ರಾಜ್ಯ

ಚಿತ್ರದುರ್ಗದಲ್ಲಿ ಬಸ್‌ ದುರಂತ ಪ್ರಕರಣ: ಕಂಬನಿ ಮಿಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬಳಿ ಸಂಭವಿಸಿದ ಕಂಟೇನರ್‌ ಹಾಗೂ ಖಾಸಗಿ ಬಸ್‌ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ, ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಹಾಗೂ ಬಸ್‌ ನಡುವಿನ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು. ಕ್ರಿಸ್‌ಮಸ್‌ ರಜೆಯಲ್ಲಿ ಊರಿಗೆ ತೆರಳುತ್ತಿದ್ದವರ ಪ್ರಯಾಣ ಈ ರೀತಿ ದುರಂತದಲ್ಲಿ ಕೊನೆಗೊಂಡಿರುವುದು ವಿಷಾದನೀಯ.

ಅಪಘಾತದ ಬಗ್ಗೆ ಸೂಕ್ತ ತನಿಖೆ ನಡೆಸಿ, ಕಾರಣವನ್ನು ಪತ್ತೆಹಚ್ಚಲಾಗುವುದು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅಪಘಾತದಲ್ಲ ಮಡಿದ ಕುಟುಂಬಸ್ಥರ ದುಃಖದಲ್ಲಿ ನಾನೂ ಭಾಗಿ ಎಂದು ಕಂಬನಿ ಮಿಡಿದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮದ್ದೂರು ಬಳಿಯ ವಳೆಗೆರೆಹಳ್ಳಿಯಲ್ಲಿ ಮಳೆರಾಯನಿಗಾಗಿ ಪೂಜೆ

ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…

10 hours ago

ಸಮರ್ಥವಾಗಿ ಕಾರ್ಯನಿರ್ವಹಿಸದ ಸಚಿವರನ್ನು ಬದಲಾಯಿಸಿ: ಶಾಸಕ ರವಿಕುಮಾರ್‌ ಗಣಿಗ

ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…

10 hours ago

ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು

ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್‌ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…

10 hours ago

ಹಾಸನ: ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…

10 hours ago

ಶಿವಮೊಗ್ಗ: ಪಶುವೈದ್ಯೆ ಕೊಂದಿದ್ದ ನೀರಾನೆಗೆ ಬಹು ಅಂಗಾಂಗ ವೈಫಲ್ಯ

ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…

10 hours ago

ಪಾಕ್‌ ಜನತೆಗೆ ಮತ್ತೊಂದು ಶಾಕ್:‌ ವಿದ್ಯುತ್‌ ದರ ದುಪ್ಪಟ್ಟು ಹೆಚ್ಚಳ

ಇಸ್ಲಾಮಾಬಾದ್:‌ ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್‌ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…

10 hours ago