Mysore
18
overcast clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

ಮಾರ್ಚ್.‌3ರಿಂದ ಬಜೆಟ್‌ ಅಧಿವೇಶನ: ಸ್ಪೀಕರ್‌ ಯು.ಟಿ.ಖಾದರ್‌ ಮಾಹಿತಿ

ದಾವಣಗೆರೆ: ವಿಧಾನಸಭೆಯ ಬಜೆಟ್‌ ಅಧಿವೇಶ ಮಾರ್ಚ್.‌3ರಿಂದ 21ರವರೆಗೆ ಎರಡು ಹಂತದಲ್ಲಿ ನಡೆಯಲಿದೆ. ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಜಂಟಿ ಸದನ ಉದ್ದೇಶಿಸಿ ಅಧಿವೇಶನದ ಮೊದಲ ದಿನ ಮಾತನಾಡಲಿದ್ದಾರೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ಮಾಹಿತಿ ನೀಡಿದ್ದಾರೆ.

ರಾಜ್ಯಪಾಲರ ಭಾಷಣದ ಮೇಲೆ ಚರ್ಚಿಸಲು ಮೂರು ದಿನಗಳ ಕಾಲಾವಕಾಶವಿದೆ. ಮಾರ್ಚ್.‌7ರಂದು ಸಿಎಂ ಸಿದ್ದರಾಮಯ್ಯ ಬಜೆಟ್‌ ಮಂಡಿಸಲಿದ್ದು, ಅಧಿವೇಶನದ ರೂಪುರೇಷೆ ಸಿದ್ಧವಾಗುತ್ತಿದೆ ಎಂದು ತಿಳಿಸಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹಾಗೂ ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಅವರಿಗೆ ಸಂಬಂಧಿಸಿದ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡುವುದಿಲ್ಲ. ಪ್ರಕರಣವು ವಿಧಾನಪರಿಷತ್‌ ಸ್ಪೀಕರ್‌ ಬಸವರಾಜ ಹೊರಟ್ಟಿ ಅವರ ವ್ಯಾಪ್ತಿಗೆ ಬರುತ್ತದೆ ಎಂದರು.

ಇನ್ನು ಮೈಸೂರಿನ ಉದಯಗಿರಿಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವರು ಕ್ರಮ ಕೈಗೊಂಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ವದಂತಿ ಹರಡುವ ಕೆಲಸವನ್ನು ಯಾರೊಬ್ಬರೂ ಮಾಡಬಾರದು ಎಂದು ಹೇಳಿದರು.

Tags:
error: Content is protected !!