ಬೆಂಗಳೂರು: ರಾಜ್ಯದ ಜನತೆಗೆ ಶಾಕ್ ಮೇಲೆ ಶಾಕ್ ಎದುರಾಗುತ್ತಿದ್ದು, ಬಸ್ ಪ್ರಯಾಣ ಏರಿಕೆಗೆ ಸಾರಿಗೆ ನಿಗಮಗಳು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿವೆ.
ರಾಜ್ಯದಲ್ಲಿ ಎಲ್ಲಾ ವಸ್ತುಗಳ ಬೆಲೆಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಜನರು ತೀವ್ರ ಪರದಾಟ ನಡೆಸುವ ಪರಿಸ್ಥಿತಿ ನಿರ್ಮಣವಾಗಿದೆ. ಈ ಬೆನ್ನಲ್ಲೇ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರ ಶೇಕಡಾ 15ರಿಂದ ಶೇಕಡಾ 20ರಷ್ಟು ದರ ಏರಿಕೆಗೆ ಸಾರಿಗೆ ನಿಗಮಗಳು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿವೆ.
ದರ ಏರಿಕೆಗೆ ಸಾರಿಗೆ ನಿಗಮಗಳು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುವ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಬಸ್ ಪ್ರಯಾಣ ದರ ಏರಿಕೆಗೆ ಕೆಎಸ್‌ಆರ್‌ಟಿಸಿ ಪ್ರಸ್ತಾವನೆ ಸಲ್ಲಿಸಿದೆ. ಆದರೆ ಬಸ್ ಟಿಕೆಟ್ ದರ ಏರಿಕೆಗೆ ಇನ್ನೂ ತೀರ್ಮಾನ ಮಾಡಿಲ್ಲ. ಈ ಬಗ್ಗೆ ಸಾರಿಗೆ ಇಲಾಖೆ ಅಧಿಕಾರಿಗಳ ಜೊತೆ ಕುಳಿತು ಕೂಲಂಕುಷವಾಗಿ ಚರ್ಚಿಸುತ್ತೇನೆ. ಎಲ್ಲಾ ವಿಷಯಗಳನ್ನು ಚರ್ಚಿಸಿದ ಬಳಿಕವೇ ದರ ಏರಿಕೆ ಬಗ್ಗೆ ನಿರ್ಧಾರ ಎಂದರು.
ಇನ್ನು ಸಿಬ್ಬಂದಿ ವೇತನ, ಡೀಸೆಲ್, ಬಿಡಿ ಭಾಗಗಳ ಬೆಲೆಗಳು ಅತೀ ಹೆಚ್ಚಾಗಿರುವುದರಿಂದ ನಿಗಮಗಳು ಆರ್ಥಿಕವಾಗಿ ಸದೃಢವಾಗಿಲ್ಲ. ಹೀಗಾಗಿ ಶೇಕಡಾ 15 ರಿಂದ 20 ರಷ್ಟು ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿವೆ. ಈ ಬಗ್ಗೆ ಕೆಲವೇ ದಿನಗಳಲ್ಲಿ ಸಿಎಂ ಜೊತೆ ಸಭೆ ನಡೆಸಿ ದರ ಹೆಚ್ಚಳ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.
ಮೈಸೂರು : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ಕುಲಪತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ…
ಬೆಂಗಳೂರು : ಬಹಳ ವರ್ಷಗಳ ಹಿಂದೆಯೇ ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್) ಸ್ಥಾಪಿಸುವ ಮೂಲಕ ದೇಶದಲ್ಲೇ ಮೊದಲು ಕರ್ನಾಟಕವನ್ನು ನಾವು…
ಹನೂರು : ತಾಲೂಕಿನ ಬಿ.ಆರ್.ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಗುಡ್ಡದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡು ಸುಮಾರು 20 ಎಕರೆಗೂ…
ಜಕಾರ್ತಾ : ಇಂಡೋನೇಷ್ಯಾದ ಉತ್ತರ ಮೊಲುಕ್ಕಾ ಸಮುದ್ರ ಪ್ರದೇಶದಲ್ಲಿ ಗುರುವಾರ ಬೆಳಗ್ಗೆ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 7.4ರಷ್ಟು…
ಹನೂರು : ಏಕ ಕಾಲದಲ್ಲಿ ಬುಧವಾರ ತಡರಾತ್ರಿ ಕಾಡಾನೆಗಳು ರೈತರ ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳ ಮೇಲೆ ದಾಳಿ ನಡೆಸಿ ಸುಮಾರು…
ಮೈಸೂರು : ಸ್ಪರ್ಧಾತ್ಮಕ ಜಗತ್ತು ಸಾಗರದಂತೆ. ಇವತ್ತಿನ ಸ್ಪರ್ಧಾತ್ಮಕ ಸಮಾಜದಲ್ಲಿ ಹೆಚ್ಚಿನ ಬದಲಾವಣೆಗಳು, ಒತ್ತಡಗಳಿದ್ದು, ಎಲ್ಲದಕ್ಕೂ ಸಿದ್ಧರಿರಬೇಕು. ನಿರಂತರ ಅಭ್ಯಾಸ…