ಬೆಂಗಳೂರು: ರಾಜ್ಯ ಬಜೆಟ್ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಸದನದಲ್ಲಿ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ನಡುವೆ ಜಟಾಪಟಿ ನಡೆಯಲಿದೆ.
ನಿನ್ನೆಯಷ್ಟೇ ಬಜೆಟ್ ಅಧಿವೇಶನದ ಮೊದಲ ದಿನದಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ್ದಾರೆ.
ಇಂದಿನಿಂದ ರಾಜ್ಯಪಾಲರ ಭಾಷಣದ ಮೇಲೆ ಸುದೀರ್ಘ ಚರ್ಚೆ ನಡೆಯಲಿದ್ದು, ಆಡಳಿತ ಪಕ್ಷ ಹಾಗೂ ವಿಪಕ್ಷಗಳ ನಡುವೆ ತೀವ್ರ ಜಟಾಪಟಿ ನಡೆಯಲಿದೆ.
ರಾಜ್ಯಪಾಲರ ಭಾಷಣ ಕುರಿತು ಇಂದಿನಿಂದ ಗುರುವಾರದವರೆಗೂ ಸುದೀರ್ಘ ಚರ್ಚೆ ನಡೆಯಲಿದ್ದು, ಆಡಳಿತ ಪಕ್ಷ ಹಾಗೂ ವಿಪಕ್ಷಗಳ ನಡುವೆ ತೀವ್ರ ವಾಕ್ಸಮರ ನಡೆಯಲಿದೆ.
ಇಂದಿನಿಂದ ಸದನದ ಬಾವಿಗಿಳಿದು ಹೋರಾಟ ಆರಂಭವಾಗಲಿದ್ದು, ಸಭಾತ್ಯಾಗಗಳಂಹ ಹೈಡ್ರಾಮಾ ಕೂಡ ನಡೆಯಲಿದೆ.





