Mysore
17
scattered clouds

Social Media

ಭಾನುವಾರ, 28 ಡಿಸೆಂಬರ್ 2025
Light
Dark

ಕಾಂತರಾಜು ವರದಿ ಒತ್ತಾಯಿಸಿ ಜನವರಿ 28ಕ್ಕೆ ಬೃಹತ್ ಅಹಿಂದಾ ಸಮಾವೇಶ‌; ಸಿಎಂಗೆ ಆಹ್ವಾನ

ಕಾಂತರಾಜು ಕಮಿಟಿ ವರದಿ ಜಾರಿಗೆ ತರಬೇಕು ಎಂದು ಒತ್ತಾಯಿಸಿ ಜನವರಿ 28ರಂದು ಬೃಹತ್‌ ಅಹಿಂದಾ ಸಮಾವೇಶ ನಡೆಸಲು ಶೋಷಿತ ಹಾಗೂ ಹಿಂದುಳಿದ ವರ್ಗಗಳ ಮಹಾ ಒಕ್ಕೂಟ ಮುಹೂರ್ತ ನಿಗದಿಪಡಿಸಲಾಗಿದೆ.

ಚಿತ್ರದುರ್ಗದ ಶ್ರೀ ಬಸವ ಮೂರ್ತಿ ಮಾದರ ಚೆನ್ನಯ್ಯ ಪೀಠದ ಪಕ್ಕದಲ್ಲಿರುವ ಮೈದಾನದಲ್ಲಿ ಈ ಸಮಾವೇಶ ನಡೆಸಲು ತೀರ್ಮಾನಿಸಲಾಗಿದ್ದು, ಜನವರಿ 28ರಂದು ಬೆಳಗ್ಗೆ 11 ಗಂಟೆಗೆ ಈ ಸಮಾವೇಶ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಅವರನ್ನೂ ಸಹ ಈ ಸಮಾವೇಶಕ್ಕೆ ಆಹ್ವಾನಿಸಲಾಗಿದ್ದು ಅಲ್ಪಸಂಖ್ಯಾತ, ದಲಿತ, ಎಸ್‌ಸಿ ಹಾಗೂ ಎಸ್‌ಟಿ ರಾಜಕೀಯ ನಾಯಕರಿಗೂ ಸಹ ಆಹ್ವಾನ ನೀಡಲಾಗಿದೆ. ಈ ಮೂಲಕ ಅಹಿಂದಾ ವರ್ಗ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ.

ಅಹಿಂದ ಹಕ್ಕೊತ್ತಾಯಗಳೇನು?

* ಹೆಚ್. ಕಾಂತರಾಜು ವರದಿಯನ್ನು ರಾಜ್ಯ ಸರ್ಕಾರ ಸ್ವೀಕರಿಸಿ ಯಥವತ್ತಾಗಿ ಅಂಗೀಕರಿಸಿ ಜಾರಿಗೊಳಿಸಬೇಕು.
* ಕೇಂದ್ರ ಸರ್ಕಾರವು ಜಾತಿವಾರು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಮಾಡಿಸಬೇಕು.
* EWS 10% ಮೀಸಲಾತಿಯನ್ನು ರದ್ದು ಪಡಿಸುವಂತೆ ಒತ್ತಾಯಿಸುವುದು.
* ಮಹಿಳಾ ರಾಜಕೀಯ ಮೀಸಲಾತಿ ಕಾಯ್ದೆಯನ್ನು ಕೂಡಲೇ ಜಾರಿ ಮಾಡಬೇಕು. ರಾಜಕೀಯ ಕ್ಷೇತ್ರದಲ್ಲೂ ಒಳ ಮೀಸಲಾತಿ ಕಲ್ಪಿಸಬೇಕು.
* ರಾಜಕೀಯ ಮೀಸಲಾತಿಯನ್ನು ಲೋಕಸಭೆ, ವಿಧಾನಸಭೆಗಳಲ್ಲಿ ಹಿಂದುಳಿದ ಜಾತಿಗಳಿಗೆ ಮತ್ತು ಅಲ್ಪಸಂಖ್ಯಾತರಿಗೆ ಅವಕಾಶ ಕಲ್ಪಿಸಬೇಕು
* ಜನಸಂಖ್ಯೆ ಅನುಗುಣವಾಗಿ ಶೇಕಡವಾರು ಪ್ರಮಾಣದಲ್ಲಿ ಮೀಸಲಾತಿಯನ್ನು ಹೆಚ್ಚಿಸಬೇಕು. ಖಾಸಗಿ ಕ್ಷೇತ್ರಕ್ಕೂ ಮೀಸಲಾತಿ ವಿಸ್ತರಿಸಬೇಕು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!