ರಾಜ್ಯ

ಕೋಟೆ ಕಟ್ಕೊಂಡು ಡ್ರಾಮ ಮಾಡ್ತಾವ್ರೆ : ಜನಾರ್ಧನ ರೆಡ್ಡಿ ಬಗ್ಗೆ ಡಿಕೆಶಿ ರೋಷಾಗ್ನಿ

ಬೆಂಗಳೂರು : ಬಳ್ಳಾರಿ ಘಟನೆಯಲ್ಲಿ ಕಾಂಗ್ರೆಸ್ ಪಕ್ಷ ಶಾಸಕ ನ.ರಾ.ಭರತ್ ರೆಡ್ಡಿ ಪರವಾಗಿ ನಿಲ್ಲಲಿದೆ. ಚುನಾವಣೆಗಳ ಸೋಲಿನಿಂದ ಹತಾಶೆಗೊಂಡಿರುವ ಶಾಸಕ ಜನಾರ್ದನ ರೆಡ್ಡಿ ಮತ್ತೆ ರಿಪಬ್ಲಿಕ್ ಬಳ್ಳಾರಿ ಮಾಡಲು ಯತ್ನಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.

ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರಿಗೆ ಸೋಲನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಸೋಲಿನ ಬಳಿಕ ಜನಾರ್ದನ ರೆಡ್ಡಿ ಮತ್ತು ಶ್ರಿ?ರಾಮುಲು ಒಬ್ಬರನ್ನೊಬ್ಬರು ತಬ್ಬಿಕೊಂಡು ಓಡಾಡುತ್ತಿದ್ದಾರೆ. ಅದು ಅವರ ಇಷ್ಟ ನಮಗೇನು ತೊಂದರೆ ಇಲ್ಲ. ಆದರೆ ಬಳ್ಳಾರಿಯನ್ನು ಮತ್ತೆ ರಿಪಬ್ಲಿಕ್ ಮಾಡಲು ನಾವು ಅವಕಾಶ ನೀಡುವುದಿಲ್ಲ. ನಮ ಶಾಸಕರು ಹಾಗೂ ಕಾರ್ಯಕರ್ತರನ್ನು ನಿಯಂತ್ರಣದಲ್ಲಿ ಇಡಲು ಮುಖ್ಯಮಂತ್ರಿಯವರು ಈಗಾಗಲೇ ಎಲ್ಲಾ ಸೂಚನೆಗಳನ್ನು ನೀಡಿದ್ದಾರೆ ಎಂದರು.

ಜನಾರ್ದನ ರೆಡ್ಡಿ ಬಳ್ಳಾರಿಯಲ್ಲಿ ಇಲ್ಲದೆ ಇರುವಾಗ ಯಾವ ಗಲಾಟೆಗಳು ಇರಲಿಲ್ಲ. ಒಂದು ಎಫ್‍ಐಆರ್ ಕೂಡ ದಾಖಲಾಗಿರಲಿಲ್ಲ. ಅವರು ಬಳ್ಳಾರಿಗೆ ಬಂದ ಮೇಲೆ ಪರಿಸ್ಥಿತಿ ಹದಗೆಡುತ್ತಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಪಕ್ಷ ಶಾಸಕ ಭರತ್ ರೆಡ್ಡಿ ಅವರ ಜೊತೆಯಾಗಿದೆ. ಶಾಂತಿ ಪಾಲನೆಗಾಗಿ ಅವರು ಸ್ಥಳಕ್ಕೆ ಹೋಗಿದ್ದರು. ಗುಂಡು ಹಾರಿಸಿದ್ದು ಯಾರು ಎಂದು ತನಿಖೆಯಿಂದ ತಿಳಿದು ಬರಲಿದೆ ಎಂದರು.

