ಬಳ್ಳಾರಿ: ದಲ್ಲಾಳಿಗಳ ಕಾಟದಿಂದ ಬೇಸತ್ತು ನಾಲ್ವರು ರೈತರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲ್ಲೂಕಿನ ಸೋಮಸಮುದ್ರ ಗ್ರಾಮದಲ್ಲಿ ನಡೆದಿದೆ.
ರುದ್ರೇಶ್, ಶೇಖರಪ್ಪ, ಹನುಮಂತ, ಕೋಣೇರಪ್ಪ ಎಂಬುವವರೇ ಆತ್ಮಹತ್ಯೆಗೆ ಯತ್ನಿಸಿದ ರೈತರಾಗಿದ್ದಾರೆ. ಅಸ್ವಸ್ಥಗೊಂಡ ನಾಲ್ವರನ್ನು ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕಳೆದ ವರ್ಷ ಅಗ್ರಿಗ್ರೇಡ್ ಕಂಪನಿಯ ವಿರೂಪಾಕ್ಷಪ್ಪ, ಸುದರ್ಶನ, ರಾಯರೆಡ್ಡಿ ಎಂಬ ದಲ್ಲಾಳಿಗಳ ಮೂಲಕ ರೈತರು ಮೆಣಸಿನಕಾಯಿ ಮಾರಾಟ ಮಾಡಿದ್ದರು. ಆಶಾರಾಣಿ, ಅಶೋಕ್ ಕುಮಾರ್, ಶಿವಮೂರ್ತಿ ಎಂಬುವವರಿಂದ ಮೆಣಸಿನಕಾಯಿ ಖರೀದಿ ಆರೋಪ ಮಾಡಲಾಗಿದೆ. 1 ಕೋಟಿ 93 ಲಕ್ಷ ರೂ ಹಣವನ್ನು ದಲ್ಲಾಳಿಗಳು ಬಾಕಿ ಉಳಿಸಿಕೊಂಡಿದ್ದಾರೆ.
ಕಳೆದ 18 ದಿನಗಳಿಂದ ಹಣ ನೀಡದೇ ಸತಾಯಿಸುತ್ತಿದ್ದಾರೆ. ಹೀಗಾಗಿ ದಲ್ಲಾಳಿಗಳ ಕಳ್ಳಾಟಕ್ಕೆ ಮನನೊಂದು ವಿಷ ಸೇವಿಸಿದ್ದರು. ಬಾಕಿ ಹಣ ನೀಡದಿದ್ದರೆ ಸಾಮೂಹಿಕವಾಗಿ ವಿಷ ಸೇವಿಸುವುದಾಗಿ ರೈತರು ಎಚ್ಚರಿಕೆ ನೀಡಿದ್ದಾರೆ.
ಗೋಣಿಕೊಪ್ಪ: ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿರಾಜಪೇಟೆ ರಸ್ತೆಯ…
ಬೀದರ್: ಕಾಳಿ, ಭದ್ರಾ, ನಾಗರಹೊಳೆ, ಬಂಡೀಪುರ, ಬಿ.ಆರ್.ಟಿ. ಹುಲಿ ಸಂರಕ್ಷಿತ ಧಾಮ ಸೇರಿದಂತೆ ರಾಜ್ಯದ ಎಲ್ಲ ಅರಣ್ಯ ಪ್ರದೇಶದಲ್ಲಿ ಇಂದಿನಿಂದ…
ಮೈಸೂರು: ಬಜೆಟ್ ನಂತರ ಅಧಿಕಾರ ಹಂಚಿಕೆ ನಡೆಯುತ್ತದೆ ಎಂದು ನಾನು ಎಲ್ಲಿಯೂ ಹೇಳಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ…
ತುಮಕೂರು: ತುಮಕೂರಿನಲ್ಲಿ 11 ಮಂಗಗಳು ನಿಗೂಢವಾಗಿ ಸಾವನ್ನಪ್ಪಿದ್ದು, ಕಿಡಿಗೇಡಿಗಳು ವಿಷಪ್ರಾಶನ ಮಾಡಿರುವ ಶಂಕೆ ವ್ಯಕ್ತವಾಗಿದೆ. ದೇವರಾಯನ ದುರ್ಗ ಅರಣ್ಯ ಪ್ರದೇಶದಲ್ಲಿ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹುಲಿ ಆತಂಕ ಮುಂದುವರಿದಿದ್ದು, ಇಂದು ಬೆಳ್ಳಂಬೆಳಿಗ್ಗೆ ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ಹುಲಿ ಕಾಣಿಸಿಕೊಂಡು…
ಬೆಂಗಳೂರು: ಕಳೆದ ಒಂದು ತಿಂಗಳಿನಿಂದ ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿರುವ ಟೊಮೊಟೊ ದರ ಶತಕದ ಸಮೀಪಕ್ಕೆ ಬಂದಿದೆ. ಟೊಮೊಟೊ ಬೆಲೆ…