ಬೆಂಗಳೂರು: ರಾಜ್ಯದಲ್ಲಿ 1, 02, 509 ಬಿಪಿಎಲ್ ಕಾರ್ಡ್‌ಗಳನ್ನು ಅನರ್ಹಗೊಳಿಸಲಾಗಿದೆ. ಆದರೆ ಅರ್ಹರ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಿಲ್ಲ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಪಿಎಲ್ ಕಾರ್ಡ್‌ಗೆ ಅರ್ಹರಿರುವ ಯಾವುದೇ ಕಾರ್ಡ್‌ಗಳನ್ನು ರದ್ದುಪಡಿಸಿಲ್ಲ. ಆದರೆ ಆದಾಯ ತೆರಿಗೆದಾರರ ಮಾಹಿತಿ ಪಡೆದು ಕಾರ್ಡ್ ರದ್ದು ಮಾಡಲಾಗಿದೆಯಷ್ಟೇ. ಅದರಲ್ಲಿ ಸರ್ಕಾರಿ ನೌಕರರನ್ನು ಪರಿಶೀಲಿಸಿ ಬಿಪಿಎಲ್‌ನಿಂದ ಎಪಿಎಲ್ ಕಾರ್ಡ್‌ಗೆ ವರ್ಗಾವಣೆ ಮಾಡಲಾಗಿದೆ ಎಂದಿದ್ದಾರೆ.
ಇನ್ನು ರಾಜ್ಯದಲ್ಲಿ ಶೇ.66% ರಷ್ಟು ಬಿಪಿಎಲ್ ಕಾರ್ಡ್‌ಗಳಿದ್ದು, ಕೇಂದ್ರ ಸರ್ಕಾರದ ಮಾನದಂಡಗಳ ಅನ್ವಯ ಪರಿಶೀಲಿಸಿ ಪರಿಷ್ಕರಣೆ ಮಾಡಲಾಗಿದೆ. ಒಂದು ವೇಳೆ ಅದರಲ್ಲಿ ಬಿಪಿಎಲ್ ಕಾರ್ಡ್‌ಗೆ ಅರ್ಹರಿದ್ದು, ಎಪಿಎಲ್ ಕಾರ್ಡ್‌ಗೆ ಸೇರ್ಪಡೆಯಾಗಿದ್ದಾರೆ ಮಾತ್ರ ಅಂತಹವರಿಗೆ ಬಿಪಿಎಲ್ ಕಾರ್ಡ್ ಹಂಚಿಕೆ ಮಾಡುತ್ತೇವೆ. ಅದರಲ್ಲಿ ಅನರ್ಹವಾಗಿರುವ ಬಿಪಿಎಲ್ ಕಾರ್ಡ್‌ಗಳನ್ನು ತಾತ್ಕಲಿಕವಾಗಿ ಅಮಾನತ್ತು ಮಾಡಲಾಗಿದೆ. ಆದಾಯ ತೆರಿಗೆ ಕಟ್ಟುವವರು ಮತ್ತು ಸರ್ಕಾರಿ ನೌಕರರನ್ನು ಹೊರತುಪಡಿಸಿ ಉಳಿದವರೆಲ್ಲರಿಗೂ ಬಿಪಿಎಲ್ ಕಾರ್ಡ್‌ನ್ನು ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.
ಕರ್ನಾಟಕದಲ್ಲಿ ಬಿಪಿಎಲ್ ಕಾರ್ಡ್‌ದಾರರಲ್ಲಿ 98,473 ಜನ ತೆರಿಗೆದಾರರು ಹಾಗೂ 4,036 ಸರ್ಕಾರಿ ನೌಕರರಿದ್ದಾರೆ. ಹೀಗಾಗಿ ಒಟ್ಟು 1,02,509 ಕಾರ್ಡ್‌ಗಳನ್ನು ಅನರ್ಹಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…
ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…
ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ…
ಕೆ.ಎಸ್. ಚಂದ್ರಶೇಖರ್ ಮೂರ್ತಿ ದುಸ್ಥಿತಿಯಲ್ಲಿ ದೇಶದ ಪ್ರಪ್ರಥಮ ತಗಡೂರು ಖಾದಿ ಕೇಂದ್ರ ಜ.೩೦, ೧೯೪೮ರಂದು ಅಹಿಂಸಾ ಪ್ರತಿಪಾದಕ, ಸ್ವಾತಂತ್ರ್ಯ ಹೋರಾಟಗಾರ…
ಹೊಸ ವರ್ಷದಲ್ಲಿ ಕನ್ನಡ ಚಿತ್ರರಂಗದ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ನಿರ್ಮಾಪಕರ ಸಂಘ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿಗಳ ಚುನಾವಣೆಯ ಬಿರುಸು,…
ಚಾಮರಾಜನಗರ: ಚಳಿ ಇನ್ನೂ ದೂರ ಸರಿದಿಲ್ಲ. ಆದರೂ ಬಿಸಿಲು ಬೆವರು ಹರಿಯುವ ಮಟ್ಟಿಗೆ ಸುಡುತ್ತಿದೆ. ನೆಲ ದಿನೇ ದಿನೇ ಕಾದ…