Mysore
24
scattered clouds

Social Media

ಭಾನುವಾರ, 26 ಏಪ್ರಿಲ 2026
Light
Dark

ಬಸ್‌ ಪ್ರಯಾಣ ದರ ಏರಿಕೆ: ಜ.5ರ ಮಧ್ಯರಾತ್ರಿಯಿಂದಲೇ ಪರಿಷ್ಕೃತ ಬಸ್‌ ಪ್ರಯಾಣ ದರ ಜಾರಿ

ಬೆಂಗಳೂರು: ರಾಜ್ಯ ಸರ್ಕಾರ ಬಸ್‌ ಪ್ರಯಾಣ ದರ ಏರಿಕೆ ಮಾಡಲು ಮುಂದಾಗಿದ್ದು, ಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ ಬಸ್‌ ಪ್ರಯಾಣ ದರ ಅಧಿಕೃತವಾಗಿ ಜಾರಿಯಾಗಲಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.

ಈ ಕುರಿತು ಇಂದು(ಜ.4) ಸರ್ಕಾರದಿಂದ ಅಧಿಕೃತವಾಗಿ ಆದೇಶ ಹೊರಡಿಸಿದ್ದು, ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಮತ್ತು ಕೆಕೆಆರ್‌ಟಿಸಿ ಬಸ್‌ಗಳ ಟಿಕೆಟ್‌ ದರವನ್ನು ಶೇಕಡಾ 15 ರಷ್ಟು ಹೆಚ್ಚಳ ಮಾಡಿದೆ. ಈ ಪ್ರಯಾಣ ದರವೂ ಇಂದಿನಿಂದಲೇ ಅಂದರೆ ಜನವರಿ.5ರ ಮಧ್ಯರಾತ್ರಿಯಿಂದಲೇ ಜಾರಿಯಾಗಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಕೆಲ ಹಿಂದೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬಸ್‌ ಟಿಕೆಟ್‌ ದರ ಹೆಚ್ಚಳ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿತ್ತು. ಅದರ ಬೆನ್ನಲ್ಲೇ ಬಸ್‌ ಪ್ರಯಾಣ ದರ ಹೆಚ್ಚಳಕ್ಕೆ ರಾಜ್ಯಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿತ್ತು. ಆದರೆ ಈ ಪ್ರಸ್ತಾವನೆಯನ್ನು ಪರಿಶೀಲಿಸಿದ ಸರ್ಕಾರವೂ ನಾಲ್ಕು ರಸ್ತೆ ಸಾರಿಗೆ ಸಂಸ್ಥೆಗಳ ಪ್ರಯಾಣ ದರವನ್ನು ಶೇಕಡಾ 15ರಷ್ಟು ಹೆಚ್ಚಿಸಿ ಪರಿಷ್ಕರಿಸಲು ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಸರ್ಕಾರ ಆದೇಶಿಸಿದೆ.

Tags:
error: Content is protected !!