ರಾಜ್ಯ

ಬೆಂಗಳೂರು ನಾಗರಿಕರಿಗೆ ಆಸ್ತಿ ತೆರಿಗೆ, ಕಸದ ಸೆಸ್‌ ಹೊರೆ: ನಿಖಿಲ್‌ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ನೀರು, ಹಾಲು, ಮೆಟ್ರೋ ದರ ಹೆಚ್ಚಳವಲ್ಲದೆ ಆಸ್ತಿ ತೆರಿಗೆ, ಕಸದ ಸೆಸ್‌‍ ಹೊರೆಯನ್ನು ಬೆಂಗಳೂರಿನ ನಾಗರಿಕರಿಗೆ ಹೊರಿಸಿರುವ ರಾಜ್ಯ ಸರ್ಕಾರ ಯಾವ ಮೂಲ ಸೌಕರ್ಯಗಳನ್ನು ಕಲ್ಪಿಸಿದೆ? ಎಂದು ಜೆಡಿಎಸ್‌‍ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಪ್ರಶ್ನಿಸಿದರು.

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಗರದಲ್ಲಿ ರಸ್ತೆಗುಂಡಿಗಳು ಅಪಘಾತಕ್ಕೆ ಕಾರಣವಾಗುತ್ತಿವೆ. ಪ್ರತಿ ವಾರ್ಡ್‌ನಲ್ಲೂ ಘನತ್ಯಾಜ್ಯ ಸಮರ್ಪಕವಾಗಿ ವಿಲೇವಾರಿಯಾಗದೆ ಗಬ್ಬು ನಾರುತ್ತಿವೆ. ರಾಜ್ಯಕ್ಕೆ ಶೇ.30ರಷ್ಟು ತೆರಿಗೆಯನ್ನು ಬೆಂಗಳೂರು ನಾಗರಿಕರು ನೀಡುತ್ತಿದ್ದಾರೆ. ಆದರೂ ಅಗತ್ಯ ಮೂಲ ಸೌಕರ್ಯ ಏಕೆ ಕಲ್ಪಿಸಿಲ್ಲ ಎಂದು ವಾಗ್ದಾಳಿ ನಡೆಸಿದರು.

ಹೊರ ವರ್ತುಲ ರಸ್ತೆಯ ಬ್ಲಾಕ್‌ಬಗ್‌ ಕಂಪನಿ ಸಿಇಒ ಅವರು ಮೂಲ ಸೌಕರ್ಯಗಳ ಬಗ್ಗೆ ಎಕ್ಸ್‌ನಲ್ಲಿ ಪ್ರಸ್ತಾಪಿಸಿದ್ದಾರೆ. ಮೂಲ ಸೌಕರ್ಯವಿಲ್ಲದ್ದರಿಂದ ರಾಜ್ಯದಿಂದ ಹೊರಹೋಗುವ ಮಾತನ್ನಾಡಿದ್ದಾರೆ. ಆದರೆ ಬೆಂಗಳೂರು ಉಸ್ತುವಾರಿ ಹೊತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರು ಮೂಲ ಸೌಕರ್ಯ ಒದಗಿಸಲು ಯಾವ ಕ್ರಮ ಕೈಗೊಂಡಿದ್ದಾರೆ ಎಂದು ಆಗ್ರಹಿಸಿದರು.

ಬಂಡವಾಳ ಹೂಡಿಕೆಗೆ ಸರ್ಕಾರ ಯಾವ ಮೂಲ ಸೌಲಭ್ಯ ಕಲ್ಪಿಸಿದೆ. ನವೆಂಬರ್‌ ವೇಳೆಗೆ ಗುಂಡಿ ಮುಚ್ಚುವ ಗಡುವು ನೀಡಿ 1100 ಕೋಟಿ ರೂ. ಒದಗಿಸುವುದಾಗಿ ಹೇಳಿದ್ದಾರೆ. ಮೂಲ ಸೌಕರ್ಯವಿಲ್ಲದೆ ಉದ್ಯಮಗಳು ನೆರೆಹೊರೆಯ ರಾಜ್ಯಗಳಿಗೆ ಹೋದರೆ ತೆರಿಗೆ ನಷ್ಟ ಉಂಟಾಗಲಿದೆ. ಜಿಬಿಎ ವ್ಯಾಪ್ತಿಯಲ್ಲಿ ವಾರ್ಷಿಕ 850 ಕೋಟಿ ರೂ. ತೆರಿಗೆ ಪಾವತಿಯಾಗುತ್ತಿದೆ. ಇರುವ ಕಂಪನಿಗಳನ್ನು ಉಳಿಸಿಕೊಂಡು ಹೊಸ ಕಂಪನಿಗಳನ್ನು ಬೆಂಗಳೂರಿಗೆ ಕರೆತರುವ ಪ್ರಯತ್ನವಾಗುತ್ತಿಲ್ಲ ಎಂದು ಆಕ್ಷೇಪಿಸಿದರು.
ಮುಂದಿನ ಎರಡು ತಿಂಗಳಲ್ಲಿ ಬೆಂಗಳೂರಿನ ಸಮಸ್ಯೆಗಳು ಪರಿಹಾರವಾಗುತ್ತವೆಯೇ? ಕೃತಕ ಬುದ್ಧಿಮತ್ತೆ ಯುಗದಲ್ಲಿ ಇದ್ದರೂ ಮೂಲಸೌಕರ್ಯ ಏಕೆ ಕಲ್ಪಿಸಲಾಗುತ್ತಿಲ್ಲ ಎಂಬುದನ್ನು ಸರ್ಕಾರ ಉತ್ತರಿಸಬೇಕು. ಉದ್ಯಮಿಗಳು ಸಾರ್ವಜನಿಕರಿಗಾಗುವ ತೊಂದರೆಗಳ ಬಗ್ಗೆ ದನಿಯೆತ್ತಿದ್ದಾರೆ ಎಂದರು.

ಆಂದೋಲನ ಡೆಸ್ಕ್

Recent Posts

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

3 hours ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

4 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

6 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

6 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

8 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

8 hours ago