ಬೆಂಗಳೂರು: ಈ ಬಾರಿಯ ಬಜೆಟ್ ಬಡವರ ಹಾಗೂ ಶ್ರಮಿಕರ ಪರವಾಗಿದೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಬಣ್ಣಿಸಿದ್ದಾರೆ.
ಸಿಎಂ ಸಿದ್ದರಾಮಯ್ಯನವರು ಇಂದು ತಮ್ಮ ದಾಖಲೆಯ 16ನೇ ಬಜೆಟ್ ಮಂಡಿಸಿದ್ದು, ಬಡವರ ಸರ್ವತೋಮುಖ ಅಭಿವೃದ್ದಿಗೆ ಒತ್ತು ನೀಡಲಾಗಿದೆ. ಬಸವಣ್ಣನವರ ತತ್ವ ಆದರ್ಶಗಳು, ಗಾಂಧೀಜಿ ಕಂಡ ಕನಸುಗಳನ್ನು ಈಡೇರಿಸುವ ಐತಿಹಾಸಿಕ ಬಜೆಟ್ ಇದಾಗಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ದೇವರು ಆರೋಗ್ಯ ಭಾಗ್ಯ ಕರುಣಿಸಲಿ ಎಂದರು.
ಅನ್ನಭಾಗ್ಯ ಯೋಜನೆಯಡಿ ಈಗ 10ಕೆಜಿ ಅಕ್ಕಿಯನ್ನು ನೀಡಲಾಗುತ್ತಿದ್ದು, ಇದರಿಂದ 4.21 ಕೋಟಿ ಫಲಾನುಭವಿಗಳಿಗೆ ಹೆಚ್ಚುವರಿ ಅಕ್ಕಿ ಲಭ್ಯವಾಗಲಿದೆ ಎಂದು ಹೇಳಿದರು.
80ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ, ಆಹಾರ ಧಾನ್ಯ ಮನೆಗೆ ತಲುಪಿಸಲು ಇರುವ
ಅನ್ನ-ಸುವಿಧಾ ಯೋಜನೆಯನ್ನು 75 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೂ ವಿಸ್ತರಿಸಲಾಗುವುದು. ಇದರಿಂದ 3.30 ಲಕ್ಷ ಅನುಭವಿಗಳಿಗೆ ಅನುಕೂಲವಾಗಲಿದೆ.
ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಸಮರ್ಪಕವಾಗಿ ಸುಧಾರಿಸಲು ಗರಿಷ್ಠ ಬಳಕೆ ತಂತ್ರಜ್ಞಾನ ಮಾಡಲಾಗುವುದು. ಗೋಧಾಮುಗಳಿಗೆ ಸಿಸಿಟಿವಿ ಅಳವಡಿಕೆ, ಎಲೆಕ್ಟ್ರಾನಿಕ್ ತೂಕದ ಯಂತ್ರ ಮತ್ತು ಪಾಯಿಂಟ್ ಆಫ್ ಸೇಲ್ ಸಿಸ್ಟಮ್‌ಗಳನ್ನು ಸ್ಥಾಪಿಸಲಾಗುವುದು ಎಂದರು.
ಅನ್ನಭಾಗ್ಯ ಯೋಜನೆಯ ಸಗಟು ಲಾಭಾಂಶ ಪ್ರತಿ ಕ್ವಿಂಟಾಲ್ 35 ರೂ.ಗಳಿಂದ 45 ರೂ.ಗಳಿಗೆ ಹೆಚ್ಚಳ ಮಾಡಲಾಗಿದೆ.