ಖಾಸಗಿ ವ್ಯಕ್ತಿಗಳ ಬಂದೂಕುಗಳಿಗೆ ಕಡಿವಾಣ
ಖಾಸಗಿ ವ್ಯಕ್ತಿಗಳ ಬಂದೂಕುಗಳನ್ನು ಜಪ್ತಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಖಾಸಗಿ ವ್ಯಕ್ತಿಗಳ ಭದ್ರತೆಗೆ ಬಂದೂಕು ಒದಗಿಸುವ ಬಗ್ಗೆ ಕಠಿಣ ನಿಯಮಗಳನ್ನು ರೂಪಿಸಲಾಗುವುದು. ಖಾಸಗಿ ಬಂದೂಕಿನಿಂದ ಗುಂಡು ಸಿಡಿದು ಜೀವ ಹಾನಿಯಾಗಿರುವ ಪ್ರಕರಣದಲ್ಲಿ ಇದು ಎರಡನೇ ದುರ್ಘಟನೆ. ಮುಂದಿನ ದಿನಗಳಲ್ಲಿ ಖಾಸಗಿ ವ್ಯಕ್ತಿಗಳ ಬಂದೂಕುಗಳ ದುರುಪಯೋಗಕ್ಕೆ ಕಡಿವಾಣ ಹಾಕಲಾಗುವುದು ಎಂದು ಹೇಳಿದರು.

ಎಸ್‌ಪಿ ಯಾವ ಶೈಲಿಯಲ್ಲಿ ಉತ್ತರ ನೀಡಿದ್ದಾರೆ ಗೊತ್ತಿದೆ
ಗಲಾಟೆಯಾದಾಗ ಸ್ಥಳದಲ್ಲಿ ಶಾಸಕ ಭರತ್ ರೆಡ್ಡಿ ಇರಲಿಲ್ಲ. ಮನೆ ಮುಂದೆ ಪೊಸ್ಟರ್ ಹಾಕಬಾರದು ಎಂದು ಗಲಾಟೆ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದ ಅವರು, ಕಾನೂನು ತನ್ನದೇ ಆದ ಕ್ರಮಗಳ ಕೈಗೊಳ್ಳುತ್ತದೆ. ಗಲಾಟೆಯಾದ ತಕ್ಷಣ ನಾನೇ ಖುದ್ದಾಗಿ ನನ್ನ ಫೋನ್ ಮೂಲಕ ಅಲ್ಲಿನ ಎಸ್ಪಿ ಅವರಿಗೆ ಮಾತನಾಡಿದ್ದೇನೆ. ಆತ ಯಾವ ಶೈಲಿಯಲ್ಲಿ ಉತ್ತರ ನೀಡಿದ್ದಾನೆ ಎಂದು ಗೊತ್ತಿದೆ. ಆ ಸಂದರ್ಭದಲ್ಲಿ ಶ್ರೀರಾಮುಲು ಕೂಡ ನನಗೆ ಕರೆ ಮಾಡಿದ್ದರು. ಪಕ್ಷ ಯಾವುದೇ ಇದ್ದರೂ ಕಾನೂನು ವ್ಯವಸ್ಥೆ ಮುಖ್ಯ ಎಂದು ತಕ್ಷಣವೇ ಪೊಲೀಸರಿಗೆ ಕರೆ ಮಾಡಿದ್ದೆ. ನಮ ಪಕ್ಷದ ಶಾಸಕ ಭರತ್ ರೆಡ್ಡಿಗೂ ಕೂಡ ಮಾತನಾಡಿದ್ದಾಗಿ ಹೇಳಿದರು.

