ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು, ಇದೀಗ ಆಶ್ರಯ ನೀಡಿದ್ದ ಉದ್ಯಮಿಯನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಂಗಳೂರು ಮೂಲದ ಉದ್ಯಮಿ ಮೈಕಲ್ ಎಂಬುವವರನ್ನು ಪೊಲೀಸ್ ವಶಕ್ಕೆ ಪಡೆದಿದ್ದಾರೆ. ರಾಜೀವ್ ಗೌಡ ಜೊತೆಗೆ ಉದ್ಯಮಿ ಮೈಕಲ್ ಕೂಡ ಬಂಧನವಾಗಿದ್ದು, ಚಿಕ್ಕಬಳ್ಳಾಪುರದ ಪೊಲೀಸ್ ವಸತಿಗೃಹಗಳ ಇಬ್ಬರನ್ನೂ ವಿಚಾರಣೆಗೆ ಒಳಪಡಿಸಲಾಗಿದೆ ಎನ್ನಲಾಗಿದೆ.
ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾ ಗೌಡ ಎಂಬುವವರಿಗೆ ಬ್ಯಾನರ್ ತೆರವು ಮಾಡಿದ್ದಕ್ಕೆ ರಾಜೀವ್ ಗೌಡ ಧಮ್ಕಿ ಹಾಕಿದ್ದು, ಜನವರಿ.14ರಂದು ಪ್ರಕರಣ ದಾಖಲಾಗಿತ್ತು. ಬಂಧನದ ಭೀತಿಯಲ್ಲಿದ್ದ ರಾಜೀವ್ ಗೌಡ ತಲೆಮರೆಸಿಕೊಂಡಿದ್ದರು.





