ಬೆಂಗಳೂರು : ರಾಜ್ಯದಲ್ಲಿ ಭಾರಿ ಸಂಚಲನ ಮೂಡಿಸಿರುವ ಅನರ್ಹ ಬಡತನ ರೇಖೆ ಕೆಳಗಿನ (ಬಿಪಿಎಲ್) ಪಡಿತರ ಕಾರ್ಡ್‌ಗಳ ರದ್ದತಿ ಸರಕಾರಕ್ಕೆ ಸವಾಲಾಗಿದೆ. ಆದರೆ, ಮುಂಬರುವ ದಿನಗಳಲ್ಲಿ ಅನರ್ಹರಿಗೆ ಬಿಪಿಎಲ್ ಕಾರ್ಡ್ ಸಿಗದಂತೆ ಮತ್ತು ಅಕ್ರಮ ತಡೆಗೆ ಹೊಸ ತಂತ್ರಾಂಶ ಅಳವಡಿಕೆಗೆ ಸರಕಾರ ಮುಂದಾಗಿದೆ.
ಕೇಂದ್ರ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ವರದಿ ಮತ್ತು ಆಹಾರ ಇಲಾಖೆ ತನ್ನದೇ ಆದ ಪರಿಶೀಲನಾ ಮಾರ್ಗದಲ್ಲಿ 10.09 ಲಕ್ಷ ಬಿಪಿಎಲ್ ಕಾರ್ಡ್‌ಗಳನ್ನು ಅನರ್ಹರು ಪಡೆದಿದ್ದಾರೆ ಎಂಬುದನ್ನು ಖಚಿತಪಡಿಸಿ ಕೊಂಡಿದೆ. ಬಳಿಕ ಇವುಗಳನ್ನು ಮತ್ತೆ ಪರಾಮರ್ಶೆ ಮಾಡಿ ನಿಜವಾದ ಅನರ್ಹರನ್ನು ಗುರುತಿಸಲು ಆಹಾರ ಇಲಾಖೆ ಕಾರ್ಯೋನ್ಮುಖವಾಗಿದೆ.
ಕರ್ನಾಟಕವು ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಮತ್ತು ಅಂತ್ಯೋದಯ ಅನ್ನ ಯೋಜನೆ (ಎಎವೈ) ಫಲಾನುಭವಿಗಳಿಗಾಗಿ 1.09 ಕೋಟಿಗೂ ಹೆಚ್ಚು ಪಡಿತರ ಚೀಟಿಗಳನ್ನು ಹೊಂದಿದೆ. ಪ್ರಸ್ತುತ ಸರ್ಕಾರವು ಬಿಪಿಎಲ್ ಕಾರ್ಡ್‌ದಾರರ ಅರ್ಹತೆಯನ್ನು ಪರಿಶೀಲನೆಗೆ ಕ್ರಮವಹಿಸಿದ್ದು, ಅನರ್ಹ ಕಾರ್ಡ್‌ದಾರರನ್ನು ತೆಗೆದುಹಾಕುವ ಕಾರ್ಯಕ್ಕೆ ಚಾಲನೆ ನೀಡಿದೆ.
ಇದನ್ನೂ ಓದಿ :-ಕವಿ ವಿಶ್ವಮಾನವ ಪ್ರಜ್ಞೆ ಹೊಂದಲಿ : ನಾಡಗೀತೆಗೆ ನೂರರ ಸಂಭ್ರಮದಲ್ಲಿ ಪ್ರೊ.ಅರವಿಂದ ಮಾಲಗತ್ತಿ ಸಲಹೆ
ನೈಜ ಹಾಗೂ ಅನರ್ಹ ಫಲಾನುಭವಿಗಳ ಪತ್ತೆ ಹೇಗೆ?
