ಬೆಂಗಳೂರು : ವಿಆರ್ ಗ್ರೂಪ್‌ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ವೈಶಾಕ್ ಬಂಧಿತ ಆರೋಪಿ. ಈತ ಪತ್ರದ ಮೂಲಕ ಅರವಿಂದ್ ರೆಡ್ಡಿ ಅವರನ್ನು ಸ್ಯಾಂಡಲ್‌ವುಡ್ ನಟಿಯೊಬ್ಬರ ಜೊತೆಗಿನ ವಿವಾದವನ್ನು ಬಗೆಹರಿಸಿಕೊಳ್ಳುವಂತೆಯೂ, ಇಲ್ಲದಿದ್ದರೆ 6 ರಿಂದ 7 ಕೋಟಿ ರೂಪಾಯಿ ಹಣ ನೀಡಬೇಕೆಂದೂ ಆರೋಪಿ ಬೇಡಿಕೆ ಇಟ್ಟಿದ್ದಾನೆ ಎಂದು ತಿಳಿದುಬಂದಿದೆ. ಈ ಬೆದರಿಕೆ ಪತ್ರವನ್ನು ಬ್ಲೂ ಡಾರ್ಟ್ ಕೊರಿಯರ್ ಮೂಲಕ ಕಳುಹಿಸಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ HAL ಪೊಲೀಸರು ಆರೋಪಿ ವೈಶಾಖ್ ಎಂಬಾತನನ್ನು ಬಂಧಿಸಿದ್ದಾರೆ. ಈತ ಸ್ಯಾಂಡಲ್‌ವುಡ್ ನಟಿ ಕೃಷಿ ತಾಪಂಡಳ ಸ್ನೇಹಿತ ಎಂದು ಹೇಳಲಾಗುತ್ತಿದೆ. ಜನವರಿ ತಿಂಗಳಲ್ಲಿ ಬೆದರಿಕೆ ಪತ್ರ ಬಂದ ಬಳಿಕ ಅರವಿಂದ್ ರೆಡ್ಡಿ ಪೊಲೀಸರಿಗೆ ದೂರು ನೀಡಿದ್ದರು. ತನಿಖೆಯ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ಹಿಂದೆಯೇ ಅರವಿಂದ್ ರೆಡ್ಡಿ ಅವರ ಮೇಲೆ ಸ್ಯಾಂಡಲ್‌ವುಡ್ ನಟಿಯೊಬ್ಬರು ಲೈಂಗಿಕ ಕಿರುಕುಳ, ಹಿಂಬಾಲಿಸುವಿಕೆ ಹಾಗೂ ಬೆದರಿಕೆ ಆರೋಪಗಳನ್ನು ಮಾಡಿದ್ದರು. ಆ ಪ್ರಕರಣದಲ್ಲಿ ಅವರು ಬಂಧನಕ್ಕೊಳಗಾಗಿ ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಈಗ ಇನ್ನೊಂದು ಬೆದರಿಕೆ ಪ್ರಕರಣದಲ್ಲಿ ಆರೋಪಿ ಬಂಧನವಾಗಿರುವುದು ಗಮನಾರ್ಹವಾಗಿದೆ.
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…