ರಾಜ್ಯ

ಬಜೆಟ್‌ | ನಂಜನಗೂಡಿನ ತಗಡೂರು ಆಸ್ಪತ್ರೆ ಮೇಲ್ದರ್ಜೆಗೆ

ಬೆಂಗಳೂರು:  ರಾಜ್ಯದಲ್ಲಿ ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿ ದೃಷ್ಟಿಯಿಂದ ೨೦೨೫-೨೬ನೇ ಸಾಲಿನ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರು  ಈ ಕೆಳಕಂಡ ಯೋಜನೆಗಳನ್ನು ಘೋಷಿಸಿದ್ದಾರೆ.

  • ರಾಜ್ಯದಲ್ಲಿ 50 ಹಾಸಿಗೆ ಸಾಮರ್ಥ್ಯದ 14 Critical Care Block ಗಳು ಹಾಗೂ ಬೆಂಗಳೂರು ನಗರದಲ್ಲಿ 100 ಹಾಸಿಗೆ ಸಾಮರ್ಥ್ಯದ ಒಂದು Critical Care Block ಕಟ್ಟಡವನ್ನು ನಿರ್ಮಾಣ ಮಾಡಲಾಗಿದೆ.
  • ಅಥಣಿ, ಹುನಗುಂದ ಮತ್ತು ಮುಧೋಳದಲ್ಲಿ 50 ಹಾಸಿಗೆ ಸಾಮರ್ಥ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳನ್ನು ಸ್ಥಾಪನೆ ಮಾಡಲು ಅನುಮೋದನೆ ನೀಡಲಾಗಿದೆ.
  • ಆಶಾಕಿರಣ ರಾಷ್ಟ್ರೀಯ ಅಂಧತ್ವ ನಿವಾರಣಾ ಕಾರ್ಯಕ್ರಮದಡಿ 1.4 ಕೋಟಿ ಜನರಿಗೆ ಕಣ್ಣಿನ ತಪಾಸಣೆ; 3.3 ಲಕ್ಷ ಜನರಿಗೆ ಉಚಿತ ಕನ್ನಡಕ ವಿತರಣೆ ಮತ್ತು 93,800 ಜನರಿಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಕೈಗೊಳ್ಳಲಾಗಿದೆ.
  • ನರವೈಜ್ಞಾನಿಕ ಖಾಯಿಲೆಗಳಿಗೆ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮದಡಿ (KaBHI) ನಿಮ್ಹಾನ್ಸ್‌ ಸಹಯೋಗದೊಂದಿಗೆ ಒಟ್ಟು 2.61 ಲಕ್ಷ ತಪಾಸಣೆ ಮಾಡಿ 32,630 ನರರೋಗಿಗಳಿಗೆ ಚಿಕಿತ್ಸೆ ನೀಡಲಾಗಿದೆ. ಈ ಯೋಜನೆಯನ್ನು ಈ ವರ್ಷ ಎಲ್ಲಾ ಹಂತದ ಆರೋಗ್ಯ ಕೇಂದ್ರಗಳಿಗೆ ವಿಸ್ತರಿಸಲು 20 ಕೋಟಿ ರೂ. ಒದಗಿಸಲಾಗಿದೆ. ಅಲ್ಲದೇ, ಮಾನಸಿಕ ಅಸ್ವಸ್ಥರ ಆರೈಕೆಗೆ ಜಿಲ್ಲಾ ಮಟ್ಟದ ಆಸ್ಪತ್ರೆಗಳಲ್ಲಿ ಸರ್ಕಾರೇತರ ಸಂಸ್ಥೆಗಳ ಸಹಯೋಗದೊಂದಿಗೆ ಆರೈಕೆ ಕೇಂದ್ರಗಳನ್ನು ಸ್ಥಾಪಿಸಲಾಗುವುದು.
  • 2025-26 ನೇ ಸಾಲಿನಲ್ಲಿ ಈ ಕೆಳಗಿನಂತೆ ಆರೋಗ್ಯ ಮೂಲ ಸೌಕರ್ಯ ಅಭಿವೃದ್ಧಿ ಕಾರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು:
    i) ಬೆಂಗಳೂರು ಉತ್ತರ ತಾಲ್ಲೂಕಿನ ವ್ಯಾಪ್ತಿಯಲ್ಲಿ 200 ಹಾಸಿಗೆಯ ಅತ್ಯಾಧುನಿಕ ಮತ್ತು ಸುಸಜ್ಜಿತ ಆಸ್ಪತ್ರೆಯನ್ನು 150 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು.‌
    ii) ಹೊಸದಾಗಿ ಘೋಷಣೆಯಾಗಿರುವ ತಾಲ್ಲೂಕುಗಳಾದ ಹನೂರು, ಅಳ್ನಾವರ, ಅಣ್ಣಿಗೇರಿ, ಮಸ್ಕಿ, ಸಿರಿವಾರ, ಕಾಪು, ಬಬಲೇಶ್ವರ, ಕೊಲ್ಹಾರ, ಚೇಳೂರು, ತೇರದಾಳದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ
    ಆರೋಗ್ಯ ಕೇಂದ್ರಗಳಾಗಿ ಉನ್ನತೀಕರಿಸಲಾಗುವುದು. ಪೊನ್ನಂಪೇಟೆಯಲ್ಲಿ ಹೊಸದಾಗಿ ಸಮುದಾಯ ಆರೋಗ್ಯ ಕೇಂದ್ರವನ್ನು ಆರಂಭಿಸಲಾಗುವುದು.
