ಬೆಂಗಳೂರು: ರಾಜ್ಯದಲ್ಲಿ ಅನರ್ಹರು ಪಡೆದಿರುವ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡಲು ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ರಾಜ್ಯದಲ್ಲಿ ಅನರ್ಹರು ಪಡೆದಿರುವ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುತ್ತಿದ್ದು, ಇದಕ್ಕೆ ವಿರೋಧ ಪಕ್ಷಗಳು ವಿರೋಧ ವ್ಯಕ್ತಪಡಿಸಿವೆ.
ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಯೋಜನೆಗಳು ನಿಂತುಹೋಗಿವೆ ಎಂದು ವಿರೋಧ ಪಕ್ಷದ ನಾಯಕರು ಪದೇ ಪದೇ ಆರೋಪಿಸುತ್ತಿರುವ ಬೆನ್ನಲ್ಲೇ ಈಗ ಬಿಪಿಎಲ್ ಕಾರ್ಡ್ ರದ್ದು ಮಾಡುವ ಪ್ರಕ್ರಿಯೆ ನಡೆಸಲಾಗುತ್ತಿದೆ.
ಬಿಪಿಎಲ್ ಕಾರ್ಡ್ ರದ್ದು ಪ್ರಕ್ರಿಯೆ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಅವರು, ಕಾರ್ಡ್ ರದ್ದತಿ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅನರ್ಹ ಕಾರ್ಡ್‌ಗಳನ್ನು ರದ್ದು ಮಾಡಲು ಸೂಚನೆ ನೀಡಲಾಗಿದೆ. ಅದರಲ್ಲಿ ಕೆಲವು ಲೋಪಗಳಾಗಿದ್ದರೆ ಪರಿಶೀಲನೆ ನಡೆಸಲಾಗುತ್ತದೆ ಹಾಗೂ ಅಧಿಕಾರಿಗಳು ಲೋಪ ಮಾಡಿದ್ದರೆ ಅದನ್ನು ಸರಿಪಡಿಸುತ್ತಾರೆ ಎಂದು ಸ್ಪಷ್ಟಪಡಿಸಿದರು.
ಬೆಂಗಳೂರು: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹಸ್ತಕ್ಷೇಪಕ್ಕೆ ಬೇಸತ್ತು ಇಂಧನ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಿದ್ದರು ಎಂಬ…
ಬೆಂಗಳೂರು: ವಿಕಲಚೇತನರಿಗಾಗಿಯೇ ಮುಂದಿನ ಮೂರು ತಿಂಗಳಲ್ಲಿ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ್…
ಕೊಡಗು: ಜಿಲ್ಲೆಯಲ್ಲಿ ಆನೆ–ಮಾನವ ಸಂಘರ್ಷ ಮತ್ತೆ ಜೀವ ಬಲಿ ಪಡೆದಿದೆ. ಸಿದ್ದಾಪುರ ಸಮೀಪದ ಗೌರಿ ಬೆಟ್ಟ ಬಳಿ ಕಾಡಾನೆ ದಾಳಿಗೆ…
ಮಡಿಕೇರಿ: ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಕತೆ ಕಟ್ಟುತ್ತಿದ್ದಾರೆ ಎಂದು…
ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಮಾಲ್ದಾರೆ ವ್ಯಾಪ್ತಿಯಲ್ಲಿ ಬೆಳಿಗ್ಗೆ ಶಾಲಾ ಬಸ್ಸನ್ನು ಒಂಟಿ ಸಲಗ ಅಟ್ಟಿಸಿಕೊಂಡು ಬಂದ ಘಟನೆ…
ಚಾಮರಾಜನಗರ: ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣದ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಈ ಕುರಿತು…