ರಾಜ್ಯ

ಅವರಪ್ಪನೇ ಬಂದು ನನ್ನನ್ನ ಕರೆದುಕೊಂಡು ಹೋಗ್ತಾನೆ: ಈಶ್ವರಪ್ಪ ಹೇಳಿದ್ದಾದರೂ ಯಾರಿಗೆ?!

ಶಿವಮೊಗ್ಗ: ಬಿಜೆಪಿ ಬಂಡಾಯ ಅಭ್ಯರ್ಥಿ ಶಿವಮೊಗ್ಗ ಲೋಕಸಭಾ ಅಭ್ಯರ್ಥಿ ಕೆ.ಎಸ್‌ ಈಶ್ವರಪ್ಪ ಅವರು ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ ಅವರನ್ನು ಏಕವಚನಲ್ಲೇ ಛಾಡಿಸಿದ್ದಾರೆ.

ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ನಾನು ಈ ಕ್ಷೇತ್ರದಲ್ಲಿ ಗೆದ್ದ ಬಳಿಕ ಅವರಪ್ಪ ಬಂದು ನನ್ನನ್ನು ಬಿಜೆಪಿ ಕರೆದುಕೊಂಡು ಹೋಗುತ್ತಾನೆ. ಜಗದೀಶ್‌ ಶೆಟ್ಟರ್‌ ಬಿಜೆಪಿಯಿಂದ ಕಾಂಗ್ರೆಸ್‌ ಸೇರಿದ್ದರು, ಅವರ ಕೈಕಾಲನ್ನೇ ಕಟ್ಟಿ ಪಕ್ಷಕ್ಕೆ ಮತ್ತೆ ಆಹ್ವಾನಿಸಿರುವಾಗ ಮೂಲ ಬಿಜೆಪಿಯವನಾದ ನನ್ನನ್ನು ಕರೆಯುದಿಲ್ಲವೇ. ಬಿಜೆಪಿಯನ್ನು ಕಟ್ಟಿದವನು ನಾನು, ನಾನು ಬಿಜೆಪಿಯಲ್ಲಿಯೇ ಇದ್ದವನು, ಯಡಿಯೂರಪ್ಪ ಕೆಜೆಪಿ ಕಟ್ಟಿ ನಂತರ ಪಕ್ಷಕ್ಕೆ ವಾಪಾಸಾಗಿದ್ದಾನೆ ಎಂದು ಕಿಡಿಕಾರಿದರು.

ಈ ಬಾರಿಯ ಚುನಾವಣೆಯಲ್ಲಿ ಗೆಲ್ಲುವ ಮೂಲಕ ರಾಜ್ಯ ಬಿಜೆಪಿಯನ್ನು ಅಪ್ಪ-ಮಕ್ಕಳಿಂದ ಮಕ್ತ ಮಾಡುತ್ತೇನೆ. ರಾಘವೇಂದ್ರ ಸೋಲುವ ಮೂಲಕ ಆತನ ಕಥೆ ಮುಗಿದಂತೆಯೇ, ಚುನಾವಣೆ ಬಳಿಕ ಬಿ.ವೈ ವಿಜೈಯೇಂದ್ರ ಪಕ್ಷದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲಿದ್ದಾನೆ ಎಂದು ಏಕವಚನದಲ್ಲಿಯೇ ಈಶ್ವರಪ್ಪ ಮಾತನಾಡಿದರು.

ಮುಂದುವರೆದು, ವಿಜಯೇಂದ್ರ ಕುಂಕುಮ ಅಳಿಸಿಕೊಂಡ ಬಗ್ಗೆ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ಕಾಂಗ್ರೆಸ್‌ ಜೊತೆಗೆ ಹೊಂದಾಣಿಕೆ ಮಾಡಿಕೊಂಡಿರುವ ಅವರಿಗೆ ಯಾವುದೇ ನೈತಿಕತೆಯಿಲ್ಲ. ಕುಂಕುಮವನ್ನು ಯಾವಾಗ ಬೇಕಾದರೂ ಹಚ್ಚುತ್ತಾರೆ, ಯಾವಾಗ ಬೇಕಾದರೂ ತೆಗೆಯುತ್ತಾರೆ. ಕೆಜೆಪಿಯಲ್ಲಿದ್ದಾಗ ಇವರೆ ಅಲ್ಲವೇ ಟಿಪ್ಪು ಜಯಂತಿ ದಿನದಂದು, ಟಿಪ್ಪು ಟೋಪಿ ಹಾಕಿಕೊಂಡು ಹೋಗಿದ್ದವರು ಎಂದು ಆಕ್ರೋಶ ಹೊರ ಹಾಕಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ರೈತರ ಆತ್ಮಹತ್ಯೆ ತಡೆಗೆ ಕ್ರಮ ಕೈಗೊಳ್ಳಿ

