Mysore
25
clear sky

Social Media

ಶನಿವಾರ, 13 ಡಿಸೆಂಬರ್ 2025
Light
Dark

ಕರ್ತವ್ಯದ ವೇಳೆ ರೀಲ್ಸ್ ಮಾಡಿದರೆ ಅಮಾನತು ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಎಚ್ಚರಿಕೆ

ಬೆಂಗಳೂರು : ಇತ್ತೀಚೆಗೆ KSRTC ಬಸ್‌ ಚಾಲಕರ ಮತ್ತು ನಿರ್ವಾಹಕರ ರೀಲ್ಸ್‌ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದವು. ಇದರಿಂದ ಜೀವ ಹಾನಿಯೂ ಸಹ ಆಗಿತ್ತು. ಹೀಗಾಗಿ ಕರ್ನಾಟಕ ಸಾರಿಗೆ ಇಲಾಖೆಯ ಚಾಲಕ ಮತ್ತು ನಿರ್ವಾಹಕರಿಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್‌ ಸೂಚನೆ ನೀಡಿದ್ದಾರೆ.

ಕರ್ತವ್ಯದಲ್ಲಿದ್ದ ವೇಳೆ ಕರ್ನಾಟಕ ಸಾರಿಗೆಯ ಇಲಾಖೆಯ ಚಾಲರಾಗಲಿ ಅಥವಾ ನಿರ್ವಾಹಕರಾಗಲಿ ರೀಲ್ಸ್‌ ಮಾಡಿದ್ರೆ ಅಂತವರನ್ನು ಮುಲಾಜಿಲ್ಲದೆ ಕೆಲಸದಿಂದ ತೆಗೆಯಬೇಕಾಗುತ್ತದೆ ಎಂದು ಖಡಕ್‌ ಎಚ್ಚರಿಕೆಯನ್ನು ಸಾರಿಗೆ ಸಚಿವರು ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರೀಲ್ಸ್‌ ಮಾಡಿದವರು ಕೆಲಸದಲ್ಲಿ ಇರಲು ಲಾಯಕ್‌ ಇಲ್ಲ.  ಕರ್ತವ್ಯದಲ್ಲಿದ್ದ ವೇಳೆ ರೀಲ್ಸ್‌ ಮಾಡಿದರೆ ಅಂತವರನ್ನು ಮುಲಾಜಿಲ್ಲದೆ ಅಮಾನತುಗೊಳಿಸಲಾಗುವುದು ಎಂದು ಹೇಳಿದರು.

Tags:
error: Content is protected !!