ರಾಜ್ಯ

ರಾಜ್ಯದ ಜನತೆಗೆ ಶಾಕ್‌ ಮೇಲೆ ಶಾಕ್: ಬಸ್‌ ಪ್ರಯಾಣ ದರ ಏರಿಕೆಗೆ ಪ್ರಸ್ತಾವನೆ

ಬೆಂಗಳೂರು: ರಾಜ್ಯದ ಜನತೆಗೆ ಶಾಕ್‌ ಮೇಲೆ ಶಾಕ್‌ ಎದುರಾಗುತ್ತಿದ್ದು, ಬಸ್‌ ಪ್ರಯಾಣ ಏರಿಕೆಗೆ ಸಾರಿಗೆ ನಿಗಮಗಳು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿವೆ.

ರಾಜ್ಯದಲ್ಲಿ ಎಲ್ಲಾ ವಸ್ತುಗಳ ಬೆಲೆಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಜನರು ತೀವ್ರ ಪರದಾಟ ನಡೆಸುವ ಪರಿಸ್ಥಿತಿ ನಿರ್ಮಣವಾಗಿದೆ. ಈ ಬೆನ್ನಲ್ಲೇ ರಾಜ್ಯದ ಜನತೆಗೆ ಮತ್ತೊಂದು ಶಾಕ್‌ ಎದುರಾಗಿದ್ದು, ಕೆಎಸ್‌ಆರ್‌ಟಿಸಿ ಬಸ್‌ ಪ್ರಯಾಣ ದರ ಶೇಕಡಾ 15ರಿಂದ ಶೇಕಡಾ 20ರಷ್ಟು ದರ ಏರಿಕೆಗೆ ಸಾರಿಗೆ ನಿಗಮಗಳು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿವೆ.

ದರ ಏರಿಕೆಗೆ ಸಾರಿಗೆ ನಿಗಮಗಳು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುವ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಬಸ್‌ ಪ್ರಯಾಣ ದರ ಏರಿಕೆಗೆ ಕೆಎಸ್‌ಆರ್‌ಟಿಸಿ ಪ್ರಸ್ತಾವನೆ ಸಲ್ಲಿಸಿದೆ. ಆದರೆ ಬಸ್‌ ಟಿಕೆಟ್‌ ದರ ಏರಿಕೆಗೆ ಇನ್ನೂ ತೀರ್ಮಾನ ಮಾಡಿಲ್ಲ. ಈ ಬಗ್ಗೆ ಸಾರಿಗೆ ಇಲಾಖೆ ಅಧಿಕಾರಿಗಳ ಜೊತೆ ಕುಳಿತು ಕೂಲಂಕುಷವಾಗಿ ಚರ್ಚಿಸುತ್ತೇನೆ. ಎಲ್ಲಾ ವಿಷಯಗಳನ್ನು ಚರ್ಚಿಸಿದ ಬಳಿಕವೇ ದರ ಏರಿಕೆ ಬಗ್ಗೆ ನಿರ್ಧಾರ ಎಂದರು.

ಇನ್ನು ಸಿಬ್ಬಂದಿ ವೇತನ, ಡೀಸೆಲ್‌, ಬಿಡಿ ಭಾಗಗಳ ಬೆಲೆಗಳು ಅತೀ ಹೆಚ್ಚಾಗಿರುವುದರಿಂದ ನಿಗಮಗಳು ಆರ್ಥಿಕವಾಗಿ ಸದೃಢವಾಗಿಲ್ಲ. ಹೀಗಾಗಿ ಶೇಕಡಾ 15 ರಿಂದ 20 ರಷ್ಟು ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿವೆ. ಈ ಬಗ್ಗೆ ಕೆಲವೇ ದಿನಗಳಲ್ಲಿ ಸಿಎಂ ಜೊತೆ ಸಭೆ ನಡೆಸಿ ದರ ಹೆಚ್ಚಳ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

3 hours ago

ಓದುಗರ ಪತ್ರ: ನಿಜವಾದ ಭಾವೈಕ್ಯತೆಯ ಸಂಗಮ

ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…

3 hours ago

ಓದುಗರ ಪತ್ರ: ನಾಡಿಗೆ ಮಾದರಿ!

ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…

3 hours ago

ಓದುಗರ ಪತ್ರ: ಪ್ರೀತಿಯ ಅಣ್ಣ ಪ್ರತಾಪ್ ಸಿಂಹ…

ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…

3 hours ago

ದಸರಾ ಬರುತ್ತಿದೆ, ಮೈಸೂರು ಸಿದ್ಧವಾಗುತ್ತಿದೆಯೇ?

ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ  ಮೈಸೂರು ದಸರಾ ಎಂದರೆ ಕೇವಲ ಹತ್ತು…

3 hours ago

ಫಾಲ್ಕೆ ಪ್ರಶಸ್ತಿ ಕಲಾಸೇವೆಗೆ ಸಂದ ಗೌರವ: ಅನಂತ್ ನಾಗ್‌

ಸಂದರ್ಶನ: ಬಾನಾಸು  ಇಂದು ಗುಜರಾತಿನ ಕೆವಾಡಿಯಾದಲ್ಲಿ ೭೨ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ನಡೆಯಲಿದೆ. ಚಿತ್ರರಂಗಕ್ಕೆ ಸಲ್ಲಿಸಿದ ಅಮೋಘ ಸೇವೆಗಾಗಿ…

3 hours ago