ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಇದೇ ಮೊದಲ ಬಾರಿಗೆ ಕರ್ನಾಟಕದ ಐವರಿಗೆ ಸಚಿವ ಸ್ಥಾನ ಸಿಕ್ಕಿದೆ. ಅದರಲ್ಲಿ ಮೂವರಿಗೆ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ಸಿಕ್ಕರೆ, ಇನ್ನುಳಿದ ಇಬ್ಬರಿಗೆ ರಾಜ್ಯ ಖಾತೆ ಸಿಕ್ಕಿದೆ.
ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ನಿರ್ಮಲ ಸೀತಾರಾಮನ್, ಹೆಚ್ ಡಿ ಕುಮಾರಸ್ವಾಮಿ ಹಾಗೂ ಪ್ರಹ್ಲದ್ ಜೋಶಿ ಅವರಿಗೆ ಕ್ಯಾಬಿನೆಟ್ ಖಾತೆ ಸಿಕ್ಕರೆ ವಿ.ಸೋಮಣ್ಣ ಹಾಗೂ ಶೋಭಾ ಕರಂದ್ಲಾಜೆ ಅವರಿಗೆ ರಾಜ್ಯ ಖಾತೆ ಸಿಕ್ಕಿದೆ.
ಮಂಡ್ಯ ಸಂಸದ ಎಚ್.ಡಿ ಕುಮಾರಸ್ವಾಮಿ ಅವರಿಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ, ಧಾರವಾಡ ಕ್ಷೇತ್ರದ ಸಂಸದ ಪ್ರಹ್ಲಾದ್ ಜೋಶಿ ಅವರಿಗೆ ಆಹಾರ ಮತ್ತು ಗ್ರಾಹಕ ವ್ಯವಹಾರ, ನವೀಕರಿಸಬಹುದಾದ ಇಂಧನ ಖಾತೆ ಹಾಗೂ ನಿರ್ಮಲ ಸೀತಾರಾಮನ್ ಅವರಿಗೆ ಹಣಕಾಸು ಇಲಾಖೆ ಖಾತೆ ನೀಡಲಾಗಿದೆ.
ಬೆಂಗಳೂರು ಉತ್ತರ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಸಣ್ಣ, ಸೂಕ್ಷ್ಮ ಹಾಗೂ ಮಧ್ಯಮ ಕೈಗಾರಿಕೆ, ಕಾರ್ಮಿಕ ರಾಜ್ಯ ಖಾತೆ ಹಾಗೂ ತುಮಕೂರು ಸಂಸದ ವಿ.ಸೋಮಣ್ಣಗೆ ಜಲ ಶಕ್ತಿ ಹಾಗೂ ರೈಲ್ವೇ ರಾಜ್ಯ ಖಾತೆ ನೀಡಲಾಗಿದೆ.
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಇಂದಿನಿಂದ ( ಡಿಸೆಂಬರ್ 20 ) ಮೂರು ದಿನಗಳ ಕಾಲ ನಡೆಯಲಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…