ದಾವಣಗೆರೆ: ವಿಧಾನಸಭೆಯ ಬಜೆಟ್ ಅಧಿವೇಶ ಮಾರ್ಚ್.3ರಿಂದ 21ರವರೆಗೆ ಎರಡು ಹಂತದಲ್ಲಿ ನಡೆಯಲಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಜಂಟಿ ಸದನ ಉದ್ದೇಶಿಸಿ ಅಧಿವೇಶನದ ಮೊದಲ ದಿನ ಮಾತನಾಡಲಿದ್ದಾರೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಮಾಹಿತಿ ನೀಡಿದ್ದಾರೆ.
ರಾಜ್ಯಪಾಲರ ಭಾಷಣದ ಮೇಲೆ ಚರ್ಚಿಸಲು ಮೂರು ದಿನಗಳ ಕಾಲಾವಕಾಶವಿದೆ. ಮಾರ್ಚ್.7ರಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದು, ಅಧಿವೇಶನದ ರೂಪುರೇಷೆ ಸಿದ್ಧವಾಗುತ್ತಿದೆ ಎಂದು ತಿಳಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರಿಗೆ ಸಂಬಂಧಿಸಿದ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡುವುದಿಲ್ಲ. ಪ್ರಕರಣವು ವಿಧಾನಪರಿಷತ್ ಸ್ಪೀಕರ್ ಬಸವರಾಜ ಹೊರಟ್ಟಿ ಅವರ ವ್ಯಾಪ್ತಿಗೆ ಬರುತ್ತದೆ ಎಂದರು.
ಇನ್ನು ಮೈಸೂರಿನ ಉದಯಗಿರಿಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವರು ಕ್ರಮ ಕೈಗೊಂಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ವದಂತಿ ಹರಡುವ ಕೆಲಸವನ್ನು ಯಾರೊಬ್ಬರೂ ಮಾಡಬಾರದು ಎಂದು ಹೇಳಿದರು.
ಬೆಂಗಳೂರು: ಒಳ್ಳೆತನದಲ್ಲಿ ಅಪ್ಪು ಸರ್ ಯಾವಾಗಲೂ ಜೀವಂತವಾಗಿರುತ್ತಾರೆ ಎಂದು ನಿರೂಪಕಿ ಅನುಶ್ರೀ, ಪುನೀತ್ ರಾಜ್‌ಕುಮಾರ್ ಅವರ 50ನೇ ಹುಟ್ಟುಹಬ್ಬದ ದಿನದಂದು…
ಗೋಣಿಕೊಪ್ಪಲು : ತೋಟದ ಕೆರೆಯಲ್ಲಿ ಆಕಸ್ಮಿಕವಾಗಿ ಬಿದ್ದ ಬಾಲಕಿಯೊಬ್ಬಳು ಮೇಲಕ್ಕೆ ಬರಲಾಗದೇ ಉಸಿರು ಚೆಲ್ಲಿರುವ ಧಾರುಣ ಘಟನೆ ಇಲ್ಲಿನ ಸಮೀಪದ…
ಬೆಂಗಳೂರು: ಕೇಂದ್ರ ಸರ್ಕಾರ ಈ ಬಾರಿಯ ಬಜೆಟ್‌ನಲ್ಲಿ ಅನುದಾನ ಹಂಚಿಕೆ ಮಾಡಿಲ್ಲ, ಬದಲಿಗೆ ಕರ್ನಾಟಕ ರಾಜ್ಯಕ್ಕೆ ತಾರತಮ್ಯ ಧೋರಣೆ ತೋರುತ್ತಿದೆ…
ಚೆನ್ನೈ: ಸರ್ಕಾರಿ ಸ್ವಾಮ್ಯದ ಮದ್ಯ ಮಾರಾಟ ಮಳಿಗೆ ಟಿಎಎಸ್‌ಎಂಸಿ ನಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಪ್ರತಿಭಟನೆ ಆಯೋಜಿಸಿದ್ದ ತಮಿಳುನಾಡು…
ಬೆಂಗಳೂರು: ಇಂದು ನಟ ದಿವಂಗತ ಪುನೀತ್ ರಾಜ್‌ಕುಮಾರ್ ಅವರ 50ನೇ ವರ್ಷದ ಜನ್ಮದಿನ ಹಿನ್ನಲೆಯಲ್ಲಿ ಕಂಠೀರವ ಸ್ಟುಡಿಯೋದಲ್ಲಿನ ಅಪ್ಪು ಸಮಾಧಿಗೆ…
‘ಆಂದೋಲನ’ ಸಂದರ್ಶನದಲ್ಲಿ ಯೋಗರಾಜ್ ಭಟ್ ಮನದ ಮಾತು ಚಿರಂಜೀವಿ ಸಿ. ಹುಲ್ಲಹಳ್ಳಿ ಮೈಸೂರು: ಕನ್ನಡ ಸಿನಿ ಪ್ರೇಕ್ಷಕರನ್ನು ‘ಮುಂಗಾರು ಮಳೆ’ಯಲ್ಲಿ…