Mysore
29
scattered clouds

Social Media

ಮಂಗಳವಾರ, 31 ಮಾರ್ಚ್ 2026
Light
Dark

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ.

ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ ವಲಯದ ಮಾಣಿಕ್ಯಬೆಟ್ಟ ವಾಲೀಕುಂಜಗಿರಿ ಸಾಲಿನ 25ಕ್ಕೂ ಹೆಚ್ಚು ಕಡೆಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಅರಣ್ಯಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದ್ದು, ಬೆಂಕಿ ಬಿದ್ದಿರುವುದರಿಂದ ನೆಲದಲ್ಲಿ ಗೂಡುಕಟ್ಟುವ ಪಕ್ಷಿಗಳು, ಪ್ರಾಣಿಗಳು, ಅಪರೂಪದ ಸಸ್ಯಸಂಪತ್ತು ಸುಟ್ಟು ಹೋಗಿವೆ.

ಈ ಅವಘಡಕ್ಕೆ ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದು, ಈ ಬಗ್ಗೆ ಅರಣ್ಯ ಸಚಿವರು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

Tags:
error: Content is protected !!