ಕಳೆದ ಮೂರು ವರ್ಷಗಳ ಅವಧಿಯಲ್ಲಿ, ರಾಜ್ಯದಲ್ಲಿ ೨,೮೪೭ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ವಿಭಾಗ (ಎನ್‌ಸಿಆರ್‌ಬಿ)…

1 min ago

ಓದುಗರ ಪತ್ರ: ವಿದ್ಯಾರ್ಥಿಗಳ ಶಾಲಾ ಬ್ಯಾಗ್ ಹೊರೆ ಕಡಿಮೆ ಮಾಡಿ

ಭಾರತದ ಶಿಕ್ಷಣ ನೀತಿ ಮಕ್ಕಳ ಆರೋಗ್ಯದ ಕುರಿತು ಸ್ಪಷ್ಟ ಮಾರ್ಗಸೂಚಿ ನೀಡಿದ್ದರೂ, ಬಹುತೇಕ ಶಾಲೆಗಳು ಇದನ್ನು ಪಾಲಿಸುತ್ತಿಲ್ಲ ಎಂಬುದು ವಿಷಾದಕರ…

12 mins ago

ವಿಕಸಿತ್ ಭಾರತ್- ಜಿ ರಾಮ್ ಜಿ: ಮಹಾತ್ಮನನ್ನು ಮರೆಗೆ ಸರಿಸುವ ಹುನ್ನಾರ

ಕೇಂದ್ರ ಸರ್ಕಾರದಲ್ಲಿ ಕೃಷಿ, ರೈತ ಕಲ್ಯಾಣ ಮತ್ತು ಗ್ರಾಮೀಣ ಅಭಿವೃದ್ಧಿ ಸಚಿವರಾಗಿರುವ ಶಿವರಾಜ್ ಸಿಂಗ್ ಚೌಹಾಣ್ ಅವರು ಡಿಸೆಂಬರ್ ೧೬ರಂದು…

16 mins ago

ಸರ್ಕಾರಿ ಕಾರ್ಯಕ್ರಮಗಳಲ್ಲಿ ಸ್ಮರಣಿಕೆ, ಟ್ರೋಫಿ

ಪರಿಸರಕ್ಕೆ ಪೂರಕವಾದ ವಸ್ತುಗಳನ್ನು ನೀಡಲು ಸಲಹೆ; ಸ್ಮರಣಿಕೆ, ಟ್ರೋಫಿ ಬದಲು ಸಸಿ, ಪುಸ್ತಕ ವಿತರಿಸಲು ಸುತ್ತೋಲೆ ಮೈಸೂರು: ರಾಜ್ಯ ಸರ್ಕಾರ…

60 mins ago

ಡಿ.26ರಿಂದ ಕೊಡವ ಹಾಕಿ ಚಾಂಪಿಯನ್ ಟ್ರೋಫಿ

ಪುನೀತ್ ಕೊಡವ ಹಾಕಿ ಅಕಾಡೆಮಿ ಆಶ್ರಯದಲ್ಲಿ ಆಯೋಜನೆ; ವಿಜೇತ ತಂಡಕ್ಕೆ ೨ ಲಕ್ಷ ರೂ. ಬಹುಮಾನ ಮಡಿಕೇರಿ: ಕೊಡವ ಹಾಕಿ…

3 hours ago

ಡಿ.21ರಿಂದ ಅರಮನೆ ಅಂಗಳದಲ್ಲಿ ಫಲಪುಷ್ಪ ಪ್ರದರ್ಶನ

ಪ್ರತಿದಿನ ರಾತ್ರಿ ಅರಮನೆಗೆ ದೀಪಾಲಂಕಾರ ಹೂವಿನಿಂದ ಶೃಂಗೇರಿ ದೇವಸ್ಥಾನದ ಮಾದರಿ ನಿರ್ಮಾಣ ಪುಷ್ಪ ಪ್ರಿಯರ ಕಣ್ಮನ ಸೆಳೆಯಲಿರುವ ವಿವಿಧ ಮಾದರಿಗಳು…

3 hours ago