ಬೆಂಗಳೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ ಅವರನ್ನು ಬಿಜೆಪಿ ಘಟಕ 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮೊದಲ ಬಾರಿಗೆ ಮಾತನಾಡಿದ್ದಾರೆ.
ಪಕ್ಷ ವಿರೋಧಿ ಚಟುವಟಿಕೆ ಹಿನ್ನಲೇ ಬಿಜೆಪಿ ಪಕ್ಷದ ಶಿಸ್ತು ಸಮಿತಿ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದೆ ಇದು ಅವರ ನಿರ್ಧಾರವಾಗಿದೆ. ಬಹುಶಃ ಕೆ.ಎಸ್ ಈಶ್ವರಪ್ಪ ಅವರ ಅಪೇಕ್ಷೆಯೂ ಇದೇ ಆಗಿತ್ತೇನೋ. ಈ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಆದರೆ ಈ ಬಾರಿ ಶಿವಮೊಗ್ಗ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಮೂರು ಲಕ್ಷ ಮತಗಳ ಅಂತರದಿಂದ ಜಯಶಾಲಿಗಳಾಗುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.
ಇದೇ ವಿಚಾರಕ್ಕೆ ಬಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮಾತನಾಡಿ, ರಾಜ್ಯ ಬಿಜೆಪಿ ಶಿಸ್ತು ಸಮಿತಿ ಈಶ್ವರಪ್ಪ ಅವರಿಗೆ ತಮ್ಮ ತಪ್ಪನ್ನು ತಿದ್ದಿಕೊಳ್ಳಲು ಸಾಕಷ್ಟು ಸಮಯಾವಕಾಶ ನೀಡಿತ್ತು, ಆದರೆ ಅವರು ತಮ್ಮ ಧೋರಣೆ, ನೀತಿಯನ್ನು ಬದಲಿಸಲಿಲ್ಲ ಹೀಗಾಗಿ ಅವರ ಮೇಲೆ ಕ್ರಮ ಕೈಗೊಳ್ಳಲಾಗಿದೆ ಎಂದು ಬಿ.ವೈ ವಿಜಯೇಂದ್ರ ಸಮರ್ಥಿಸಿಕೊಂಡರು.