Mysore
23
overcast clouds

Social Media

ಗುರುವಾರ, 09 ಏಪ್ರಿಲ 2026
Light
Dark

ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ: ಮಾಜಿ ಸಿಎಂ ಯಡಿಯೂರಪ್ಪ

Yediyurappa

ಬೆಂಗಳೂರು: ಬಿಜೆಪಿಯಿಂದ ಎಸ್.ಟಿ.ಸೋಮಶೇಖರ್‌ ಹಾಗೂ ಶಿವರಾಮ್‌ ಹೆಬ್ಬಾರ್‌ ಉಚ್ಛಾಟನೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಯಡಿಯೂರಪ್ಪ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ. ಬಿಜೆಪಿ ನಿಜವಾದ ಶಕ್ತಿಯೇ ಪಕ್ಷದ ನಿಷ್ಠಾವಂತ ಕಾರ್ಯಕರ್ತರು. ಪಕ್ಷದ ಶಿಸ್ತು, ತತ್ವ, ಸಿದ್ಧಾಂತ ಮತ್ತು ನಾಯಕತ್ವಕ್ಕೆ ಎಲ್ಲರೂ ಬದ್ಧರಾಗಿರಬೇಕು. ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ ಎಂದರು.

ಇನ್ನು ಹಲವಾರು ಬಾರಿ ಎಚ್ಚರಿಕೆ ನೀಡಿದ್ದರೂ ಪಕ್ಷ ವಿರೋಧಿ ಚಟುವಟಿಕೆಗಳನ್ನು ಮುಂದುವರಿಸಿದ್ದ ಶಿವರಾಮ್‌ ಹೆಬ್ಬಾರ್‌ ಹಾಗೂ ಎಸ್.ಟಿ.ಸೋಮಶೇಖರ್‌ ಅವರನ್ನು ಈಗ ಪಕ್ಷದಿಂದ ಉಚ್ಛಾಟಿಸಲಾಗಿದೆ. ಪಕ್ಷದ ಎಲ್ಲಾ ನಿಷ್ಠಾವಂತ ನಾಯಕರು, ಪದಾಧಿಕಾರಿಗಳು, ಕಾರ್ಯಕರ್ತರು ಇಂತಹ ಯಾವುದೇ ಬೆಳವಣಿಗೆಗಳಿಂದ ವಿಚಲಿತರಾಗದೇ ಪಕ್ಷ ಸಂಘಟನೆಯ ಕಾರ್ಯದಲ್ಲಿ ನಿರತರಾಗಿರುವಂತೆ ಕರೆ ನೀಡಿದ್ದಾರೆ.

Tags:
error: Content is protected !!