ಬೆಳಗಾವಿ: ಭಾಷಾ ವಿಚಾರವಾಗಿ ಕಂಡಕ್ಟರ್ ಮೇಲೆ ಹಲ್ಲೆ ಹಾಗೂ ಗಲಾಟೆಯಿಂದ ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ನಡುವೆ ಸ್ಥಗಿತಗೊಂಡಿದ್ದ ಬಸ್ ಸಂಚಾರ ಇಂದಿನಿಂದ ಪುನಾರಂಭಗೊಂಡಿದೆ.
ಭಾಷೆಯ ವಿಚಾರವಾಗಿ ಮಹಾರಾಷ್ಟ್ರದಲ್ಲಿ ಶಿವಸೇನಾ ಕಾರ್ಯಕರ್ತರು ಕರ್ನಾಟಕ ಬಸ್‌ಗೆ ಮಸಿ ಬಳಿದು ಗೂಂಡಾಗಿರಿ ಪ್ರದರ್ಶಿಸಿ, ಕರ್ನಾಟಕ ಬಸ್ ಚಾಲಕನಿಂದ ಜೈ ಮಹಾರಾಷ್ಟ್ರ ಘೋಷಣೆ ಹಾಕಿಸಿದ್ದರು. ಇದಕ್ಕೆ ಬೆಳಗಾವಿ ಚಲೋ ಮೂಲಕ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಶಿವಸೇನಾ ಕಾರ್ಯಕರ್ತರಿಗೆ ತಕ್ಕ ಉತ್ತರ ನೀಡಿದ್ದರು.
ಇದರಿಂದ ಎರಡು ರಾಜ್ಯಗಳ ನಡುವಿನ ಬಸ್ ಸಂಚಾರ ಸ್ಥಗಿತಗೊಂಡು, ಎರಡು ರಾಜ್ಯದ ಪ್ರಯಾಣಿಕರು ಪರದಾಟ ನಡೆಸಿದ್ದರು. ಅಲ್ಲದೇ 4 ದಿನಗಳಲ್ಲಿ ಕರ್ನಾಟಕ ಸರ್ಕಾರ ಕೋಟ್ಯಂತರ ರೂಪಾಯಿ ನಷ್ಟ ಅನುಭವಿಸಿದೆ.
ಇದರಿಂದ ಎಚ್ಚೆತ್ತ ಬೆಳಗಾವಿ ಮತ್ತು ಕೊಲ್ಲಾಪುರ ಡಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಬಸ್ ಆರಂಭಿಸಲು ಮಾತುಕತೆ ನಡೆಸಿ ಬಸ್ ಸಿಬ್ಬಂದಿಗಳ ಹಾಗೂ ಪ್ರಯಾಣಿಕರ ಸುರಕ್ಷತೆಗೆ ಒತ್ತು ಕೊಟ್ಟು ಪರಸ್ಪರ ಒಪ್ಪಂದ ಮಾಡಿಕೊಂಡಿದ್ದಾರೆ.
ಇದೀಗ ಎರಡು ರಾಜ್ಯದ ಮಧ್ಯೆ ಬಸ್ ಸಂಚಾರ ಆರಂಭವಾಗಿದ್ದು, ಬೆಳಗಾವಿಯಿಂದ ಕೊಲ್ಲಾಪುರ, ಪುಣೆ, ಮುಂಬೈ, ಶಿರಡಿ, ನಾಸಿಕ್‌ಗೆ ಬಸ್ ಸೇವೆ ಆರಂಭವಾಗಿದೆ.
ಕೇರಳ: ವಿಧಾನಸಭೆ ಚುನಾವಣೆ ನಡೆಯಲಿರುವ ಕೇರಳಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಸರಣಿ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ…
ಮಂಡ್ಯ: ಕಳೆದ ಬಾರಿಗಿಂತ ಈ ಬಾರಿ ವಿಶೇಷವಾಗಿ 2 ಲಕ್ಷಕ್ಕೂ ಅಧಿಕ ಹೂಗಳನ್ನು ಬಳಿಸಿ ವಿಶೇಷ ಫಲಪುಷ್ಪ ಪ್ರದರ್ಶನವನ್ನು ಮಾಡಲಾಗಿದೆ…
ಮೈಸೂರು: ಅಪಾರ್ಟ್‌ಮೆಂಟ್‌ವೊಂದರಲ್ಲಿ ಬಣ್ಣ ಹೊಡೆಯುವ ವೇಳೆ ಕಾಲು ಜಾರಿ ಕೆಳಗೆ ಬಿದ್ದು ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ಮೈಸೂರಿನ ದಿವಾನ್ಸ್ ರಸ್ತೆಯಲ್ಲಿರುವ…
ಮಹಾದೇಶ್ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಸಂಜೆ 6 ಗಂಟೆಯಿಂದ ಬೆಳಗಿನ ಜಾವ 6…
ಬೆಂಗಳೂರು: ವಿಧಾನಮಂಡಲ ಜಂಟಿ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದ ನಡುವೆ ತೀವ್ರ…
ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಈ…