ಧರ್ಮಸ್ಥಳ: ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ದೂರುದಾರ ಗುರುತಿಸಿದ್ದ 6ನೇ ಪಾಯಿಂಟ್‌ನಲ್ಲಿ ಮೂಳೆಗಳು ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ದೂರುದಾರ ಗುರುತಿಸಿದ ಸ್ಥಳಗಳ ಪೈಕಿ ಇದೀಗ ಆರನೇ ಪಾಯಿಂಟ್‌ನಲ್ಲಿ 15 ಕಾರ್ಮಿಕರಿಂದ ಉತ್ಖನನ ನಡೆಯುತ್ತಿದ್ದು, ಎರಡು ಅಸ್ಥಿಪಂಜರ ಪತ್ತೆಯಾಗಿದೆ.
ಆದರೆ ದೇಹದ ಪೂರ್ತಿ ಭಾಗಗಳು ಸಿಕ್ಕಿಲ್ಲ. ಕೆಲವು ಭಾಗಗಳು ಮಾತ್ರ ಸಿಕ್ಕಿದ್ದು, ಇನ್ನೂ ಆಳಕ್ಕೆ ಅಗೆದು ಹುಡುಕಾಟ ನಡೆಸಲಾಗುತ್ತಿದೆ.
ಇನ್ನು ಉತ್ಖನನ ನಡೆಸುವ ಸ್ಥಳದಲ್ಲಿ ನೇತ್ರಾವತಿ ನದಿ ನೀರಿನ ಹರಿವು ಇದ್ದ ಕಾರಣ ಗುಂಡಿಯಲ್ಲಿ ನೀರು ತುಂಬಿದೆ. ನೀರನ್ನು ಹೊರ ತೆಗೆದು ಅಧಿಕಾರಿಗಳು ಮುಂದಿನ ಕ್ರಮ ಕೈಗೊಂಡಿದ್ದಾರೆ. ಇದನ್ನು ಸಂಪೂರ್ಣವಾಗಿ ಅಗೆದ ಬಳಿಕ 7 ಹಾಗೂ 8ನೇ ಪಾಯಿಂಟ್‌ನಲ್ಲಿ ಉತ್ಖನನ ಕಾರ್ಯ ನಡೆಯುವ ಸಾಧ್ಯತೆಯಿದೆ.
ಇನ್ನು ಮಾಹಿತಿಯ ಪ್ರಕಾರ ಆರನೇ ಪಾಯಿಂಟ್‌ನಲ್ಲಿ ಸಿಕ್ಕಿರುವ ಮೂಳೆಗಳು ಪುರುಷನ ಎಲುಬುಗಳಾಗಿದ್ದು, ತಲೆ ಬುರುಡೆ ಸಹ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.





