೆಂಗಳೂರು/ಮೈಸೂರು: ಮದುವೆ ದಿನವೇ ವರ ಹಾಗೂ ಆತನ ಕುಟುಂಬಸ್ಥರು ಮಂಟಪದಿಂದ ಪರಾರಿಯಾಗಿರುವ ಘಟನೆ ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.

ಮೈಸೂರಿನ ಪ್ರೇಮ್‌ಚಂದ್‌ ಎಂಬಾತನೇ ಪರಾರಿಯಾಗಿರುವ ವರನಾಗಿದ್ದು, ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಮೈಸೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ಯುವಕ ಹಾಗೂ ಸಂತ್ರಸ್ತೆ ಇಬ್ಬರು ಒಳ್ಳೆಯ ಸ್ನೇಹಿತರಾಗಿದ್ದರು. ಇಬ್ಬರ ನಡುವೆಯೂ ಸ್ನೇಹವಾಗಿತ್ತು. ಸಂತ್ರಸ್ತೆ ಬಿಇ ಬಳಿಕ ಎಂಎಸ್‌ ಮುಗಿಸಿ ಫ್ರಾನ್ಸ್‌ನಲ್ಲಿ ಕೆಲಸಕ್ಕೆ ಸೇರಿದ್ದಳು. ಆರೋಪಿ ಪ್ರೇಮ್‌ ಕೂಡ ಪ್ಯಾರೀಸ್‌ನಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದ. ಈ ವೇಳೆ ಇಬ್ಬರ ನಡುವೆ ಪ್ರೀತಿಯಾಗಿ ಪ್ಯಾರೀಸ್‌ನಲ್ಲಿ ಸುತ್ತಾಡಿಕೊಂಡಿದ್ದರು.

ಇಬ್ಬರು ಮನೆಯವರು ಒಪ್ಪಿಸಿ ಕಳೆದ ಜುಲೈನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಕುಟುಂಬಸ್ಥರೆಲ್ಲಾ ಸೇರಿ ಮಾರ್ಚ್.‌3ರಂದು ಪ್ರೇಮ್‌ ಹಾಗೂ ಸಂತ್ರಸ್ತೆಯ ಮದುವೆ ದಿನಾಂಕ ನಿಶ್ಚಯ ಮಾಡಿದ್ದರು.

ಮಾರ್ಚ್.‌1ರಂದು ಮೆಹೆಂದಿ ಹಾಗೂ ಹಳದಿ ಶಾಸ್ತ್ರ ನಡೆದಿತ್ತು. ಈ ವೇಳೆ ಪ್ರೇಮ್‌ಚಂದ್‌ ಮನೆಯವರು ಸಂತ್ರಸ್ತೆ ತಂದೆಯ ಬಳಿಯ 50 ಲಕ್ಷ ನಗದು, ಅರ್ಧ ಕೆಜಿ ಚಿನ್ನ ಹಾಗೂ ಬೆಂಜ್‌ ಕಾರು ನೀಡುವಂತೆ ಬೇಡಿಕೆಯಿಟ್ಟಿದ್ದರು.

ಈ ವೇಳೆ ಸಂತ್ರಸ್ತೆಯ ತಂದೆ ಇದನ್ನು ಕೊಡಲು ಆಗಲ್ಲ. ಮದುವೆಗೆಂದೇ 25 ಲಕ್ಷ ರೂ ಖರ್ಚಾಗಿದೆ ಎಂದು ಹೇಳಿದ್ದರು.

ಈ ವಿಚಾರ ತಿಳಿಯುತ್ತಿದ್ದಂತೆ ಪ್ರೇಮ್‌ ಹಾಗೂ ಆತನ ಕುಟುಂಬಸ್ಥರು ಮದುವೆ ಮಂಟಪದಿಂದ ಪರಾರಿಯಾಗಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಸಂತ್ರಸ್ತೆ ತಂದೆ ಉಪ್ಪಾರಪೇಟೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಸಂತ್ರಸ್ತೆಯನ್ನು ಮದುವೆಗೂ ಮುನ್ನ ಬಲವಂತವಾಗಿ ಲೈಂಗಿಕವಾಗಿ ಬಳಸಿಕೊಂಡಿದ್ದಾನೆಂದು ಉಲ್ಲೇಖಿಸಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್ ಒತ್ತುವರಿ

ಮಹೇಂದ್ರ ಹಸಗೂಲಿ ಪಾದಚಾರಿಗಳು ಓಡಾಡದಂತೆ ವಿರೂಪ; ಒತ್ತುವರಿ ತೆರವಿಗೆ ಸಾರ್ವಜನಿಕರ ಆಗ್ರಹ  ಗುಂಡ್ಲುಪೇಟೆ: ಪಟ್ಟಣದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್‌ಗಳನ್ನು…

50 seconds ago

ಶಾಲಾ ಮಕ್ಕಳಿಗೆ ಪಾದರಕ್ಷೆ ಭಾಗ್ಯ!

‘ವಿದ್ಯಾವಿಕಾಸ’ ಯೋಜನೆಯಡಿ ಅಗತ್ಯವಿದ್ದರೆ ಚಪ್ಪಲಿ ನೀಡಲು ಸಿದ್ಧತೆ  ಮೈಸೂರು: ‘ವಿದ್ಯಾವಿಕಾಸ’ ಯೋಜನೆಯಡಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ೧ನೇ ತರಗತಿಯಿಂದ ೧೦ನೇ…

7 mins ago

ಇಂದು ಹಾಸನದಲ್ಲಿ ಜಾ.ದಳ ಬೆಳ್ಳಿ ಮಹೋತ್ಸವ

ಭೇರ್ಯ ಮಹೇಶ್‌  ಸಮಾವೇಶಕ್ಕೆ ಬೃಹತ್ ವೇದಿಕೆ ನಿರ್ಮಾಣ; ೧ ಲಕ್ಷ ಆಸನಗಳ ವ್ಯವಸ್ಥೆ ಹಾಸನ: ಜಾ.ದಳ ಪ್ರಾದೇಶಿಕ ಪಕ್ಷದ ಬೆಳ್ಳಿ…

12 mins ago

ದಿಲ್ಲಿ ಗಣರಾಜ್ಯೋತ್ಸವಕ್ಕೆ ಬೆದರಿಕೆ : ಗುರುಪತ್ವಂತ್‌ ಸಿಂಗ್‌ ವಿರುದ್ಧ ಎಫ್‌ಐಆರ್‌

ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…

10 hours ago

ಕಾಡಾನೆಗಳ ಲಗ್ಗೆ : ಕಬ್ಬಿನ ಫಸಲು ನಾಶ, ಪರಿಹಾರಕ್ಕಾಗಿ ಒತ್ತಾಯ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…

11 hours ago