ರಾಜ್ಯ

RSS ಸೇರಿದಂತೆ ಖಾಸಗಿ ಸಂಘ ಸಂಸ್ಥೆ ಚಟುವಟಿಕೆಗೆ ಬ್ರೇಕ್‌ : ಸಚಿವ ಸಂಪುಟದಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು : ರಾಜ್ಯದಲ್ಲಿ ಸರ್ಕಾರಿ ಶಾಲಾ, ಕಾಲೇಜುಗಳ ಆವರಣದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ಚಟುವಟಿಕೆಗಳು ಸೇರಿದಂತೆ ಖಾಸಗಿ ಕಾರ್ಯಕ್ರಮಗಳನ್ನು ನಿಷೇಧಿಸಿಸಲಾಗಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದಲ್ಲಿ ಗುರುವಾರ ಮಹತ್ವ ನಿರ್ಧಾರ ಕೈಗೊಂಡಿದೆ.

ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್ ಚಟುವಟಿಕೆ ನಿಷೇಧಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಇದು ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಸರ್ಕಾರಿ ಜಾಗಗಳಲ್ಲಿ ಆರ್‌ಎಸ್‌ಎಸ್‌ ಗೆ ಕಡಿವಾಣ ಹಾಕುವ ಬಗ್ಗೆ ಇಂದಿನ ಸಭೆಯಲ್ಲಿ ತಿರ್ಮಾನಿಸಲಾಗುವುದು. ತಮಿಳುನಾಡು ಮಾದರಿ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ಸಭೆ ಮುನ್ನ ತಿಳಿಸಿದ್ದರು.

ಇದನ್ನು ಓದಿ: ಆರ್‌ಎಸ್‌ಎಸ್‌ ಕಾರ್ಯಕ್ರಮಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸದಂತೆ ನಿಷೇಧಿಸಿ: ಸಿಎಂಗೆ ಮತ್ತೊಂದು ಪತ್ರ ಬರೆದ ಪ್ರಿಯಾಂಕ್‌ ಖರ್ಗೆ

ನಂತರ ನಡೆದ ಸಚಿವ ಸಂಪುಟದಲ್ಲಿ ಈ ಬಗ್ಗೆ ಸಚಿವರು, ಸಿಎಂ, ಡಿಸಿಎಂ ಚರ್ಚಿಸಿದರು. ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಎಲ್ಲಾ ಧರ್ಮದ ಖಾಸಗಿ ಕಾರ್ಯಕ್ರಮಗಳಿಗೆ ಸರ್ಕಾರಿ ಜಾಗಗಳಲ್ಲಿ ನಿಷೇಧಿಸಲಾಗಿದೆ. ಇದು ಕೇವಲ ಆರ್‌ಎಸ್‌ಎಸ್‌ ಮಾತ್ರವಲ್ಲ ಇತರ ಖಾಸಗಿ ಸಂಘಟನೆ, ಸಂಸ್ಥೆಗಳಿಗೂ ಅನ್ವಯವಾಗುತ್ತದೆ ಎಂದು ಸರ್ಕಾರ ತಿಳಿಸಿದೆ. ಈ ಮೂಲಕ ಆರ್‌ಎಸ್‌ಎಸ್‌ ಚಟುವಟಿಕೆಗೆ ಸರ್ಕಾರ ಮೂಗುದಾರ ಹಾಕಿದೆ. ಆರ್‌ಎಸ್‌ಎಸ್‌ ಬೈಠಕ್, ಕವಾಯಿತಿ ನಿರ್ಬಂಧಿಸಿದಂತಾಗಿದೆ.

ತಮಿಳುನಾಡು ಮಾದರಿ ಅನುಸರಿಸಿದ ರಾಜ್ಯ ಸರ್ಕಾರ ಈ ತಿರ್ಮಾನಕ್ಕೆ ಬಂದಿದೆ. ಅಲ್ಲಿ ಸರ್ಕಾರಿ ಜಾಗಗಳಲ್ಲಿ ಯಾವುದೊ ಒಂದು ಖಾಸಗಿ ಸಂಸ್ಥೆ, ಸಂಘಟನೆ ಯಾವುದಾದರೂ ಕಾರ್ಯಕ್ರಮ ನಡೆಸಲು ಪೂರ್ವಾನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಲಾಗಿದೆ. ಅದೇ ರೀತಿ ಇಲ್ಲಿಯೂ ಮಾಡಲಾಗಿದೆ. ಶೀಘ್ರವೇ ಈ ಕುರಿತು ಹೊಸ ನಿಯಮ ಜಾರಿಗೆ ತರಲು ಸರ್ಕಾರ ನಿರ್ಧಾರ. ಸಂಪುಟದಲ್ಲಿ ಖಾಸಗಿ ಸಂಘಟನೆ, ಸಂಸ್ಥೆ ಎಂದಿರುವ ನಾಯಕರು ಎಲ್ಲಿಯೂ ಆರ್‌ಎಸ್‌ಎಸ್‌ ಎಂದು ಉಲ್ಲೇಖಿಸದೇ ನಿರ್ಬಂಧ ನಿಯಮ ಜಾರಿಗೆ ತಂದಿದೆ.

ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

7 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

8 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

10 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

11 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

12 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

12 hours ago