Mysore
27
clear sky

Social Media

ಭಾನುವಾರ, 14 ಡಿಸೆಂಬರ್ 2025
Light
Dark

ಲೋಕಸಮರ 2024: ಶಿಕಾರಿಪುರದಲ್ಲಿ ಮತ ಚಲಾಯಿಸಿದ ಬಿಎಸ್‌ವೈ ಹಾಗೂ ರಾಘವೇಂದ್ರ

ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ ತಾಲೂಕು ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಹಾಗೂ ಅವರ ಪುತ್ರ ಬಿವೈ ರಾಘವೇಂದ್ರ ಜತೆಯಲ್ಲಿ ಬಂದು ಮತದಾನ ಮಾಡಿದರು.

ಮತದಾನಕ್ಕೂ ಮೊದಲು ಬಿಎಸ್‌ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಜೊತೆ ಶಿಕಾರಿಪುರದ ಹುಚ್ಚರಾಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಮತದಾನದ ಬಳಿಕ ಮಾತನಾಡಿದ ಬಿಎಸ್‌ವೈ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಕನಿಷ್ಟ 24-25 ಸ್ಥಾನಗಳಲ್ಲಿ ಜಯ ಗಳಿಸಲಿದೆ. ನನ್ನ ಪುತ್ರ ಬಿ.ವೈ ರಾಘವೇಂದ್ರ 2.5 ಲಕ್ಷ ಮತಗಳಿಗೂ ಹೆಚ್ಚು ಅಂತರದಿಂದ ಈ ಚುನಾವಣೆಯಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Tags:
error: Content is protected !!