ಬೆಂಗಳೂರು: ವಿಧಾನಮಂಡಲ ಅಧಿವೇಶನದಲ್ಲಿಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಮಾತನಾಡಿದ್ದು, ಬಿಪಿಎಲ್ ಕಾರ್ಡ್‌ಗಳನ್ನು ಮತ್ತೆ ಪರಿಶೀಲನೆ ನಡೆಸುತ್ತೇವೆ ಎಂದು ಹೇಳಿದ್ದಾರೆ.
ಈ ಕುರಿತು ಸದನದಲ್ಲಿಂದು ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಸಚಿವ ಮುನಿಯಪ್ಪ ಅವರು, ಈ ಮೊದಲು ತಂತ್ರಾಂಶದಲ್ಲಿ ದೋಷ ಇತ್ತು. ಈಗ ಆ ಸಮಸ್ಯೆ ಇಲ್ಲ. ಅಲ್ಲದೇ ಪಡಿತರ ರೇಷನ್ ಕಾಳ ಸಂತೆಯಲ್ಲಿ ಮಾರಾಟ ಆಗುತ್ತಿರುವುದು ಸತ್ಯ. ಇದಕ್ಕೆ ಕಡಿವಾಣ ಹಾಕಲು ಕ್ರಮ ತೆಗೆದುಕೊಳ್ಳಲಾಗಿದೆ. ಅನೇಕ ಕೇಸ್ ಹಾಕಲಾಗಿದೆ. ದಂಡ ವಸೂಲಿ ಕೂಡ ಮಾಡಲಾಗುತ್ತಿದೆ ಎಂದು ವಿವರಣೆ ನೀಡಿದರು.
ದಕ್ಷಿಣ ಭಾರತದಲ್ಲಿ ಅತಿಹೆಚ್ಚು ಬಿಪಿಎಲ್ ಕಾರ್ಡ್ ಇರೋದು ಕರ್ನಾಟಕದಲ್ಲೇ. 1.28 ಕೋಟಿ ಬಿಪಿಎಲ್ ಕಾರ್ಡ್‌ಗಳಿದ್ದು, 4 ಕೋಟಿ ಜನ ಇದ್ದಾರೆ. ಎಪಿಎಲ್ ಅರ್ಹತೆ ಹೊಂದಿರೋದು ಬಿಪಿಎಲ್ ಕಾರ್ಡ್ ಹೊಂದಿರುವುದೇ ಇದಕ್ಕೆ ಕಾರಣ. ಆದ್ದರಿಂದ ಇದನ್ನು ಮತ್ತೆ ಪರಿಷ್ಕರಣೆ ಮಾಡುತ್ತೇವೆ ಎಂದು ಹೇಳಿದರು.
ಇನ್ನು ಐಪಿಎಲ್ ಕಾರ್ಡ್ ಇರುವವರು ಬಿಪಿಎಲ್ ಕಾರ್ಡ್ ಪಡೆದಿದ್ದಾರೆ. ಬಿಜೆಪಿ ಕಾರ್ಡ್‌ಗಳನ್ನು ಪರಿಶೀಲನೆ ನಡೆಸಲು ಎಲ್ಲರ ಸಹಕಾರ ಬೇಕು ಎಂದು ಮನವಿ ಮಾಡಿದರು.
ಇನ್ನು ರಾಜ್ಯದಲ್ಲಿ ಐದು ಮಾನದಂಡ ಇಟ್ಟುಕೊಂಡು ಬಿಪಿಎಲ್ ಕಾರ್ಡ್ ಕೊಡುತ್ತಿದ್ದೇವೆ. ಅರ್ಹತೆ ಇಲ್ಲದೇ ಬಿಪಿಎಲ್ ಕಾರ್ಡ್ ಪಡೆದಿದ್ದರೆ ಅವರಿಗೆ ಎಪಿಎಲ್ ಕಾರ್ಡ್ ಕೊಡುತ್ತೇವೆ. ಮಾನದಂಡಗಳನ್ನು ಸರಿಯಾಗಿ ಅನುಷ್ಠಾನ ಮಾಡುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.





