ಕಾಂತರಾಜು ಕಮಿಟಿ ವರದಿ ಜಾರಿಗೆ ತರಬೇಕು ಎಂದು ಒತ್ತಾಯಿಸಿ ಜನವರಿ 28ರಂದು ಬೃಹತ್ ಅಹಿಂದಾ ಸಮಾವೇಶ ನಡೆಸಲು ಶೋಷಿತ ಹಾಗೂ ಹಿಂದುಳಿದ ವರ್ಗಗಳ ಮಹಾ ಒಕ್ಕೂಟ ಮುಹೂರ್ತ ನಿಗದಿಪಡಿಸಲಾಗಿದೆ.
ಚಿತ್ರದುರ್ಗದ ಶ್ರೀ ಬಸವ ಮೂರ್ತಿ ಮಾದರ ಚೆನ್ನಯ್ಯ ಪೀಠದ ಪಕ್ಕದಲ್ಲಿರುವ ಮೈದಾನದಲ್ಲಿ ಈ ಸಮಾವೇಶ ನಡೆಸಲು ತೀರ್ಮಾನಿಸಲಾಗಿದ್ದು, ಜನವರಿ 28ರಂದು ಬೆಳಗ್ಗೆ 11 ಗಂಟೆಗೆ ಈ ಸಮಾವೇಶ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಅವರನ್ನೂ ಸಹ ಈ ಸಮಾವೇಶಕ್ಕೆ ಆಹ್ವಾನಿಸಲಾಗಿದ್ದು ಅಲ್ಪಸಂಖ್ಯಾತ, ದಲಿತ, ಎಸ್‌ಸಿ ಹಾಗೂ ಎಸ್‌ಟಿ ರಾಜಕೀಯ ನಾಯಕರಿಗೂ ಸಹ ಆಹ್ವಾನ ನೀಡಲಾಗಿದೆ. ಈ ಮೂಲಕ ಅಹಿಂದಾ ವರ್ಗ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ.
ಅಹಿಂದ ಹಕ್ಕೊತ್ತಾಯಗಳೇನು?
* ಹೆಚ್. ಕಾಂತರಾಜು ವರದಿಯನ್ನು ರಾಜ್ಯ ಸರ್ಕಾರ ಸ್ವೀಕರಿಸಿ ಯಥವತ್ತಾಗಿ ಅಂಗೀಕರಿಸಿ ಜಾರಿಗೊಳಿಸಬೇಕು.
* ಕೇಂದ್ರ ಸರ್ಕಾರವು ಜಾತಿವಾರು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಮಾಡಿಸಬೇಕು.
* EWS 10% ಮೀಸಲಾತಿಯನ್ನು ರದ್ದು ಪಡಿಸುವಂತೆ ಒತ್ತಾಯಿಸುವುದು.
* ಮಹಿಳಾ ರಾಜಕೀಯ ಮೀಸಲಾತಿ ಕಾಯ್ದೆಯನ್ನು ಕೂಡಲೇ ಜಾರಿ ಮಾಡಬೇಕು. ರಾಜಕೀಯ ಕ್ಷೇತ್ರದಲ್ಲೂ ಒಳ ಮೀಸಲಾತಿ ಕಲ್ಪಿಸಬೇಕು.
* ರಾಜಕೀಯ ಮೀಸಲಾತಿಯನ್ನು ಲೋಕಸಭೆ, ವಿಧಾನಸಭೆಗಳಲ್ಲಿ ಹಿಂದುಳಿದ ಜಾತಿಗಳಿಗೆ ಮತ್ತು ಅಲ್ಪಸಂಖ್ಯಾತರಿಗೆ ಅವಕಾಶ ಕಲ್ಪಿಸಬೇಕು
* ಜನಸಂಖ್ಯೆ ಅನುಗುಣವಾಗಿ ಶೇಕಡವಾರು ಪ್ರಮಾಣದಲ್ಲಿ ಮೀಸಲಾತಿಯನ್ನು ಹೆಚ್ಚಿಸಬೇಕು. ಖಾಸಗಿ ಕ್ಷೇತ್ರಕ್ಕೂ ಮೀಸಲಾತಿ ವಿಸ್ತರಿಸಬೇಕು.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…