    iii) ಮಾಲೂರು, ಮಾಗಡಿ, ಕುಶಾಲನಗರ, ಕೊರಟಗೆರೆ, ಜಗಳೂರು, ಸವಣೂರು, ರಾಮದುರ್ಗ ಮತ್ತು ಸವದತ್ತಿ ತಾಲ್ಲೂಕು ಮಟ್ಟದ ಆಸ್ಪತ್ರೆಗಳನ್ನು ಹಾಗೂ ದಾವಣಗೆರೆ ಜಿಲ್ಲಾ ಆಸ್ಪತ್ರೆ ಮತ್ತು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗಳನ್ನು ಒಟ್ಟು 650 ಕೋಟಿ ರೂ. ವೆಚ್ಚದಲ್ಲಿ ನವೀಕರಣ ಮಾಡಲಾಗುವುದು.
    iv) ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಈಗಿರುವ 100 ಹಾಸಿಗೆ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆಯನ್ನು ಉನ್ನತೀಕರಿಸಲು ಪ್ರಸಕ್ತ ವರ್ಷದಲ್ಲಿ ಕ್ರಮವಹಿಸಲಾಗುವುದು.
    v) ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನಲ್ಲಿ 200 ಹಾಸಿಗೆ ಹಾಗೂ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ 400 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದು.
    vi) ಮೈಸೂರು ಜಿಲ್ಲೆಯ ತಗಡೂರು ಸಮುದಾಯ ಆರೋಗ್ಯ ಕೇಂದ್ರವನ್ನು 100 ಹಾಸಿಗೆ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲಾಗುವುದು.
    vii) ಹೆಚ್ಚಿನ ದುರಸ್ತಿ ಅಗತ್ಯವಿರುವ ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳನ್ನು 183 ಕೋಟಿ ರೂ. ವೆಚ್ಚದಲ್ಲಿ ಹಂತ ಹಂತವಾಗಿ ದುರಸ್ತಿಗೊಳಿಸಲಾಗುವುದು.
ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದ್ವಿತೀಯ ಪಿಯುಸಿ ಫಲಿತಾಂಶ: ಇದೊಂದು ಐತಿಹಾಸಿಕ ದಿನ ಎಂದ ಮಧು ಬಂಗಾರಪ್ಪ

ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…

8 hours ago

ಎರಡು ಕ್ಷೇತ್ರಗಳ ಉಪಚುನಾವಣೆ ಮತದಾನ ಮುಕ್ತಾಯ: ವೋಟಿಂಗ್‌ ಪ್ರಮಾಣವೆಷ್ಟು.?

ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…

8 hours ago

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಹೈಕೋರ್ಟ್‌…

9 hours ago

ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಬಿಸಿ ಗಾಳಿ ಎಚ್ಚರಿಕೆ

ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…

9 hours ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆದ್ದರೆ ಆರು ಗ್ಯಾರಂಟಿ ಜಾರಿ: ಪ್ರಧಾನಿ ನರೇಂದ್ರ ಮೋದಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…

9 hours ago

ಭಾರತ ತಲುಪಿದ ಗ್ರೀನ್‌ ಆಶಾ: 15,000 ಟನ್‌ ಎಲ್‌ಪಿಜಿ ಹೊತ್ತು ತಂದ ನೌಕೆ

ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್‌ ಎಲ್‌ಪಿಜಿ ಹೊತ್ತ ಟ್ಯಾಂಕರ್‌ ಹಾರ್ಮುಜ್‌ ಜಲಸಂಧಿಯನ್ನು…

9 hours ago