ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ನ ಏಕ ಸದಸ್ಯ ಪೀಠವೂ ನಾಳೆಗೆ(ಡಿಸೆಂಬರ್.19) ವಿಚಾರಣೆ ಮುಂದೂಡಿಕೆ ಮಾಡಲಾಗಿದೆ ಎಂದು ಆದೇಶ ಹೊರಡಿಸಿದೆ.
ಈ ಕುರಿತು ಇಂದು(ಡಿಸೆಂಬರ್.18) ಹೈಕೋರ್ಟ್‌ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠವೂ ಅರ್ಜಿ ವಿಚಾರಣೆ ನಡೆಸಿದ್ದು, ವಾದ-ಪ್ರತಿವಾದಗಳನ್ನು ಆಲಿಸಿದ ನಂತರ ಅರ್ಜಿ ವಿಚಾರಣೆಯನ್ನು ಗುರುವಾರ(ನಾಳೆ) ಮಧ್ಯಾಹ್ನದ ವೇಳೆಗೆ ಮುಂದೂಡಿಕೆ ಮಾಡಲಾಗಿದೆ ಎಂದು ತೀರ್ಪು ಪ್ರಕಟಿಸಿದೆ.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್‌ನ ಏಕ ಸದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಅನ್ವಯ ಇಂದು ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರಾದ ಎಂ.ನಾಗಪ್ರಸನ್ನ ಅವರು ವಿಚಾರಣೆ ನಡೆಸಲಿದ್ದಾರೆ.
ಏನಿದು ಪ್ರಕರಣ?
2024ರ ಮಾರ್ಚ್ ತಿಂಗಳಿನಲ್ಲಿ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಈ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿತ್ತು. ಬಳಿಕ ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವರ್ಗಾಯಿಸಲಾಗಿತ್ತು.
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…