ರಾಜ್ಯ

ಸಿರಿಧಾನ್ಯಗಳನ್ನು ಎಂ.ಎಸ್.ಪಿ ವ್ಯಾಪ್ತಿಗೆ ತನ್ನಿ; ಕೆಂದ್ರಕ್ಕೆ ಚಲುವರಾಯಸ್ವಾಮಿ ಮನವಿ..

ಬೆಂಗಳೂರು: ರಾಗಿ, ಜೋಳಗಳಂತೆ ಇತರೆ ಸಿರಿಧಾನ್ಯಗಳನ್ನೂ (ತೃಣ ಧಾನ್ಯಗಳು) ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಸೇರ್ಪಡೆಗೊಳಿಸುವುದು ಸೇರಿದಂತೆ ರೈತರಿಗೆ ವಿವಿಧ ರೀತಿಯಲ್ಲಿ ನೆರವು ಒದಗಿಸಲು ಕೃಷಿ ಕ್ಷೇತ್ರಕ್ಕೆ ಇನ್ನಷ್ಟು ಹೆಚ್ಚಿನ ಅನುದಾನ ಮತ್ತು ಆಧ್ಯತೆ ನೀಡುವಂತೆ ರಾಜ್ಯ ಕೃಷಿ ಸಚಿವರಾದ ಎನ್‌.ಚಲುವರಾಯಸ್ವಾಮಿರವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾದ ಶಿವರಾಜ್‌ಸಿಂಗ್‌ ಚೌವ್ಹಾಣ್‌ ಅವರು ದೇಶದ ಎಲ್ಲಾ ರಾಜ್ಯಗಳ ಕೃಷಿ ಸಚಿವರೊಂದಿಗೆ ವಿಡಿಯೋ ಸಂವಾದ ನಡೆಸಿದ ಸಂದರ್ಭದಲ್ಲಿ ಅವರು ಮಾತನಾಡಿ ಕರ್ನಾಟಕದ ಪರವಾಗಿ ಹಲವು ಬೇಡಿಕೆಗಳನ್ನು ಮುಂದಿಟ್ಟರು.

ರಾಜ್ಯದಲ್ಲಿ ಸರ್ಕಾರಿ ಬೀಜೋತ್ಪಾದನಾ ಕೇಂದ್ರಗಳು ಮತ್ತು ಗುಣಮಟ್ಟ ನಿಯಂತ್ರಣ ಪ್ರಯೋಗಾಲಯಗಳನ್ನು ಬಲಪಡಿಸಲು ಹೊಸ ಯೋಜನೆಗಳನ್ನು ರೂಪಿಸಿ ನೆರವು ನೀಡುವಂತೆ ಚಲುವರಾಯಸ್ವಾಮಿ ಮನವಿ ಮಾಡಿದರು.

ಜೋಳ(ಮಾಲ್ದಂಡಿ)ಕ್ಕೆ ಹಿಂಗಾರು ಹಂಗಾಮಿಗೆ ಕನಿಷ್ಠ ಬೆಂಬಲ ಬೆಲೆ ಘೋಷಣೆ ಮಾಡುವಂತೆಯೂ ಸಹ ಅವರು ಕೇಂದ್ರ ಸಚಿವರಲ್ಲಿ ಮನವಿ ಮಾಡಿದರು.

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿಯಲ್ಲಿ ರಾಜ್ಯದ ಕೃಷಿ ಹಾಗೂ ವಿವಿಧ ಮೂಲಭೂತ ಸೌಕರ್ಯ ಅಭಿವೃದ್ಧಿ ಯೋಜನೆಗಳಿಗೂ ಹೆಚ್ಚಿನ ಅನುದಾನ ಒದಗಿಸುವಂತೆ ಚಲುವರಾಯಸ್ವಾಮಿ  ಕೋರಿದರು.

ಇದೇ ವೇಳೆ ಸಿರಿಧಾನ್ಯಗಳ ಮೌಲ್ಯವರ್ಧಿತ ಉತ್ಪನ್ನಗಳ ಮೇಲಿನ ಜಿಎಸ್‌ಟಿಯನ್ನು ಶೇಕಡಾ 18 ರಿಂದ 5ಕ್ಕೆ ಇಳಿಸುವಂತೆ ಅವರು ಕೋರಿದರು.

