Mysore
28
clear sky

Social Media

ಬುಧವಾರ, 25 ಮಾರ್ಚ್ 2026
Light
Dark

ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ನಾಳೆಗೆ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ನ ಏಕ ಸದಸ್ಯ ಪೀಠವೂ ನಾಳೆಗೆ(ಡಿಸೆಂಬರ್‌.19) ವಿಚಾರಣೆ ಮುಂದೂಡಿಕೆ ಮಾಡಲಾಗಿದೆ ಎಂದು ಆದೇಶ ಹೊರಡಿಸಿದೆ.

ಈ ಕುರಿತು ಇಂದು(ಡಿಸೆಂಬರ್‌.18) ಹೈಕೋರ್ಟ್‌ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠವೂ ಅರ್ಜಿ ವಿಚಾರಣೆ ನಡೆಸಿದ್ದು, ವಾದ-ಪ್ರತಿವಾದಗಳನ್ನು ಆಲಿಸಿದ ನಂತರ ಅರ್ಜಿ ವಿಚಾರಣೆಯನ್ನು ಗುರುವಾರ(ನಾಳೆ) ಮಧ್ಯಾಹ್ನದ ವೇಳೆಗೆ ಮುಂದೂಡಿಕೆ ಮಾಡಲಾಗಿದೆ ಎಂದು ತೀರ್ಪು ಪ್ರಕಟಿಸಿದೆ.

ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್‌ನ ಏಕ ಸದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಅನ್ವಯ ಇಂದು ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರಾದ ಎಂ.ನಾಗಪ್ರಸನ್ನ ಅವರು ವಿಚಾರಣೆ ನಡೆಸಲಿದ್ದಾರೆ.

ಏನಿದು ಪ್ರಕರಣ?

2024ರ ಮಾರ್ಚ್‌ ತಿಂಗಳಿನಲ್ಲಿ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಈ ದೂರಿನ ಆಧಾರದ ಮೇಲೆ ಎಫ್‌ಐಆರ್‌ ದಾಖಲಿಸಲಾಗಿತ್ತು. ಬಳಿಕ ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವರ್ಗಾಯಿಸಲಾಗಿತ್ತು.

Tags:
error: Content is protected !!