ರಾಜ್ಯ

ಒಂದು ಖರೀದಿಸಿದರೆ ಮತ್ತೊಂದು ಫ್ರೀʼ: ಇದೇ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಎಂದ ವಿಜಯೇಂದ್ರ

ಬೆಂಗಳೂರು: ಬಸ್‌ ಪ್ರಯಾಣ ದರವನ್ನು ಶೇಕಡಾ 15ರಷ್ಟು ಹೆಚ್ಚಿಸುವ ಮೂಲಕ ಸಾರಿಗೆ ವ್ಯವಸ್ಥೆ ಆಶ್ರಯಿಸಿರುವ ರಾಜ್ಯದ ಜನತೆಗೆ ಆಘಾತ ತಂದಿದ್ದೀರಿ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಾಂಗ್ರೆಸ್‌ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಸಮಾಜಿಕ ಜಾಲತಾಣ ʼಎಕ್ಸ್‌ʼ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ರಾಜ್ಯದ ಜನತೆಗೆ ಪಂಚಭಾಗ್ಯ ಗ್ಯಾರಂಟಿ ಯೋಜನೆಗಳನ್ನು ನೀಡಿದ್ದೇವೆ ಎಂದು ಹೇಳುತ್ತೀರಾ. ಆದರೆ ಶಕ್ತಿ ಯೋಜನೆಗೆ ಹಣ ಒದಗಿಸಲು ವಿಫಲವಾಗಿರುವ ನೀವು ಸಾರಿಗೆ ಸಂಸ್ಥೆ ನಷ್ಟದ ಹಾದಿ ತುಳಿಯಲು ಕಾರಣರಾಗಿದ್ದೀರಿ ಎಂದು ಆರೋಪಿಸಿದ್ದಾರೆ.

ನಿಮ್ಮ ಈ ಗ್ಯಾರಂಟಿ ಯೋಜನೆಗಳು ವಾಣಿಜ್ಯ ಉತ್ಪನ್ನಗಳ ಮಾರಾಟದ ಮಳಿಗೆಗಳಲ್ಲಿ ಒಂದು ಖರೀದಿಸಿದರೆ ಮತ್ತೊಂದು ಫ್ರೀ ಎನ್ನುವ ಆಗಿದೆ. ಒಂದನ್ನು ಕೊಡುವುದು ಇನ್ನೊಂದರಲ್ಲಿ ಕಿತ್ತುಕೊಳ್ಳುವುದು ಎಂದು ವ್ಯಂಗ್ಯವಾಡಿದ್ದಾರೆ.

ಶೇಕಡಾ.15 ರಷ್ಟು ಬಸ್‌ ಪ್ರಯಾಣ ದರ ಹೆಚ್ಚಿಸುವ ಮೂಲಕ ʼಮಹಿಳೆಯರಿಗೆ ಉಚಿತ. ಪುರುಷರಿಗೆ ಅದರ ಹೊರೆ ಖಚಿತʼ ಎನ್ನುವ ಹಾಗೆ ಮಾಡಿದ್ದೀರಾ. ಇದನ್ನು ವಿರೋಧಿಸಿ ಬಿಜೆಪಿ ಜನರ ಪರ ಧ್ವನಿ ಎತ್ತಲಿದೆ ಎಂದು ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಸ್‌ ಪ್ರಯಾಣ ದರ ಏರಿಕೆಯ ಪ್ರಸ್ತಾಪವನ್ನು ಇಲ್ಲಿಗೆ ಕೈ ಬಿಡಬೇಕು. ಇದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಲಿದೆ. ಯಾವುದೇ ಕಾರಣಕ್ಕೂ ಬಸ್‌ ಪ್ರಯಾಣ ದರ ಏರಿಕೆ ಮಾಡಬಾರದು ಎಂದು ಆಗ್ರಹಿಸಿದರು. ಒಂದು ವೇಳೆ ಪ್ರಯಾಣ ದರ ಏರಿಕೆ ಮಾಡಿದರೆ ಸರ್ಕಾರದ ವಿರುದ್ಧ ನಮ್ಮ ಪ್ರತಿಭಟನೆ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿದ ಆರ್.‌ಅಶೋಕ್‌

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…

3 hours ago

ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಸರ್ಕಾರ

ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…

4 hours ago

ರಾಜ್ಯದಲ್ಲಿ ಕೈಕೊಟ್ಟ ಮುಂಗಾರು: ಸಂಕಷ್ಟದತ್ತ ಕೃಷಿ ವಲಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…

4 hours ago

ಮಳೆ ಕೈಕೊಟ್ಟಿದ್ದಕ್ಕೆ ರಾಜ್ಯದಲ್ಲಿ ತಾಪಮಾನ ಏರಿಕೆ – ಮಳೆಗಾಲದಲ್ಲೇ ಬೇಸಿಗೆಯಂತಹ ಬಿಸಿಲು

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…

4 hours ago

SIR ನೋಟಿಸ್: ವಿಚಾರಣೆಗೆ ತೆರಳುವಾಗ ಈ ದಾಖಲೆಗಳು ನಿಮ್ಮ ಬಳಿ ಇರಲಿ

ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…

6 hours ago

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

11 hours ago