ಬೆಂಗಳೂರು: ಇಲ್ಲಿನ ಸಾರಕ್ಕಿ ಮಾರ್ಕೆಟ್ ಬಳಿಯ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಇಂದು ( ಏಪ್ರಿಲ್ 18 ) ನಡೆದಿದೆ.
ಹಾಡಹಗಲೇ ಸಾರ್ವಜನಿಕ ಸ್ಥಳದಲ್ಲಿ ಈ ಘಟನೆ ನಡೆದಿದ್ದು, ಬೆಂಗಳೂರಿಗರನ್ನು ಬೆಚ್ಚಿ ಬೀಳಿಸಿದೆ. ಸುರೇಶ್, ಅನುಷಾ ಹತ್ಯೆಯಾದವರು. ದುಷ್ಕರ್ಮಿಗಳು ಅನುಷಾಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದು, ಬಳಿಕ ಸುರೇಶ್ ಮೇಲೆ ಕಲ್ಲು ಎತ್ತು ಹಾಕಿ ಹತ್ಯೆಗೈದಿದ್ದಾರೆ ಎನ್ನಲಾಗಿದೆ. ಇಂದು(ಏ.18) ಸಂಜೆ 4.15ರ ಸುಮಾರಿಗೆ ಘಟನೆ ನಡೆದಿದ್ದು, ಅನೈತಿಕ ಸಂಬಂಧದಿಂದ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಘಟನೆ ನಡೆದ ಸ್ಥಳಕ್ಕೆ ಜೆ.ಪಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಹುಬ್ಬಳ್ಳಿ: ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ಹುಡುಗಿಯನ್ನು ಕಾಲೇಜಿನ ಆವರಣದಲ್ಲೇ ಚಾಕು ಇರಿದು ಹತ್ಯೆ ಮಾಡಿರುವ ಘಟನೆ ನಗರದ ಬಿವಿಬಿ ಕಾಲೇಜಿನಲ್ಲಿ ನಡೆದಿದೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಎನ್ನುವವರ ಪುತ್ರಿ ನೇಹಾ ಹೀರೇಮಠ ಹತ್ಯೆಯಾದ ದುರ್ದೈವಿ. ಹಾಡಹಗಲೇ ನಡೆದಿರುವ ಈ ಕೊಲೆ ಇಡೀ ನಗರವನ್ನೇ ಬೆಚ್ಚಿಬೀಳಿಸಿದೆ. ಸದ್ಯ ಮೃತದೇಹವನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಹುಬ್ಬಳಿಯ ವಿದ್ಯಾನಗರ ಠಾಣೆಯ ಪೊಲೀಸರು ಕೊಲೆ ಆರೋಪಿ ಫಯಾಜ್ ಎನ್ನುವಾತನನ್ನು ಬಂಧಿಸಿದ್ದಾರೆ.
ನೇಹಾ ಹಿರೇಮಠ ಬಿವಿಬಿ ಕಾಲೇಜಿನಲ್ಲಿ ಎಂಸಿಎ ಓದುತ್ತಿದ್ದಳು. ಇನ್ನು ಕೊಲೆ ಆರೋಪಿ ಫಯಾಜ್ ಸಹ ಅದೇ ಕಾಲೇಜಿನಲ್ಲಿ ಬಿಸಿಎ ವ್ಯಾಸಂಗ ಮಾಡುತ್ತಿದ್ದಾನೆ. ಹೀಗಾಗಿ ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ನೇಹಾಳನ್ನು ಕೊಲೆ ಮಾಡಿದ್ದಾನೆ. ಕಳೆದ ಕೆಲ ದಿನಗಳಿಂದ ಪ್ರೀತಿಸುವಂತೆ ನೇಹಾಳ ಬೆನ್ನುಬಿದ್ದಿದ್ದ. ಆದ್ರೆ, ನೇಹಾ ಪ್ರೀತಿಗೆ ನಿರಾಕರಿಸಿದ್ದಳು. ಇದರಿಂದ ಕೋಪಗೊಂಡು ಫಯಾಜ್, ನೇಹಾಳ ಕುತ್ತಿಗೆಯ 2 ಕಡೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.
ಚಿರಂಜೀವಿ ಸಿ ಹುಲ್ಲಹಳ್ಳಿ ಅಕ್ಟೋಬರ್‌ನಲ್ಲೇ ಅಲ್ಲಲ್ಲಿ ಇಣುಕುತ್ತಿರುವ ಇಬ್ಬನಿ ನವೆಂಬರ್‌ಗೂ ಮೊದಲೇ ಬೆಳಗಿನ ವೇಳೆ ಚಳಿಯ ಅನುಭವ ಮೈಸೂರು: ಮಧ್ಯಾಹ್ನದ…
ಎಚ್.ಎಸ್.ದಿನೇಶ್‌ಕುಮಾರ್ ಮೈಸೂರಿನಲ್ಲಿ ನಡೆದ ವಿಶೇಷ ಅಭಿಯಾನದಲ್ಲಿ ಬಯಲು ಪಾಲಿಕೆ ವಲಯ ಕಚೇರಿಗಳಲ್ಲಿ ಹಣ ಕೊಟ್ಟರೆ ಇ-ಖಾತೆ; ತಪ್ಪಿದರೆ ಕಡತವೇ ನಾಪತ್ತೆ!…
ಬೆಂಗಳೂರು: ನವೆಂಬರ್ 15ರಂದು ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿ, ಪಿಂಕ್ ಲೈನ್ ಮೆಟ್ರೋದ 7.5 ಕಿಲೋಮೀಟರ್ ಎತ್ತರಿಸಿದ ಮಾರ್ಗವನ್ನು…
ಬೆಂಗಳೂರು: ಕರ್ನಾಟಕದಲ್ಲಿ ಅಕ್ಕಿ ಬೆಲೆ ಏರಿಕೆ ಜನಸಾಮಾನ್ಯರ ಜೇಬಿಗೆ ಬಿಸಿ ಮುಟ್ಟಿಸಿದೆ. ವರದಿಯ ಪ್ರಕಾರ, ಕಳೆದ ನಾಲ್ಕು ತಿಂಗಳಲ್ಲಿ ಸರಾಸರಿ…
ಬೆಂಗಳೂರು: ಎಲ್‌ಪಿಜಿ ಗ್ರಾಹಕರೇ ಗಮನಿಸಿ. ನವೆಂಬರ್ 1ರಿಂದ ಗ್ಯಾಸ್ ವಿತರಣೆಯ ನಿಯಮಗಳು ಮತ್ತಷ್ಟು ಬಿಗಿಯಾಗಲಿವೆ ಎಂದು ವರದಿಯಾಗಿದೆ. ಆಧಾರ್ ಆಧಾರಿತ…
ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್‌ಗಳ ನಿರ್ವಾಹಕರು ಮತ್ತು ಪ್ರಯಾಣಿಕರ ನಡುವೆ ಚಿಲ್ಲರೆ ಜಗಳ ಸಾಮಾನ್ಯ. ನಾನು ಇಲ್ಲಿ ಇಬ್ಬರು…