ಬೆಂಗಳೂರು : ಇತ್ತೀಚೆಗೆ KSRTC ಬಸ್ ಚಾಲಕರ ಮತ್ತು ನಿರ್ವಾಹಕರ ರೀಲ್ಸ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದವು. ಇದರಿಂದ ಜೀವ ಹಾನಿಯೂ ಸಹ ಆಗಿತ್ತು. ಹೀಗಾಗಿ ಕರ್ನಾಟಕ ಸಾರಿಗೆ ಇಲಾಖೆಯ ಚಾಲಕ ಮತ್ತು ನಿರ್ವಾಹಕರಿಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ ನೀಡಿದ್ದಾರೆ.
ಕರ್ತವ್ಯದಲ್ಲಿದ್ದ ವೇಳೆ ಕರ್ನಾಟಕ ಸಾರಿಗೆಯ ಇಲಾಖೆಯ ಚಾಲರಾಗಲಿ ಅಥವಾ ನಿರ್ವಾಹಕರಾಗಲಿ ರೀಲ್ಸ್ ಮಾಡಿದ್ರೆ ಅಂತವರನ್ನು ಮುಲಾಜಿಲ್ಲದೆ ಕೆಲಸದಿಂದ ತೆಗೆಯಬೇಕಾಗುತ್ತದೆ ಎಂದು ಖಡಕ್ ಎಚ್ಚರಿಕೆಯನ್ನು ಸಾರಿಗೆ ಸಚಿವರು ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರೀಲ್ಸ್ ಮಾಡಿದವರು ಕೆಲಸದಲ್ಲಿ ಇರಲು ಲಾಯಕ್ ಇಲ್ಲ. ಕರ್ತವ್ಯದಲ್ಲಿದ್ದ ವೇಳೆ ರೀಲ್ಸ್ ಮಾಡಿದರೆ ಅಂತವರನ್ನು ಮುಲಾಜಿಲ್ಲದೆ ಅಮಾನತುಗೊಳಿಸಲಾಗುವುದು ಎಂದು ಹೇಳಿದರು.
ಚಾ.ನಗರದಲ್ಲಿ ಅಂತಾರಾಷ್ಟ್ರೀಯ ಬೌದ್ಧ ಸಮ್ಮೇಳನ ನಡೆಯಲಿರುವ ಹಿನ್ನೆಲೆಯಲ್ಲಿ ಪ್ರಚಾರ ಮಾಡಲಿರುವ ವಾಹನಗಳು ಚಾಮರಾಜನಗರ : ಧಮ್ಮ ಪಯಣ ಜಾಗೃತಿ ಜಾಥಾದ…
ಮೈಸೂರು ದಸರಾ ಎಂದರೆ ಜಂಬೂಸವಾರಿ, ಅರಮನೆಯ ದೀಪಾಲಂಕಾರ, ಸಂಗೀತ-ನೃತ್ಯ ಕಾರ್ಯಕ್ರಮಗಳು, ಯುವ ದಸರಾ, ಆಹಾರ ಮೇಳ, ವಸ್ತುಪ್ರದರ್ಶನ ಮಾತ್ರವಲ್ಲ. ಕಳೆದ…
ಕೆ. ಬಿ. ರಮೇಶನಾಯಕ ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಮೆರವಣಿಗೆಯಲ್ಲಿ ಸಾಗಲಿರುವ ಗಜಪಡೆಯ ಹೊಸ ಸಾರಥಿಯ ಆಯ್ಕೆಗಾಗಿ…
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಮತ್ತು ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ 2016ನೇ ಬ್ಯಾಚ್‌ನ…
ಬೆಂಗಳೂರು : ಸಾರ್ವಜನಿಕರಿಂದ ವ್ಯಕ್ತವಾದ ತೀವ್ರ ವಿರೋಧ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ವಿವಾದಿತ ‘ಸರ್ಕಾರಿ ಉದ್ಯಾನವನಗಳ (ಸಂರಕ್ಷಣೆ) (ತಿದ್ದುಪಡಿ)…