ಮೊದಲ ಹಂತದಲ್ಲಿ ನಾನಾ ಇಲಾಖೆಗಳ ತಂತ್ರಾಂಶಗಳೊಂದಿಗೆ ಆಹಾರ ಇಲಾಖೆಯು ತನ್ನ ದತ್ತಾಂಶಗಳನ್ನು ಸೇರಿಸಿ ಸಂಸ್ಕರಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಇದಲ್ಲದೇ ಕೇಂದ್ರ ಸಿಟಿಡಿಬಿ ಕಳಿಸಿದ ಅರ್ನಹರ ಪಟ್ಟಿಯನ್ನು ತಾಳೆ ಹಾಕಲಾಗುತ್ತಿದೆ. ಇದರ ಆಧಾರದ ಮೇಲೆ ಜಿಲ್ಲಾವಾರು ಅನರ್ಹರ ಪಟ್ಟಿ ಸಿದ್ಧಪಡಿಸಿದೆ. ಅವನ್ನು ಜಿಲ್ಲೆಗಳ ಮುಖ್ಯಸ್ಥರಿಗೆ ಕಳುಹಿಸಿ, ಮರು ಪರಿಶೀಲನೆ ಕಾರ್ಯ ಭರದಿಂದ ಸಾಗಿದೆ. ಈ ಮೂಲಕ ನೈಜ ಅನರ್ಹರ ಪಟ್ಟಿ ಸಿದ್ಧಡಿಸಿ ಸರಕಾರದ ನಿರ್ದೇಶನದಂತೆ ಎಪಿಎಲ್‌ಗೆ ಪರಿವರ್ತಿಸಲಾಗುವುದು ಎಂದು ಆಹಾರ ಇಲಾಖೆ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅನರ್ಹರ ಬಿಪಿಎಲ್ ತಡೆಗೆ ಸರ್ಕಾರದ ಕ್ರಮಗಳೇನು?
ಅನರ್ಹರು ಬಿಪಿಎಲ್ ಪಡಿತರ ಚೀಟಿ ಪಡೆಯುವುದನ್ನು ತಪ್ಪಿಸಲು ಪಹಣಿ, ವಾಹನ ನೋಂದಣಿ, ನೌಕರರ ವಿವರವನ್ನು ಪಡಿತರ ಚೀಟಿ ದತ್ತಾಂಶಗಳ ಜತೆ ಬೆಸೆಯಬೇಕು ಎಂದು ಹಳಿಯಾಳ ಶಾಸಕ ಆರ್.ವಿ.ದೇಶಪಾಂಡೆ ಅಧ್ಯಕ್ಷತೆಯ ಆಡಳಿತ ಸುಧಾರಣಾ ಆಯೋಗ-2 ಸರಕಾರಕ್ಕೆ ಶಿಫಾರಸು ಮಾಡಿದೆ.
ಸರಕಾರ ಆಯೋಗದ ಶಿಫಾರಸುಗಳನ್ನು ಬಿಪಿಎಲ್ ಕಾರ್ಡ್‌ಗಳಿಗೆ ಅನ್ವಯಿಸಲು ನಿರ್ಧರಿಸಿದೆ.
ಮೂರು ಹೆಕ್ಟೇರ್‌ಗಿಂತ ಹೆಚ್ಚು ಕೃಷಿ ಭೂಮಿ ಹೊಂದಿದ್ದರೆ, ಬಿಪಿಎಲ್ ಪಡಿತರ ಚೀಟಿಗೆ ಅವಕಾಶ ಇಲ್ಲ.
ಕೃಷಿ ಭೂಮಿಯ ದತ್ತಾಂಶಗಳನ್ನು ಪಡಿತರ ಚೀಟಿಗಳ ದತ್ತಾಂಶಗಳ ಜತೆ ಸಮೀಕರಿಸಿದರೆ ಕೃಷಿ ಭೂಮಿ ಹೊಂದಿರುವವರ ವಿವರವನ್ನು ಪರಿಶೀಲಿಸಲು ಸುಲಭವಾಗುತ್ತದೆ.
ಇದೇ ರೀತಿ ಎಚ್‌ಆರ್‌ಎಂಎಸ್ ತಂತ್ರಾಂಶದಿಂದ ಸರಕಾರಿ ನೌಕರರ ಮಾಹಿತಿ, ವಾಹನ ನೋಂದಣಿ ದತ್ತಾಂಶ, ಆಸ್ತಿ ನೋಂದಣಿ ವಿವರವನ್ನು ಆಹಾರ ಇಲಾಖೆಯ ಪಡಿತರ ವ್ಯವಸ್ಥೆಗೆ ಜೋಡಿಸಬೇಕು ಎಂದು ಆಯೋಗ ಶಿಫಾರಸು ಮಾಡಿದೆ.ಇದಲ್ಲದೇ ಆದಾಯ ಪ್ರಮಾಣಪತ್ರ ವಿತರಣೆಗೆ ಏಕರೂಪದ ವಿಧಾನ ಅನುಸರಿಸುವಂತೆಯೂ ತಿಳಿಸಿದೆ.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…