ರಾಜ್ಯ

ಬಸ್‌ ಪ್ರಯಾಣ ದರ ಏರಿಕೆ: ಸಚಿವ ಶಿವಾನಂದ ಪಾಟೀಲ್‌ ಸಮರ್ಥನೆ

ಹಾವೇರಿ: ಪಕ್ಕದ ರಾಜ್ಯಗಳಾದ ಆಂಧ್ರ ಪ್ರದೇಶ, ತಮಿಳುನಾಡಿಗೆ ಹೋಲಿಕೆ ಮಾಡಿದರೆ ನಮ್ಮಲ್ಲಿ ಬಸ್‌ ಪ್ರಯಾಣ ದರ ತುಂಬಾ ಕಡಿಮೆ ಇದೆ ಎಂದು ಬಸ್‌ ಟಿಕೆಟ್‌ ದರ ಏರಿಕೆಯನ್ನು ಸಚಿವ ಶಿವಾನಂದ್‌ ಪಾಟೀಲ್‌ ಸಮರ್ಥಿಸಿಕೊಂಡಿದ್ದಾರೆ.

ಈ ಬಗ್ಗೆ ಹಾವೇರಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ರಾಜ್ಯದ ಬಡ ಜನತೆಯ ಬೆಳವಣಿಗೆಯನ್ನು ಸಹಿಸುವುದಿಲ್ಲ. ಅವರಿಗೆ ಹೋರಾಟ ಮಾಡುವುದು ಬಿಟ್ಟರೆ ಅಭಿವೃದ್ದಿಯ ಬಗ್ಗೆ ಚರ್ಚಿಸಿ ಎಂದರೆ ಚರ್ಚೆಗೆ ಬರುವುದಿಲ್ಲ ಎಂದು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.

ಶಕ್ತಿ ಯೋಜನೆಯಲ್ಲಿ ಹೆಣ್ಣು ಮಕ್ಕಳನ್ನು ಓಡಾಡಿಸುತ್ತಿರುವುದು ಲಾಭ-ನಷ್ಟದ ಉದ್ದೇಶವಲ್ಲ. ಹೆಣ್ಣು ಮಕ್ಕಳಿಗೆ, ಬಡವರಿಗೆ ಏನು ಕೊಡಬೇಕೋ ಅದನ್ನು ಕೊಡುವುದು ನಮ್ಮ ಉದ್ದೇಶ ಎಂದರು.

ದುಡಿಯುವ ಗಂಡು ಮಕ್ಕಳಿಗೆ 15% ಭಾರ ಆಗಬಹುದು. ಆದರೆ ಪ್ರತಿನಿತ್ಯ ಹೆಚ್ಚು ಓಡಾಡುತ್ತಿರುವುದು ಹೆಣ್ಣು ಮಕ್ಕಳು, ಗಂಡು ಮಕ್ಕಳಲ್ಲ ಎಂದರು.

ಇನ್ನು ಅಧಿಕಾರ ಹಂಚಿಕೆಯ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಸಿಎಂ, ಡಿಸಿಎಂ ಸೇರಿದಂತೆ ಇನ್ನಿತರ ಸ್ಥಾನಕ್ಕೆ ವರಿಷ್ಠರ ತೀರ್ಮಾನವೇ ಅಂತಿಮವಾಗಲಿದೆ. ಈ ಬಗ್ಗೆ ಸಿಎಲ್‌ಪಿ ಸಭೆಯಲ್ಲಿ ನಿರ್ಣಯವಾಗುತ್ತದೆ ಎಂದು ತಿಳಿಸಿದರು.

 

ಆಂದೋಲನ ಡೆಸ್ಕ್

Recent Posts

ನಾಳೆ ಶ್ರೀ ಅಯ್ಯಪ್ಪ ಕ್ಷೇತ್ರದ ಮುಖಮಂಟಪ ಲೋಕಾರ್ಪಣೆ

ಸುಂಟಿಕೊಪ್ಪದಲ್ಲಿ ೧೮ ಲಕ್ಷ ರೂ. ವೆಚ್ಚದ ಮಂಟಪ ನಿರ್ಮಾಣ ೩ ದಿನಗಳ ಧಾರ್ಮಿಕ ಕಾರ್ಯಕ್ರಮ ಸುಂಟಿಕೊಪ್ಪ: ಇಲ್ಲಿನ ಶ್ರೀ ಪುರಂ…

2 hours ago

‘ದೇಸಿ ಬೀಜಗಳನ್ನು ಉಳಿಸಿದರೆ ವಿಷಮುಕ್ತ ಆಹಾರ ನೀಡಲು ಸಾಧ್ಯ’

ಪಿರಿಯಾಪಟ್ಟಣ: ದೇಸಿ ಬೀಜಗಳನ್ನು ಉಳಿಸಿದರೆ ಮಾತ್ರ ಮುಂದಿನ ಯುವ ಜನಾಂಗಕ್ಕೆ ವಿಷಮುಕ್ತ ಆಹಾರ ನೀಡಲು ಸಾಧ್ಯ ಎಂದು ಸಾವಯವ ರೈತ…

2 hours ago

ಕ್ರಿಸ್‌ಮಸ್ ಹಬ್ಬಕ್ಕೆ ಅರಮನೆ ನಗರಿ ಸಜ್ಜು

ಮೈಸೂರು: ಕ್ರಿಸ್‌ಮಸ್ ಆಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದ್ದರೆ, ಚರ್ಚ್‌ಗಳ ಅಂಗಳವನ್ನು ವಿದ್ಯುತ್ ದೀಪಗಳಿಂದ ಸಿಂಗರಿಸುವ ಕಾರ್ಯ…

2 hours ago

ಡಿಎಚ್‌ಒ ವರ್ಗಾವಣೆಯಲ್ಲಿ ಎಡವಟ್ಟು

ಕೆ.ಬಿ.ರಮೇಶನಾಯಕ ಟಿಎಚ್‌ಒ ಹುದ್ದೆಗೆ ಡಿಎಚ್‌ಒ ವರ್ಗಾವಣೆ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ಮೈಸೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ…

2 hours ago

ಮಳವಳ್ಳಿ| ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಮಗ

ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…

14 hours ago