Mysore
26
clear sky

Social Media

ಶುಕ್ರವಾರ, 23 ಜನವರಿ 2026
Light
Dark

ಕರಾವಳಿಯಲ್ಲಿ ಮುಸ್ಲಿಂ ಯುವಕನ ಬರ್ಬರ ಹತ್ಯೆ: ಮೇ.30ರವರೆಗೂ ನಿಷೇಧಾಜ್ಞೆ ಜಾರಿ

ಮಂಗಳೂರು: ಬಂಟ್ವಾಳ ಸಮೀಪ ಮುಸ್ಲಿಂ ಯುವಕ ಅಬ್ದುಲ್‌ ರರೆಹಮಾನ್‌ ಎಂಬಾತನನ್ನು ಬರ್ಬರವಾಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

ಪ್ರಕರಣ ಸಂಬಂಧ ದೀಪಕ್‌, ಸುಮಿತ್‌ ಸೇರಿದಂತೆ 15 ಮಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು, ಮೇ.30ರವರೆಗೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಪ್ರಕರಣ ಸಂಬಂಧ ಮಾತನಾಡಿರುವ ಸಚಿವ ದಿನೇಶ್‌ ಗುಂಡೂರಾವ್‌ ಅವರು, ಅಬ್ದುಲ್‌ ರೆಹಮಾನ್‌ ಎಂಬ ವ್ಯಕ್ತಿಯ ಹತ್ಯೆ ಖಂಡನೀಯ. ಘಟನೆಗೆ ನೈಜ ಕಾರಣ ತಿಳಿದಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯ ಶಾಂತಿ ಹಾಳು ಮಾಡುವ ದುಷ್ಟ ಯತ್ನವೊಂದು ವ್ಯವಸ್ಥಿತವಾಗಿ ನಡೆಯುತ್ತಿದೆ. ಈ ಘಟನೆಯು ಇದರ ಒಂದು ಭಾಗದಂತೆ ಕಾಣಿಸುತ್ತಿದೆ. ಜಿಲ್ಲೆಯ ಕಾನೂನು ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತಕ್ಕೆ ಕಠಿಣ ಸೂಚನೆ ನೀಡಿದ್ದೇನೆ. ಜನರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡಿದರು.

Tags:
error: Content is protected !!