ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಆಪ್ತ ಹಾಗೂ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಸಿಎಂ ಸಲಹೆಗಾರ ಹುದ್ದೆಗೆ ದಿಢೀರ್ ರಾಜೀನಾಮೆ ನೀಡುವ ಮೂಲಕ ಕಾಂಗ್ರೆಸ್‌ನಲ್ಲಿ ಸಂಚಲನ ಮೂಡಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, ಸಿಎಂ ಸಲಹೆಗಾರ ಹುದ್ದೆಗೆ ನಾನು ರಾಜೀನಾಮೆ ನೀಡಿದ್ದೇನೆ. ಈಗಾಗಲೇ ರಾಜೀನಾಮೆ ಪತ್ರವನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ತಲುಪಿಸಿದ್ದೇನೆ ಎಂದು ತಿಳಿಸಿದ್ದಾರೆ.
ಆದರೆ ರಾಜೀನಾಮೆಗೆ ಕಾರಣ ಏನು ಎಂಬ ಪ್ರಶ್ನೆಗೆ, ನಾನಾಗೀಯೆ ರಾಜೀನಾಮೆ ನೀಡಿದ್ದೇನೆ. ಇದರಲ್ಲಿ ಯಾರದೇ ಒತ್ತಡವಿಲ್ಲ ಎಂದು ಹೇಳಿದ್ದಾರೆ. ಇವರ ದಿಢೀರ್ ರಾಜೀನಾಮೆ ಕಾಂಗ್ರೆಸ್ ಪಕ್ಷದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಬಿಆರ್ ಪಾಟೀಲ್ ರಾಜೀನಾಮೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು, ಬೆಂಗಳೂರು ಕಚೇರಿಗೆ ಪತ್ರ ಬಂದಿದೆ. ನಮ್ಮ ನಡುವೆ ಯಾವೂದೇ ಅಸಮಾಧಾನವಿಲ್ಲ. ಅವರೊಡನೆ ಮಾತನಾಡುತ್ತೇನೆ ಎಂದು ಹೇಳಿದರು.