ರಾಜ್ಯ

ಬಡವರ ಹಾಗೂ ಶ್ರಮಿಕರ ಪರವಾದ ಬಜೆಟ್‌: ಕೆ.ಹೆಚ್‌. ಮುನಿಯಪ್ಪ

ಬೆಂಗಳೂರು: ಈ ಬಾರಿಯ ಬಜೆಟ್‌ ಬಡವರ ಹಾಗೂ ಶ್ರಮಿಕರ ಪರವಾಗಿದೆ ಎಂದು ಆಹಾರ ಸಚಿವ ಕೆ.ಹೆಚ್‌.ಮುನಿಯಪ್ಪ ಬಣ್ಣಿಸಿದ್ದಾರೆ.

ಸಿಎಂ ಸಿದ್ದರಾಮಯ್ಯನವರು ಇಂದು ತಮ್ಮ ದಾಖಲೆಯ 16ನೇ ಬಜೆಟ್‌ ಮಂಡಿಸಿದ್ದು, ಬಡವರ ಸರ್ವತೋಮುಖ ಅಭಿವೃದ್ದಿಗೆ ಒತ್ತು ನೀಡಲಾಗಿದೆ. ಬಸವಣ್ಣನವರ ತತ್ವ ಆದರ್ಶಗಳು, ಗಾಂಧೀಜಿ ಕಂಡ ಕನಸುಗಳನ್ನು ಈಡೇರಿಸುವ ಐತಿಹಾಸಿಕ ಬಜೆಟ್‌ ಇದಾಗಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ದೇವರು ಆರೋಗ್ಯ ಭಾಗ್ಯ ಕರುಣಿಸಲಿ ಎಂದರು.

ಅನ್ನಭಾಗ್ಯ ಯೋಜನೆಯಡಿ ಈಗ 10ಕೆಜಿ ಅಕ್ಕಿಯನ್ನು ನೀಡಲಾಗುತ್ತಿದ್ದು, ಇದರಿಂದ 4.21 ಕೋಟಿ ಫಲಾನುಭವಿಗಳಿಗೆ ಹೆಚ್ಚುವರಿ ಅಕ್ಕಿ ಲಭ್ಯವಾಗಲಿದೆ ಎಂದು ಹೇಳಿದರು.

80ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ, ಆಹಾರ ಧಾನ್ಯ ಮನೆಗೆ ತಲುಪಿಸಲು ಇರುವ
ಅನ್ನ-ಸುವಿಧಾ ಯೋಜನೆಯನ್ನು 75 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೂ ವಿಸ್ತರಿಸಲಾಗುವುದು. ಇದರಿಂದ 3.30 ಲಕ್ಷ ಅನುಭವಿಗಳಿಗೆ ಅನುಕೂಲವಾಗಲಿದೆ.

ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಸಮರ್ಪಕವಾಗಿ ಸುಧಾರಿಸಲು ಗರಿಷ್ಠ ಬಳಕೆ ತಂತ್ರಜ್ಞಾನ ಮಾಡಲಾಗುವುದು. ಗೋಧಾಮುಗಳಿಗೆ ಸಿಸಿಟಿವಿ ಅಳವಡಿಕೆ, ಎಲೆಕ್ಟ್ರಾನಿಕ್‌ ತೂಕದ ಯಂತ್ರ ಮತ್ತು ಪಾಯಿಂಟ್‌ ಆಫ್‌ ಸೇಲ್‌ ಸಿಸ್ಟಮ್‌ಗಳನ್ನು ಸ್ಥಾಪಿಸಲಾಗುವುದು ಎಂದರು.

ಅನ್ನಭಾಗ್ಯ ಯೋಜನೆಯ ಸಗಟು ಲಾಭಾಂಶ ಪ್ರತಿ ಕ್ವಿಂಟಾಲ್‌ 35 ರೂ.ಗಳಿಂದ 45 ರೂ.ಗಳಿಗೆ ಹೆಚ್ಚಳ ಮಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

9 hours ago

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

21 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

22 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

22 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

22 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

22 hours ago