ಬೆಂಗಳೂರು: ನಗರದ ಬಾಬುಸಾಬ್‌ಪಾಳ್ಯದಲ್ಲಿ ಕಟ್ಟಡ ಕುಸಿದ ಘಟನಾ ಸ್ಥಳಕ್ಕೆ ಬುಧವಾರ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್ ಪಾಟೀಲ್ ಹಾಗೂ ಉಪಲೋಕಾಯುಕ್ತರಾದ ನ್ಯಾ.ಕೆ.ಎನ್.ಫಣೀಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ವೇಳೆ ಸ್ಥಳದಲ್ಲೇ ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್ ಪಾಟೀಲ್ ಅವರು ಬಿಬಿಎಂಪಿ ವಲಯ ಆಯುಕ್ತ ರಮೇಶ್ ಹಾಗೂ ಎಇ ರಮೇಶ್‌ಗೆ ತರಾಟೆ ತೆಗೆದುಕೊಂಡಿದ್ದಾರೆ.
ಬಿ ಖಾತಾ ಸೈಟ್‌ನಲ್ಲಿ ಕಟ್ಟಡ ನಿರ್ಮಿಸುತ್ತಿದ್ದರೂ ಏಕೆ ಕ್ರಮ ಕೈಗೊಂಡಿಲ್ಲ. ಬೆಂಗಳೂರಿನಲ್ಲಿ ಇನ್ನೂ ಈ ರೀತಿಯ ಕಟ್ಟಡಗಳು ಎಷ್ಟು ನಿರ್ಮಿಸಲಾಗುತ್ತಿದೆ. ನೀವು ಏನು ಕೆಲಸ ಮಾಡುತ್ತೀದ್ದೀರಿ ಎಂದು ಪ್ರಶ್ನಿಸಿದ್ದಾರೆ. ಈ ಪ್ರಶ್ನೆಗಳಿಗೆ ಬಿಬಿಎಂಪಿ ಅಧಿಕಾರಿಗಳು ತಬ್ಬಿಬ್ಬಾಗಿದ್ದಾರೆ.
ಕರ್ತವ್ಯ ಲೋಪ: ಎಇಇ ಕೆ.ವಿನಯ್ ಅಮಾನತು
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಹಿನ್ನೆಲೆಯಲ್ಲಿ ಬಿಬಿಎಂಪಿ ಹೊರಮಾವು ಉಪವಿಭಾಗದ ಎಇಇ ಕೆ.ವಿನಯ್ ಅವರನ್ನು ಅಮಾನತುಗೊಳಿಸಿ ಬಿಬಿಎಂಪಿ ಮುಖ್ಯ ಆಯುಕ್ತರಿಂದ ಆದೇಶ ಹೊರಡಿಸಲಾಗಿದೆ.
ಸುದೀಪ್ ಅಭಿನಯದ ‘ಮ್ಯಾಕ್ಸ್’ ಚಿತ್ರವು ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಬುಧವಾರ ಬಿಡುಗಡೆಯಾಗಿದೆ. ಚಿತ್ರಕ್ಕೆ ಭರ್ಜರಿ ಓಪನಿಂಗ್ ಸಿಕ್ಕಿರುವುದಷ್ಟೇ ಅಲ್ಲ, ಚಿತ್ರದ…
ನವದೆಹಲಿ: ಮಾಜಿ ಪಿಎಂ ಮನಮೋಹನ್ ಸಿಂಗ್ ನಿಧನರಾದ ಹಿನ್ನೆಲೆಯಲ್ಲಿ ಅವರ ಸ್ಮಾರಕವನ್ನು ನಿರ್ಮಿಸುವಂತೆ ಎಐಸಿಸಿ ಅಧ್ಯಕ್ಷ ಪತ್ರದ ಮೂಲಕ ಕೋರಿದ್ದರು.…
ಮೈಸೂರು: ನಗರದ ಪಿಕೆಟಿಬಿ ರಸ್ತೆಗೆ ಸಿಎಂ ಸಿದ್ದರಾಮಯ್ಯ ಅವರ ಹೆಸರಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಪರ-ವಿರೋಧಗಳು ವ್ಯಕ್ತವಾಗುತ್ತಿದ್ದು, ಇದೀಗ ಸಿಎಂ ಪರ…
ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನರಾಗಿದ್ದು, ಇಂದು ದೆಹಲಿಯ ನಿಗಮ್‌ಬೋಧ್ ಘಾಟ್‌ನಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ಇದರೊಂದಿಗೆ ಭಾರತ…
ಮೈಸೂರು: ಜೀವವಿಮೆ ಹಣ ಪಡೆಯಲು ಅಪ್ಪನನ್ನೇ ಮಗ ಕೊಂದಿರುವ ಘಟನೆ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದ ಬಳಿಯಿರುವ ಡೋಂಗ್ರಿ…
ಹೊಸದಿಲ್ಲಿ: ಉಸಿರಾಟದ ತೊಂದರೆಯಿಂದ ಗುರುವಾರ ರಾತ್ರಿ ನಿಧನರಾದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಇಂದು ದೆಹಲಿಯ ನಿಗಮ್…