ಬೆಂಗಳೂರು: ರಾಜ್ಯ ಸರ್ಕಾರ ಬಸ್ ಪ್ರಯಾಣ ದರ ಏರಿಕೆ ಮಾಡಲು ಮುಂದಾಗಿದ್ದು, ಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ ಬಸ್ ಪ್ರಯಾಣ ದರ ಅಧಿಕೃತವಾಗಿ ಜಾರಿಯಾಗಲಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.
ಈ ಕುರಿತು ಇಂದು(ಜ.4) ಸರ್ಕಾರದಿಂದ ಅಧಿಕೃತವಾಗಿ ಆದೇಶ ಹೊರಡಿಸಿದ್ದು, ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಮತ್ತು ಕೆಕೆಆರ್‌ಟಿಸಿ ಬಸ್‌ಗಳ ಟಿಕೆಟ್ ದರವನ್ನು ಶೇಕಡಾ 15 ರಷ್ಟು ಹೆಚ್ಚಳ ಮಾಡಿದೆ. ಈ ಪ್ರಯಾಣ ದರವೂ ಇಂದಿನಿಂದಲೇ ಅಂದರೆ ಜನವರಿ.5ರ ಮಧ್ಯರಾತ್ರಿಯಿಂದಲೇ ಜಾರಿಯಾಗಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಕೆಲ ಹಿಂದೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬಸ್ ಟಿಕೆಟ್ ದರ ಹೆಚ್ಚಳ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿತ್ತು. ಅದರ ಬೆನ್ನಲ್ಲೇ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ರಾಜ್ಯಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿತ್ತು. ಆದರೆ ಈ ಪ್ರಸ್ತಾವನೆಯನ್ನು ಪರಿಶೀಲಿಸಿದ ಸರ್ಕಾರವೂ ನಾಲ್ಕು ರಸ್ತೆ ಸಾರಿಗೆ ಸಂಸ್ಥೆಗಳ ಪ್ರಯಾಣ ದರವನ್ನು ಶೇಕಡಾ 15ರಷ್ಟು ಹೆಚ್ಚಿಸಿ ಪರಿಷ್ಕರಿಸಲು ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಸರ್ಕಾರ ಆದೇಶಿಸಿದೆ.
ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್‌ಜಿ ಯೋಧರು ಹುತಾತ್ಮರಾಗಿದ್ದಾರೆ.…
ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…
ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…
ಬೆಂಗಳೂರು : ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…
ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…