ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಮಾಜದ ಎಲ್ಲಾ ವರ್ಗದವರನ್ನು ಸಮಾನವಾಗಿ ಕಾಣುತ್ತಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಹೇಳಿದ್ದಾರೆ.
ಹೆಬ್ಬಾಳ ಕ್ಷೇತ್ರದಲ್ಲಿ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಮುಸ್ಲಿಂ ಬಾಂಧವರಿಗೆ ಹಬ್ಬದ ಶುಭಾಶಯಗಳನ್ನು ಕೋರಿ ಅವರು ಮಾತನಾಡಿದರು.
ಸಿದ್ದರಾಮಯ್ಯ ಅವರು ಈ ಬಾರಿ ಮುಖ್ಯಮಂತ್ರಿ ಆದ ನಂತರ ದೇವಾಲಯಗಳು ಮತ್ತು ಮಸೀದಿ ಸೇರಿದಂತೆ ಎಲ್ಲಾ ಧರ್ಮದ ಪ್ರಾರ್ಥನಾ ಮಂದಿರಗಳ ಶ್ರೇಯೋಭಿವೃದ್ಧಿಗೆ ಸಾಕಷ್ಟು ಅನುದಾನ ನೀಡಿದ್ದಾರೆ ಎಂದರು.
ಈ ಮೂಲಕ ನಮ್ಮ ಸರ್ಕಾರ ಎಲ್ಲಾ ಧರ್ಮದವರನ್ನು ಸಮಾನವಾಗಿ ಕಾಣುವ ಮತ್ತು ಗೌರವ ಕೊಡುವ ಕೆಲಸ ಮಾಡುತ್ತಿದೆ ಎಂದು ಸುರೇಶ್ ಹೇಳಿದರು.
ಸಮಾಜದಲ್ಲಿ ಎಲ್ಲರೂ ಶಾಂತಿ, ಸಹಬಾಳ್ವೆಯಿಂದ ಇದ್ದಾಗ ಮಾತ್ರ ರಾಜ್ಯ, ದೇಶ ಮತ್ತು ಮಾನವ ಸಂಕುಲ ಉನ್ನತಿ ಸಾಧಿಸಲು ಸಾಧ್ಯವಾಗುತ್ತದೆ. ತ್ಯಾಗದ ಸಂಕೇತವಾದ ಬಕ್ರೀದ್ ಹಬ್ಬದ ಈ ಶುಭ ಸಂದರ್ಭದಲ್ಲಿ ಎಲ್ಲರೂ ಸಮಾಜದ ಒಳಿತಿಗಾಗಿ ಸಂಕಲ್ಪ ಮಾಡೋಣ ಎಂದು ಅವರು ಕರೆ ನೀಡಿದರು.
ಇದೇ ಸಂದರ್ಭದಲ್ಲಿ ಇತ್ತೀಚೆಗೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಸಚಿವರು, ಮೃತರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಹೇಳಿದರು.
ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…
ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…
ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…