ರಾಜ್ಯ

ಬಿಪಿಎಲ್‌ ಕಾರ್ಡ್‌ ಮತ್ತೆ ಪರಿಶೀಲನೆ: ಆಹಾರ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು: ವಿಧಾನಮಂಡಲ ಅಧಿವೇಶನದಲ್ಲಿಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಮಾತನಾಡಿದ್ದು, ಬಿಪಿಎಲ್‌ ಕಾರ್ಡ್‌ಗಳನ್ನು ಮತ್ತೆ ಪರಿಶೀಲನೆ ನಡೆಸುತ್ತೇವೆ ಎಂದು ಹೇಳಿದ್ದಾರೆ.

ಈ ಕುರಿತು ಸದನದಲ್ಲಿಂದು ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಸಚಿವ ಮುನಿಯಪ್ಪ ಅವರು, ಈ ಮೊದಲು ತಂತ್ರಾಂಶದಲ್ಲಿ ದೋಷ ಇತ್ತು. ಈಗ ಆ ಸಮಸ್ಯೆ ಇಲ್ಲ. ಅಲ್ಲದೇ ಪಡಿತರ ರೇಷನ್‌ ಕಾಳ ಸಂತೆಯಲ್ಲಿ ಮಾರಾಟ ಆಗುತ್ತಿರುವುದು ಸತ್ಯ. ಇದಕ್ಕೆ ಕಡಿವಾಣ ಹಾಕಲು ಕ್ರಮ ತೆಗೆದುಕೊಳ್ಳಲಾಗಿದೆ. ಅನೇಕ ಕೇಸ್‌ ಹಾಕಲಾಗಿದೆ. ದಂಡ ವಸೂಲಿ ಕೂಡ ಮಾಡಲಾಗುತ್ತಿದೆ ಎಂದು ವಿವರಣೆ ನೀಡಿದರು.

ದಕ್ಷಿಣ ಭಾರತದಲ್ಲಿ ಅತಿಹೆಚ್ಚು ಬಿಪಿಎಲ್‌ ಕಾರ್ಡ್‌ ಇರೋದು ಕರ್ನಾಟಕದಲ್ಲೇ. 1.28 ಕೋಟಿ ಬಿಪಿಎಲ್‌ ಕಾರ್ಡ್‌ಗಳಿದ್ದು, 4 ಕೋಟಿ ಜನ ಇದ್ದಾರೆ. ಎಪಿಎಲ್‌ ಅರ್ಹತೆ ಹೊಂದಿರೋದು ಬಿಪಿಎಲ್‌ ಕಾರ್ಡ್‌ ಹೊಂದಿರುವುದೇ ಇದಕ್ಕೆ ಕಾರಣ. ಆದ್ದರಿಂದ ಇದನ್ನು ಮತ್ತೆ ಪರಿಷ್ಕರಣೆ ಮಾಡುತ್ತೇವೆ ಎಂದು ಹೇಳಿದರು.

ಇನ್ನು ಐಪಿಎಲ್‌ ಕಾರ್ಡ್‌ ಇರುವವರು ಬಿಪಿಎಲ್‌ ಕಾರ್ಡ್‌ ಪಡೆದಿದ್ದಾರೆ. ಬಿಜೆಪಿ ಕಾರ್ಡ್‌ಗಳನ್ನು ಪರಿಶೀಲನೆ ನಡೆಸಲು ಎಲ್ಲರ ಸಹಕಾರ ಬೇಕು ಎಂದು ಮನವಿ ಮಾಡಿದರು.

ಇನ್ನು ರಾಜ್ಯದಲ್ಲಿ ಐದು ಮಾನದಂಡ ಇಟ್ಟುಕೊಂಡು ಬಿಪಿಎಲ್‌ ಕಾರ್ಡ್‌ ಕೊಡುತ್ತಿದ್ದೇವೆ. ಅರ್ಹತೆ ಇಲ್ಲದೇ ಬಿಪಿಎಲ್‌ ಕಾರ್ಡ್‌ ಪಡೆದಿದ್ದರೆ ಅವರಿಗೆ ಎಪಿಎಲ್‌ ಕಾರ್ಡ್‌ ಕೊಡುತ್ತೇವೆ. ಮಾನದಂಡಗಳನ್ನು ಸರಿಯಾಗಿ ಅನುಷ್ಠಾನ ಮಾಡುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…

3 hours ago

ಜನವರಿಗೆ ಚಾ.ಬೆಟ್ಟದ ಅಭಿವೃದ್ಧಿ ಕಾಮಗಾರಿ ಶುರು

ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…

3 hours ago

ಕೋಳಿ ಮೊಟ್ಟೆಗೆ ಬರ: ಏರಿದ ದರ

ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ  ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…

3 hours ago

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

12 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

12 hours ago