ಬೆಂಗಳೂರು: ಖ್ಯಾತ ಉದ್ಯಮಿ ಮತ್ತು ಕಾನ್ಪಿಡೆಂಟ್ ಗ್ರೂಪ್ ಸಂಸ್ಥಾಪಕ ಹಾಗೂ ಅಧ್ಯಕ್ಷರಾಗಿದ್ದ ಸಿ.ಜೆ.ರಾಯ್ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಇಂದು ಸಂಜೆ ಅವರ ಅಂತ್ಯಕ್ರಿಯೆ ನೆರವೇರಲಿದೆ.
ತಮ್ಮ ಆಪ್ತರ ಬಳಿ ಈ ಹಿಂದೆ ವ್ಯಕ್ತಪಡಿಸಿದ್ದ ಇಚ್ಚೆಯಂತೆ ಬನ್ನೇರುಘಟ್ಟದ ಕಾಸಾಗ್ರ್ಯಾಂಡ್‌ನಲ್ಲಿ ಇಂದು ಉದ್ಯಮಿ ಸಿ.ಜೆ.ರಾಯ್ ಅಂತ್ಯಕ್ರಿಯೆ ನೆರವೇರಲಿದೆ.
ಸಿ.ಜೆ.ರಾಯ್ ಅವರು ಐಟಿ ದಾಳಿ ಹಿನ್ನೆಲೆಯಲ್ಲಿ ಮನನೊಂದು ರೂಮಿಗೆ ಹೋಗಿ ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ರಾಯ್ ಸಾವಿಗೆ ಸಂಬಂಧಿಸಿದಂತೆ ಪೊಲೀಸರು ಅನುಮಾನಾಸ್ಪದ ಸಾವು ಕೇಸ್ ದಾಖಲಸಿಕೊಂಡಿದ್ದು, ಪೋಸ್ಟ್ ಮಾರ್ಟ್ಂ ರಿಪೋರ್ಟ್ ಹಾಗೂ ಎಫ್‌ಎಸ್‌ಎಲ್ ವರದಿಗಾಗಿ ಕಾಯುತ್ತಿದ್ದಾರೆ.