ಬೆಂಗಳೂರು ಜಿಲ್ಲೆಯ ಆನೇಕಲ್‌ನಲ್ಲಿರುವ ಸರ್ಕಾರಿ ಭೂಮಿಯಲ್ಲಿ ಇನ್‌ಸ್ಟಿಟ್ಯೂಟ್ ಆಫ್ ಪೆಸ್ಟಿಸೈಡ್ ಫಾರ್ಮುಲೇಶನ್ ಟೆಕ್ನಾಲಜಿಯ ಸ್ಥಾಪನೆಗೂ ಧನಸಹಾಯ ಒದಗಿಸುವಂತೆ ರಾಜ್ಯ ಕೃಷಿ ಸಚಿವರು ಮನವಿ ಮಾಡಿದರು.

ಕೃಷಿ ವಿಶ್ವವಿದ್ಯಾಲಯಗಳ ಕ್ಷೇತ್ರ ಬೆಳೆಗಳ ವಿಶೇಷವಾಗಿ ಎಣ್ಣೆಕಾಳು ಬೆಳೆಗಳ ತಳಿವರ್ಧೆನೆಗೆ ಕೇಂದ್ರೀಯ ಕೃಷಿ ಸಂಶೋಧನೆ ಹಾಗೂ ವಿಸ್ತರಣೆ ಇಲಾಖೆ (DARE) ಮೂಲಕ ಹೆಚ್ಚಿನ ಹಣವನ್ನು ಮಂಜೂರು ಮಾಡಲು ಕೇಂದ್ರ ಸಚಿವರಿಗೆ ವಿನಂತಿಸಿದರು.

ರಾಜ್ಯದಲ್ಲಿ ಸವಳು ಮತ್ತು ಜವಳು ಮಣ್ಣು ಸುಧಾರಣೆಗೆ ಹೊಸ ಯೋಜನೆಯನ್ನು ಪ್ರಾರಂಭಿಸಬಹುದಾಗಿದೆ ಎಂದು ಕೇಂದ್ರ ಸಚಿವರ ಗಮನ ಸೆಳೆದ ಎನ್‌.ಚಲುವರಾಯಸ್ವಾಮಿ ರೈತರ ಹೊಲಗಳಲ್ಲಿ ಕೃಷಿ ಅರಣ್ಯೀಕರಣ ಪ್ರದೇಶ ವಿಸ್ತರಣೆಗೆ ಧನಸಹಾಯ ಹೆಚ್ಚಿಸಲು ಕೋರಿದರು.

ಕರ್ನಾಟಕದಲ್ಲಿ ಕ್ಲಸ್ಟರ್ ಆಧಾರದ ಮೇಲೆ ರೈತ ಉತ್ಪಾದಕ ಸಂಸ್ಥೆಗಳು ಮತ್ತು ಅಗ್ರಿ-ಟೆಕ್ ಸ್ಟಾರ್ಟ್ಅಪ್‌ಗಳ ಮೂಲಕ ಕೋಲ್ಡ್ ಚೈನ್ ಅಭಿವೃದ್ಧಿ ಮಾಡಿ ಸಂಸ್ಕರಣೆ, ಪ್ಯಾಕೇಜಿಂಗ್, ಬ್ರ್ಯಾಂಡಿಂಗ್, ಮಾರ್ಕೆಟಿಂಗ್, ರಫ್ತು ಮುಂತಾದ ತಂತ್ರಜ್ಞಾನಗಳನ್ನು ಉತ್ತೇಜಿಸಲು ಯೋಜನೆಯನ್ನು ಪ್ರಾರಂಭಿಸುವಂತೆ ಮನವಿ ಮಾಡಿದರು.

ಇದೇ ವೇಳೆ ಕೇಂದ್ರ ಕೃಷಿ ಸಚಿವರಾದ ಶಿವರಾಜ್‌ಸಿಂಗ್‌ ಚೌವ್ಹಾಣ್‌, ಕೃಷಿ ರಾಜ್ಯ ಸಚಿವರು ಹಾಗೂ ವಿವಿಧ ರಾಜ್ಯಗಳ ಕೃಷಿ ಸಚಿವರು ಮತ್ತು ಹಿರಿಯ ಅಧಿಕಾರಿಗಳನ್ನು ಇದೇ ತಿಂಗಳು ಬೆಂಗಳೂರಿನಲ್ಲಿ ನಡೆಯುವ ಅಂತರಾಷ್ಟ್ರೀಯ ಸಾವಯವ, ಸಿರಿಧಾನ್ಯ ವಾಣಿಜ್ಯ ಮೇಳ-2025ಕ್ಕೆ ಆಗಮಿಸುವಂತೆ ಎನ್.ಚಲುವರಾಯಸ್ವಾಮಿರವರು ಅಹ್ವಾನಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

3 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

4 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

5 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

7 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

13 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

19 hours ago