ರಾಜ್ಯ

ರಾಜೀವ್‌ ಗೌಡಗೆ ಆಶ್ರಯ ನೀಡಿದ ಉದ್ಯಮಿಯೂ ಪೊಲೀಸರ ವಶಕ್ಕೆ

ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು, ಇದೀಗ ಆಶ್ರಯ ನೀಡಿದ್ದ ಉದ್ಯಮಿಯನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಂಗಳೂರು ಮೂಲದ ಉದ್ಯಮಿ ಮೈಕಲ್‌ ಎಂಬುವವರನ್ನು ಪೊಲೀಸ್‌ ವಶಕ್ಕೆ ಪಡೆದಿದ್ದಾರೆ. ರಾಜೀವ್‌ ಗೌಡ ಜೊತೆಗೆ ಉದ್ಯಮಿ ಮೈಕಲ್‌ ಕೂಡ ಬಂಧನವಾಗಿದ್ದು, ಚಿಕ್ಕಬಳ್ಳಾಪುರದ ಪೊಲೀಸ್‌ ವಸತಿಗೃಹಗಳ ಇಬ್ಬರನ್ನೂ ವಿಚಾರಣೆಗೆ ಒಳಪಡಿಸಲಾಗಿದೆ ಎನ್ನಲಾಗಿದೆ.

ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾ ಗೌಡ ಎಂಬುವವರಿಗೆ ಬ್ಯಾನರ್‌ ತೆರವು ಮಾಡಿದ್ದಕ್ಕೆ ರಾಜೀವ್‌ ಗೌಡ ಧಮ್ಕಿ ಹಾಕಿದ್ದು, ಜನವರಿ.14ರಂದು ಪ್ರಕರಣ ದಾಖಲಾಗಿತ್ತು. ಬಂಧನದ ಭೀತಿಯಲ್ಲಿದ್ದ ರಾಜೀವ್‌ ಗೌಡ ತಲೆಮರೆಸಿಕೊಂಡಿದ್ದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಂಡ್ಯ: ಯುವಕನ ಮೇಲೆ ಮಾರಣಾಂತಿಕ ಹಲ್ಲೆ: ಗ್ರಾಮಸ್ಥರಿಂದ ದೂರು

ಮಂಡ್ಯ: ಯುಗಾದಿ ಹಬ್ಬದ ದಿನ ಪಚ್ಚಿ ಆಟವಾಡುತ್ತಿದ್ದ ನೂರಾರು ಮಂದಿ ಮೇಲೆ ದಾಳಿ ನಡೆಸಿದ್ದೂ ಅಲ್ಲದೆ ಯುವಕನ ಮೇಲೆ ಮಾರಣಾಂತಿಕ…

22 seconds ago

ನಂಜನಗೂಡಿನಲ್ಲಿ 46 ಮರಗಳ ಹನನ: ಯಶಸ್ವಿಯಾಗಿ ನಡೆದ ಪ್ರತಿಭಟನೆ

ನಂಜನಗೂಡು: ದಿನಾಂಕ 7-3-26 ರಂದು ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ ದಂಡೆಯ ಮೇಲೆ 46 ಬೃಹತ್ ಮರಗಳನ್ನು…

4 mins ago

ಇರಾನ್‌ ಯುದ್ಧ: 5 ದಿನಗಳ ಕದನ ವಿರಾಮ ಘೋಷಣೆ ಮಾಡಿದ ಟ್ರಂಪ್‌

ವಾಷಿಂಗ್ಟನ್:‌ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಐದು ದಿನಗಳ ಕಾಲ ಕದನ ವಿರಾಮ ಘೋಷಣೆ ಮಾಡಿದ್ದಾರೆ. ಅಮೇರಿಕಾ ಅಧ್ಯಕ್ಷ ಟ್ರಂಪ್‌…

14 mins ago

ಇರಾನ್-ಇಸ್ರೇಲ್‌ ಸಂಘರ್ಷದ ಎಫೆಕ್ಟ್:‌ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಭಾರೀ ಕುಸಿತ

ಬೆಂಗಳೂರು: ಇಸ್ರೇಲ್-ಇರಾನ್ ನಡುವಿನ ಯುದ್ಧ ಪರಿಸ್ಥಿತಿಯಿಂದಾಗಿ ಚಿನ್ನ ಮತ್ತು ಬೆಳ್ಳಿ ದರಗಳ ಸತತ ಕುಸಿತ ಮುಂದುವರೆದಿದೆ. ಇಂದೂ ಕೂಡ ಚಿನ್ನ,…

34 mins ago

ಮುಂದುವರಿದ ಇರಾನ್-ಇಸ್ರೇಲ್‌ ಸಂಘರ್ಷ: ಸಿಲಿಂಡರ್‌ ಪೂರೈಕೆ ವ್ಯತ್ಯಯ ಆಗದಂತೆ ಕ್ರಮ ಎಂದ ಪ್ರಧಾನಿ ಮೋದಿ

ನವದೆಹಲಿ: ಇರಾನ್‌-ಇಸ್ರೇಲ್‌ ಸಂಘರ್ಷದಿಂದಾಗಿ ಪಶ್ಚಿಮ ಏಷ್ಯಾದಲ್ಲಿ ರಾಷ್ಟ್ರಗಳ ಸ್ಥಿತಿ ಚಿಂತಾಜನಕವಾಗಿದೆ. ಯುದ್ಧದಿಂದ ಭಾರತದ ಮೇಲೆ ಪರಿಣಾಮ ಬೀರಿದೆ ಎಂದು ಪ್ರಧಾನಿ…

1 hour ago

ಯುದ್ಧದ ಖರ್ಚು ನಿಭಾಯಿಸಲು ಹೊಸ ದಾರಿ ಹುಡುಕಿದ ಇರಾನ್: ವ್ಯಾಪಾರಿ ಹಡಗುಗಳಿಗೆ ಶುಲ್ಕ

ಟೆಹರಾನ್:‌ ಯುದ್ಧದ ಖರ್ಚು ನಿಭಾಯಿಸಲು ಸಂಚಾರ ಮಾಡುವ ವ್ಯಾಪಾರಿ ಹಡಗುಗಳಿಗೆ ಶುಲ್ಕ ವಿಧಿಸಲು ಇರಾನ್ ನಿರ್ಧರಿಸಿದೆ. ಹಾರ್ಮುಜ್ ಜಲಸಂಧಿ ಮೂಲಕ…

1 hour ago