ಆತ ಡ್ರಾಮಾ ಮಾಸ್ಟರ್
ಜನಾರ್ದನ ರೆಡ್ಡಿ ಡ್ರಾಮಾ ಮಾಸ್ಟರ್, ಸಿನಿಮಾ ನಿರ್ಮಾಪಕ. ನೂರು ಜನ ಭದ್ರತಾ ಸಿಬ್ಬಂದಿಗಳನ್ನು ಇಟ್ಟುಕೊಂಡು, ಕೋಟೆ ಕಟ್ಟಿಕೊಂಡಿರುವ ಅವರನ್ನು ಕೊಲ್ಲಲು ಯಾರು ಹೋಗುತ್ತಾರೆ. ಕುಟುಂಬದವರ ವಿಧಾನಸಭೆ ಸೋಲನ್ನು ಆರಗಿಸಿಕೊಳ್ಳಲಾಗುತ್ತಿಲ್ಲ. ಅದಕ್ಕಾಗಿ ಭರತರೆಡ್ಡಿ ವಿರುದ್ಧ ಕೊಲೆ ಯತ್ನದ ಆರೋಪ ಮಾಡುತ್ತಿದ್ದಾರೆ. ಕೊಲೆಗಳ ಇತಿಹಾಸ ಯಾರಿಗಿದೆ ಎಂದು ಜನ ಅರ್ಥಮಾಡಿಕೊಳ್ಳುತ್ತಾರೆ ಎಂದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪುರುಷರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ; ಪುರುಷರ ಹಿತರಕ್ಷಣಾ ಸಮಿತಿ ಅಸ್ತಿತ್ವಕ್ಕೆ

ಮಂಡ್ಯ : ಆಧುನಿಕ ಜಗತ್ತಿನಲ್ಲಿ ಪುರುಷರ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಗೆ ಹತ್ತಿಕ್ಕಲು ರಾಜ್ಯ ಮಾನವ ಹಕ್ಕುಗಳ ಪುರುಷರ ಹಿತರಕ್ಷಣಾ…

29 mins ago

ಸಂವಿಧಾನದಿಂದಲೇ ನಾನಿಂದು ಮುಖ್ಯಮಂತ್ರಿ ಆಗಿದ್ದೇನೆ : ಸಿದ್ದರಾಮಯ್ಯ

ಬೆಂಗಳೂರು : ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಶಕ್ತಿಯಿಂದಲೇ ನಾನಿಂದು ಮುಖ್ಯಮಂತ್ರಿಯಾಗಿ ಜನಸೇವೆ ಸಲ್ಲಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ…

43 mins ago

ಐಪಿಎಲ್‌ ಪಂದ್ಯ : ಏಪ್ರಿಲ್‌ 15, 24ರಂದು ಮೆಟ್ರೋ ಸಂಚಾರ ಅವಧಿ ವಿಸ್ತರಣೆ

ಬೆಂಗಳೂರು : ಟಾಟಾ ಐಪಿಎಲ್‌ನ ಕ್ರಿಕೆಟ್‌ ಪಂದ್ಯಗಳು ಏಪ್ರಿಲ್ ‌15 ಹಾಗೂ ಏಪ್ರಿಲ್ ‌24ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.…

52 mins ago

ನಿತೀಶ್ ಕುಮಾರ್ ರಾಜೀನಾಮೆ; ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಆಯ್ಕೆ

ಪಾಟ್ನಾ : ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ಪದವಿಗೆ ರಾಜೀನಾಮೆ ನೀಡಿದ್ದಾರೆ. ಅದರ ಬೆನ್ನಲ್ಲೇ ಬಿಹಾರದ ಹೊಸ…

1 hour ago

ಟಿಪ್ಪರ್-ಕಾರು ನಡುವೆ ಅಪಘಾತ : ತಾಯಿ ಮಗಳು ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ : ಕೇರಳ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಪ್ಪರ್‌ಗೆ ಕಾರುವೊಂದು ಡಿಕ್ಕಿ ಹೊಡೆದು ತಾಯಿ-ಮಗಳು ಸ್ಥಳದಲ್ಲೇ ಮೃತಪಟ್ಟ ದುರಂತ ಘಟನೆ ಮಂಗಳವಾರ…

1 hour ago

ಸಿಎಂ ರಾಜಕೀಯ ಕಾರ್ಯದರ್ಶಿ ವಜಾ : ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದೇನು?

ಬೆಳಗಾವಿ : ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಜೀರ್‌ ಅಹಮ್ಮದ್‌ ಬಿಡುಗಡೆಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್‌ ಜಾರಕಿಹೊಳಿ ಪ್ರತಿಕ್ರಿಯೆ…

2 hours ago