Mysore
14
clear sky

Social Media

ಶುಕ್ರವಾರ, 12 ಡಿಸೆಂಬರ್ 2025
Light
Dark

ಪ್ರೀತಿಸದಿದ್ದಕ್ಕೆ ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ಕೊಲೆ; ಬೆಂಗಳೂರಲ್ಲಿ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರ ಬರ್ಬರ ಹತ್ಯೆ

 

ಬೆಂಗಳೂರು: ಇಲ್ಲಿನ ಸಾರಕ್ಕಿ ಮಾರ್ಕೆಟ್‌ ಬಳಿಯ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಇಂದು ( ಏಪ್ರಿಲ್‌ 18 ) ನಡೆದಿದೆ.

ಹಾಡಹಗಲೇ ಸಾರ್ವಜನಿಕ ಸ್ಥಳದಲ್ಲಿ ಈ ಘಟನೆ ನಡೆದಿದ್ದು, ಬೆಂಗಳೂರಿಗರನ್ನು ಬೆಚ್ಚಿ ಬೀಳಿಸಿದೆ. ಸುರೇಶ್‌, ಅನುಷಾ ಹತ್ಯೆಯಾದವರು. ದುಷ್ಕರ್ಮಿಗಳು ಅನುಷಾಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದು, ಬಳಿಕ ಸುರೇಶ್‌ ಮೇಲೆ ಕಲ್ಲು ಎತ್ತು ಹಾಕಿ ಹತ್ಯೆಗೈದಿದ್ದಾರೆ ಎನ್ನಲಾಗಿದೆ. ಇಂದು(ಏ.18) ಸಂಜೆ 4.15ರ ಸುಮಾರಿಗೆ ಘಟನೆ ನಡೆದಿದ್ದು, ಅನೈತಿಕ ಸಂಬಂಧದಿಂದ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಘಟನೆ ನಡೆದ ಸ್ಥಳಕ್ಕೆ ಜೆ.ಪಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಹುಬ್ಬಳ್ಳಿ: ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ಹುಡುಗಿಯನ್ನು ಕಾಲೇಜಿನ ಆವರಣದಲ್ಲೇ ಚಾಕು ಇರಿದು ಹತ್ಯೆ ಮಾಡಿರುವ ಘಟನೆ ನಗರದ ಬಿವಿಬಿ ಕಾಲೇಜಿನಲ್ಲಿ ನಡೆದಿದೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಎನ್ನುವವರ ಪುತ್ರಿ ನೇಹಾ ಹೀರೇಮಠ ಹತ್ಯೆಯಾದ ದುರ್ದೈವಿ. ಹಾಡಹಗಲೇ ನಡೆದಿರುವ ಈ ಕೊಲೆ ಇಡೀ ನಗರವನ್ನೇ ಬೆಚ್ಚಿಬೀಳಿಸಿದೆ. ಸದ್ಯ ಮೃತದೇಹವನ್ನು ಹುಬ್ಬಳ್ಳಿ ಕಿಮ್ಸ್‌ ಆಸ್ಪತ್ರೆಗೆ ಸಾಗಿಸಲಾಗಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಹುಬ್ಬಳಿಯ ವಿದ್ಯಾನಗರ ಠಾಣೆಯ ಪೊಲೀಸರು ಕೊಲೆ ಆರೋಪಿ ಫಯಾಜ್‌ ಎನ್ನುವಾತನನ್ನು ಬಂಧಿಸಿದ್ದಾರೆ.

ನೇಹಾ ಹಿರೇಮಠ ಬಿವಿಬಿ ಕಾಲೇಜಿನಲ್ಲಿ ಎಂಸಿಎ ಓದುತ್ತಿದ್ದಳು. ಇನ್ನು ಕೊಲೆ ಆರೋಪಿ ಫಯಾಜ್‌ ಸಹ ಅದೇ ಕಾಲೇಜಿನಲ್ಲಿ ಬಿಸಿಎ ವ್ಯಾಸಂಗ ಮಾಡುತ್ತಿದ್ದಾನೆ. ಹೀಗಾಗಿ ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ನೇಹಾಳನ್ನು ಕೊಲೆ ಮಾಡಿದ್ದಾನೆ. ಕಳೆದ ಕೆಲ ದಿನಗಳಿಂದ ಪ್ರೀತಿಸುವಂತೆ ನೇಹಾಳ ಬೆನ್ನುಬಿದ್ದಿದ್ದ. ಆದ್ರೆ, ನೇಹಾ ಪ್ರೀತಿಗೆ ನಿರಾಕರಿಸಿದ್ದಳು. ಇದರಿಂದ ಕೋಪಗೊಂಡು ಫಯಾಜ್, ನೇಹಾಳ ಕುತ್ತಿಗೆಯ 2 ಕಡೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

Tags:
error: Content is protected !!