ಧರ್ಮಸ್ಥಳ: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸ್ಥಿಪಂಜರ ಸಿಕ್ಕ ಬೆನ್ನಲ್ಲೇ ಎಸ್‌ಐಟಿ ತನಿಖೆ ಚುರುಕುಗೊಳಿಸಿದ್ದು, ದಫನ್ ಆದ ದಾಖಲೆಗಳನ್ನು ಸಂಗ್ರಹಿಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಅಲ್ಲಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಾಡಲಾಗಿರುವ ಶವಗಳ ದಫನ್ ಬಗ್ಗೆ ದಾಖಲೆ ಸಂಗ್ರಹಿಸುತ್ತಿದ್ದು, ಧರ್ಮಸ್ಥಳ, ಬೆಳ್ತಂಗಡಿ ಪೊಲೀಸ್ ಠಾಣೆಗಳ ಯುಡಿಆರ್ ವಶಕ್ಕೆ ಪಡೆದುಕೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಧರ್ಮಸ್ಥಳದಲ್ಲಿ ನೇತ್ರಾವತಿ ನದಿ ತೀರದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಂತೆ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳ ತಂಡ, 8ನೇ ಪಾಯಿಂಟ್‌ನಲ್ಲಿ ಶೋಧಕಾರ್ಯ ಪೂರ್ಣಗೊಳಿಸಿದೆ.
ಆರನೇ ಪಾಯಿಂಟ್‌ನಲ್ಲಿ ಮಾತ್ರ ಅಸ್ಥಿಪಂಜರ ಪತ್ತೆಯಾಗಿದ್ದು, 7ನೇ ಪಾಯಿಂಟ್‌ನಲ್ಲಿ ಕರವಸ್ತ್ರವೊಂದು ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಇಂದು 9ನೇ ಪಾಯಿಂಟ್‌ನಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದ್ದು, ಪರದೆ ಅಳವಡಿಸಿ ಶೋಧ ಕಾರ್ಯ ಮುಂದುವರಿದಿದೆ.





